CHITRADURGA NEWS | 26 APRIL 2025
ಚಿತ್ರದುರ್ಗ: ಕೃಷಿ ಕೋಟಾದಡಿ, ರಾಜ್ಯದ ಕೃಷಿ ಹಾಗೂ ಸಂಬಂಧಿತ ವಿಶ್ವ ವಿದ್ಯಾನಿಲಯಗಳಿಗೆ ಪ್ರಸ್ತುತ ಸಾಲಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಉದ್ದೇಶಿತ ಕೃಷಿ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ಮೇ 5 ಮತ್ತು 6 ರಂದು ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಏರ್ಪಡಿಸಿದ್ದು, ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
Also Read: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲವೆಂದು ಬಾಲಕಿ ಆತ್ಮಹತ್ಯೆ
ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನಗಾರಿಕೆ, ಅರಣ್ಯ, ರೇಷ್ಮೆ, ಹಣ್ಣು, ತರಕಾರಿ, ಬಿತ್ತನೆ ಬೀಜ, ಆಹಾರಧಾನ್ಯ, ಕೃಷಿ ಪರಿಕರಗಳ ಬಗ್ಗೆ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಲ್ಲಿ ಪರಿಚಯಿಸಲಾಗುತ್ತದೆ.
ಕರ್ನಾಟಕ ರಾಜ್ಯದ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವ ವಿದ್ಯಾಲಯಗಳಲ್ಲಿ ಸ್ನಾತಕ ಪದವಿಗಳ ದಾಖಲಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಮೇ 2 ರೊಳಗೆ ಸಂಸ್ಥೆಯ ಕಛೇರಿಯಲ್ಲಿ ರೂ. 600 ನಗದು ಪಾವತಿಸಬೇಕು ಅಥವಾ 9742455666 ಈ ಮೊಬೈಲ್ ನಂಬರ್ ಗೆ ಫೋನ್ ಪೇ ಮೂಲಕ ಪಾವತಿಸಿ ಹೆಸರು ನೊಂದಾಯಿಸಿಕೊಳ್ಳಬಹುದು.
Also Read: ಪುರಸಭೆ ಮುಖ್ಯಾಧಿಕಾರಿ ಸಾವು | ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಿಮ್ಮರಾಜು | ಜಿಲ್ಲಾಸ್ಪತ್ರೆಯಲ್ಲಿ ಮೃತ
ಹೆಚ್ಚಿನ ಮಾಹಿತಿಗೆ ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ : 9742455666, ಖಜಾಂಚಿ : 9448656231 ಸಂಖ್ಯೆ ಗೆ ಸಂಪರ್ಕಿಸಲು ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಜಿ.ಸಿ. ರಂಗಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
