CHITRADURGA NEWS | 16 APRIL 2025
ಹೊಳಲ್ಕೆರೆ: ಖಾಸಗಿ ಬಸ್ಸಿನಲ್ಲಿ ನಿರ್ವಾಹಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ರಾಮಘಟ್ಟ ಬಳಿ ನಿರ್ಜನ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ರಾಮಘಟ್ಟ ಗ್ರಾಮದ ಆಶಾ(26) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ನಿರುದ್ಯೋಗಿಗಳಿಗೆ ಉದ್ಯೋಗ | ನೇರ ನೇಮಕಾತಿ ಸಂದರ್ಶನ ಏ.19ಕ್ಕೆ
ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಏ.15 ರಂದು ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಚಿಕ್ಕಜಾಜೂರು ಹಾಗೂ ಹೊಳಲ್ಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆ ಆರೋಪಿ ಬಂಧನ:
ಆಶಾ ಕೊಲೆ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಬಂಧನಕ್ಕೆ ಎಸ್ಪಿ ರಂಜಿತ್ಕುಮಾರ್ ಬಂಡಾರು ಮೂರು ತಂಡಗಳನ್ನು ರಚಿಸಿದ್ದರು.
ಇದನ್ನೂ ಓದಿ: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಪರಿಶೀಲನೆ | ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ)
ಕೊಡಗವಳ್ಳಿ ಗ್ರಾಮದ ಮಂಜುನಾಥ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
