ಮುಖ್ಯ ಸುದ್ದಿ
ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್

CHITRADURGA NEWS | 23 APRIL 2025
ಚಿತ್ರದುರ್ಗ: ಚಿತ್ರದುರ್ಗ ಮೆಡಿಕಲ್ ಕಾಲೇಜು ನೇಮಕಾತಿಯಲ್ಲಿ ಮಾನದಂಡಗಳನ್ನು ಗಾಳಿಗೆ ತೂರಿ ಲಕ್ಷಾಂತರ ರೂ.ಗಳ ಅವ್ಯವಹಾರವಾಗಿರುವುದು ತನಿಖೆಯಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.
Also Read: ಸಿರಿಗೆರೆಯಲ್ಲಿ ಏ.25 ರಂದು ಕನ್ನಡ ಕರಡು ತಿದ್ದುವ ಕಾರ್ಯಾಗಾರ
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಚಿತ್ರದುರ್ಗಕ್ಕೆ ಆಗಮಿಸಿ ನೇಮಕಾತಿಯಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ಗಮನ ಕೊಡಬೇಕು.
ಕೆ.ಡಿ.ಪಿ.ಸಭೆಯಲ್ಲಿ ಇಂತಹ ವಿಷಯಗಳು ಚರ್ಚೆಗೆ ಬರುವುದಿಲ್ಲ. 2013 ರಲ್ಲಿ ಮೆಡಿಕಲ್ ಕಾಲೇಜು ಮಂಜೂರಾಗಿದ್ದು, 2025 ರಲ್ಲಿ ಆರಂಭಗೊಂಡಿದೆ. ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.
ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ನಡೆಸಿರುವ ದಾಳಿಯಲ್ಲಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ನಾವುಗಳು ಖಂಡಿಸುತ್ತೇವೆ.
Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ದುಷ್ಟಕೂಟಕ್ಕೆ ನಮ್ಮ ದೇಶದ ಪ್ರಧಾನಿ ಮೋದಿರವರು ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ. ದಾಳಿಯಲ್ಲಿ ಬಲಿಯಾದವರಿಗೆ ಸಂಜೆ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕ್ಯಾಂಡಲ್ ಮೆರವಣಿಗೆ ನಡೆಸಲಾಗುವುದು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಯಾತ್ರೆ ಏ.25 ರಂದು ಬೆಳಿಗ್ಗೆ 11 ಕ್ಕೆ ಚಿತ್ರದುರ್ಗ ಪ್ರವೇಶಿಸಬೇಕಿತ್ತು ಆದರೆ ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರು ನಡೆಸಿರುವ ದಾಳಿಗೆ 26 ಮಂದಿ ಬಲಿಯಾಗಿದ್ದು, ಕರ್ನಾಟಕದ ಇಬ್ಬರ ಮೃತದೇಹಗಳು ರಾಜ್ಯಕ್ಕೆ ಬರುತ್ತಿರುವುದರಿಂದ ಶೋಕ ವ್ಯಕ್ತಪಡಿಸುವುದಕ್ಕಾಗಿ ಜನಾಕ್ರೋಶ ಯಾತ್ರೆಯನ್ನು ಮುಂದೂಡಿರುವುದಾಗಿ ತಿಳಿಸಿದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಭಾರತದ ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಬಲಿಯಾಗಿರುವುದು ಅತ್ಯಂತ ಖಂಡನೀಯ. ಈ ವಿಚಾರದಲ್ಲಿ ಯಾವ ಪಕ್ಷಗಳು ರಾಜಕಾರಣ ಮಾಡಬಾರದು. ದೇಶದ ಐಕ್ಯತೆ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು. ಪುಲ್ವಾಮಾ ದಾಳಿ ನಡೆದಾಗ ಅದಕ್ಕೆ ಪ್ರತಿಯಾಗಿ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲಾ ಎಂದು ವಿರೋಧ ಪಕ್ಷದವರು ಗೇಲಿ ಮಾಡಿದ್ದುಂಟು. ಒಟ್ಟಾರೆ ಪಹಲ್ಗಾಮ್ ದಾಳಿಗೆ ರಾಜಕೀಯ ಬಣ್ಣ ಹಚ್ಚುವುದು ಬೇಡ ಎಂದರು.
Also Read: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ
ಸುದ್ದಿಗೊಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್, ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಕರ್ನಾಟಕ ರಾಜ್ಯ ರೈತ ಮೋರ್ಚ ಕಾರ್ಯದರ್ಶಿ ಮಲ್ಲಿಕಾರ್ಜುನ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್ ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ ಇದ್ದರು.
