
CHITRADURGA NEWS | 08 JUNE 2025
ಚಿತ್ರದುರ್ಗ: ಚಿತ್ರದುರ್ಗ ವೀರಶೈವ ಸಮಾಜದಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಾರ್ಯದರ್ಶಿಗಳಾದ ಪಿ.ವೀರೇಂದ್ರಕುಮಾರ್ ತಿಳಿಸಿದ್ದಾರೆ.
Also Read: ಈ ರೀತಿಯ ಚರ್ಮಕ್ಕೆ ಹೆಚ್ಚು ಸ್ಕ್ರಬ್ ಬಳಸಬೇಡಿ
2024-25ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶೇ.90 ಮೇಲ್ಪಟ್ಟು ಅಂಕಗಳಿಸಿದ ಚಿತ್ರದುರ್ಗ ಜಿಲ್ಲೆಯ ವೀರಶೈವ/ ಲಿಂಗಾಯಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ವೀರಶೈವ ಸಮಾಜವು ತೀರ್ಮಾನಿಸಿದೆ.
ತಾವು ಅಭ್ಯಾಸ ಮಾಡಿದ ಪ್ರೌಢಶಾಲೆ/ಕಾಲೇಜು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರಿAದ ದೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ದೃಢೀಕರಣ ಪತ್ರದೊಂದಿಗೆ 30-06-2025 ರೊಳಗಾಗಿ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿರುವ ವೀರಶೈವ ಸಮಾಜದ ಕಛೇರಿಗೆ ಅರ್ಜಿ ಸಲ್ಲಿಸಲು ವೀರಶೈವ ಸಮಾಜದ ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್ ತಿಳಿಸಿರುತ್ತಾರೆ.
Also Read: ಮಗು ತರಕಾರಿಗಳನ್ನು ತಿನ್ನುತ್ತಿಲ್ಲವಾದರೆ ಈ ಟ್ರಿಕ್ ಪ್ರಯತ್ನಿಸಿ
ಹೆಚ್ಚಿನ ಮಾಹಿತಿಗಾಗಿ 9986295285, 9449022069 ಸಂಪರ್ಕ ಮಾಡಬಹುದಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
