CHITRADURGA NEWS | 20 JUNE 2025
ಚಿತ್ರದುರ್ಗ: ನಿವೃತ್ತ ಕೆಇಬಿ ಇಂಜಿನಿಯರ್ ಟಿ.ಜಿ.ರಾಜಶೇಖರಪ್ಪ(94) ಭೀಮಸಮುದ್ರದ ನಿವಾಸದಲ್ಲಿ ಶುಕ್ರವಾರ(ಇಂದು) ಸಂಜೆ 4 ಗಂಟೆಗೆ ನಿಧನರಾಗಿದ್ದಾರೆ.
ಕೆಇಬಿ ಚಿತ್ರದುರ್ಗ ವಿಭಾಗದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದ ಟಿ.ಜಿ.ರಾಜಶೇಖರಪ್ಪ ಅವರು ಭೀಮಸಮುದ್ರದಲ್ಲಿ ನೆಲೆಸಿದ್ದರು.
ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ
ಜೂನ್ 21 ಶನಿವಾರ ಬೆಳಗ್ಗೆ 11 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನ ೧೨ ಗಂಟೆಗೆ ಭೀಮಸಮುದ್ರದ ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಧಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ರಾಜಶೇಖರಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
