By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Dr.Yuvaraj
    ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
    7 hours ago
    Training Workshop on Tuberculosis Detection in Children
    2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
    17 hours ago
    Mahatma Gandhiji and Lal Bahadur Shastriji's Birth Anniversaries at SJM Polytechnic College
    ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
    19 hours ago
    Mahatma Gandhi, Lal Bahadur Shastri Jayanti
    ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
    19 hours ago
    ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗೆ ಮತ್ತಷ್ಟು ಬಲ | 18 ವೈದ್ಯರ ನೇಮಕ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    7 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    8 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    7 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    7 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    6 hours ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    7 hours ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    1 day ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    1 day ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    2 days ago
Reading: ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ

News Desk Chitradurga News
Last updated: 21 June 2025 20:08
News Desk Chitradurga News
1 year ago
Share
ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ
SHARE

CHITRADURGA NEWS | 21 JUNE 2025

ಚಿತ್ರದುರ್ಗ: ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗಿ 20 ವರ್ಷಗಳು ಸಂದಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲು ನಿಗದಿಪಡಿಸಿದ್ದ ಶುಲ್ಕಗಳ ಪರಿಷ್ಕರಣೆ ಮಾಡುವಂತೆ ವಿಜಯಭಾಸ್ಕರ್ ಅಧ್ಯಕ್ಷತೆಯ ಆಡಳಿತ ಸುಧಾರಣಾ ಸಮಿತಿ ಶಿಫಾರಸು ಮಾಡಿದ್ದು, ಈ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದರು.

Also Read: ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಮಾಹಿತಿ ಹಕ್ಕು ಕಾಯ್ದೆ ಅನುಷ್ಠಾನ ಕುರಿತು, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಮೊದಲ ಹಂತ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳಿಗೆ ಆಯೋಜಿಸಲಾದ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಸದ್ಯ ಮಾಹಿತಿ ಅರ್ಜಿಯ ಜೊತೆ ರೂ.10 ಶುಲ್ಕವನ್ನು ನೀಡಬೇಕಾಗಿದ್ದು, ಇದನ್ನು ರೂ.25ಕ್ಕೆ ಹೆಚ್ಚಿಸಲು ಹಾಗೂ ಪ್ರತಿ ಪುಟದ ದಾಖಲೆ ನೀಡಬೇಕಾದ ರೂ.2 ಶುಲ್ಕವನ್ನು ರೂ.5ಕ್ಕೆ ಹೆಚ್ಚಿಸಲು ಕೂಡ ಆಡಳಿತ ಸುಧಾರಣಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸಿ.ಡಿ ಉಪಯೋಗ ಬಳಕೆಯಲ್ಲಿ ಇಲ್ಲದಿರುವುದರಿಂದ, ಇದರ ಹೊರತಾಗಿ ಪೆನ್‍ಡ್ರೈನ್ ಮೂಲಕ ನೀಡುವ ಮಾಹಿತಿಗೆ ಹೊಸದೊಂದು ಶುಲ್ಕ ನಿಗದಿ ಪಡಿಸಲು ಚಿಂತನೆ ನಡೆಸಲಾಗಿದೆ.

ಬಡತನ ರೇಖೆಗಿಂತ ಕಡಿಮೆ ಇರುವ ಬಿಪಿಲ್ ಕಾರ್ಡುದಾರರು 100 ಪುಟದವರೆಗೆ ಮಾಹಿತಿ ಪಡೆಯಲು ಯಾವುದು ಶುಲ್ಕ ನೀಡುವಂತಿಲ್ಲ. ಆದರೆ, ಮಾಹಿತಿಗೆ ಅರ್ಜಿ ಸಲ್ಲಿಸುವಾಗ, ಬಿಪಿಎಲ್ ಕಾರ್ಡ್ ಜೆರಾಕ್ಸ್ ಹಾಗೂ ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ ಮೂಲ ಪ್ರತಿ ಲಗತ್ತಿಸಬೇಕು ಎಂದರು.

Also Read: ನಾಳೆ ವಿದ್ಯುತ್ ವ್ಯತ್ಯಯ 

ಕರ್ನಾಟಕ ಮಾಹಿತಿ ಆಯೋಗಕ್ಕೆ ಹೊಸದಾಗಿ ರಾಜ್ಯ ಮಾಹಿತಿ ಆಯುಕ್ತರ ನೇಮಕವಾದ ನಂತರ ರಾಜ್ಯ ಮಾಹಿತಿ ಆಯೋಗದ ಮುಂದೆ ಬಾಕಿ ಇದ್ದ 50,000ಕ್ಕೂ ಅಧಿಕ ಮೇಲ್ಮನವಿ ಪ್ರಕಣಗಳ ಪೈಕಿ, ಕಳೆದ ಮಾರ್ಚ್‍ನಿಂದ ಇಲ್ಲಿಯವರೆಗೂ 8000 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ 787 ಮೇಲ್ಮನವಿ ಪ್ರಕರಣಗಳು ರಾಜ್ಯ ಮಾಹಿತಿ ಆಯೋಗದ ಮುಂದಿವೆ. ಇದರಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಂಬಂಧಿಸಿದಂತೆ 325, ಕಂದಾಯ 117, ಅರಣ್ಯ 55, ಸಮಾಜ ಕಲ್ಯಾಣ 53, ನಗರಾಭಿವೃದ್ಧಿ ಇಲಾಖೆ 46, ಜಲಸಂಪನ್ಮೂಲ 28 ಹಾಗೂ ಗೃಹ ಇಲಾಖೆಗೆ ಸಂಬಂಧಿಸಿದಂತೆ 19 ಮೇಲ್ಮನವಿ ಪ್ರಕರಣಗಳು ಇವೆ.

ಹಣಕಾಸು, ಸಾರಿಗೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಸಂಬಂಧಿಸಿದಂತೆ ತಲಾ ಒಂದು ಪ್ರಕರಣಗಳಿವೆ. ಉಳಿದಂತೆ ಇತರೆ ಇಲಾಖೆ ಹಾಗೂ ಸರ್ಕಾರದ ಅನುದಾನಿತ ಸಂಸ್ಥೆಗಳಿಗೆ ಸಂಬಂಧಿಸಿದಂತೆ 141 ಮೇಲ್ಮನವಿ ಪ್ರಕರಣಗಳು ಇವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಏಪ್ರಿಲ್ ಮಾಹೆಯಿಂದ ಜೂನ್ ಮಾಹೆವರೆಗೆ 1061 ಮಾಹಿತಿ ಹಕ್ಕು ಅರ್ಜಿಗಳು ಸಲ್ಲಿಕೆಯಾಗಿವೆ. ಚಿತ್ರದುರ್ಗ ಜಿಲ್ಲೆಯ ಮಾಹಿತಿ ಅಧಿಕಾರಿಗಳ ಕಾರ್ಯ ತೃಪ್ತಿದಾಯಕವಾಗಿದೆ ಎಂದು ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ತಿಳಿಸಿದರು.

ರಾಜ್ಯದಲ್ಲಿ 26 ಜನರು ಕಪ್ಪು ಪಟ್ಟಿಗೆ:

ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೇ, ಅಧಿಕಾರಿಗಳನ್ನು ಬೆದರಿಸಲು ಹಾಗೂ ತೊಂದರೆ ನೀಡಲು ಮಾಹಿತಿ ಅರ್ಜಿ ಸಲ್ಲಿಸುತ್ತಿದ್ದ 26 ಜನರನ್ನು ರಾಜ್ಯ ಮಾಹಿತಿ ಆಯೋಗ ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಇದರಲ್ಲಿ ಚಿತ್ರದುರ್ಗ ಜಿಲ್ಲೆಯ ಒರ್ವ ವ್ಯಕ್ತಿಯು ಕಪ್ಪು ಪಟ್ಟಿಗೆ ಸೇರಿದ್ದಾನೆ. ಅಧಿಕಾರಿಗಳು ಮಾಹಿತಿ ನೀಡದಿದ್ದಾಗ ಅಥವಾ ಅರ್ಜಿದಾರರೊಂದಿಗೆ ಮಾತುಕತೆ ನಡೆಸಲು ಮುಂದಾಗ ಮಾತ್ರ ಬೆದರಿಸುವವರು ಹುಟ್ಟಿಕೊಳ್ಳುತ್ತಾರೆ. ಅಧಿಕಾರಿಗಳು ವಿಳಂಬ ಮಾಡದೇ ಕಾಲಮಿತಿಯಲ್ಲಿ ಮಾಹಿತಿ ನೀಡಬೇಕು. ಜಿಲ್ಲಾ ಪಂಚಾಯಿತಿಯ ಪ್ರತಿ ತ್ರೈಮಾಸಿಕ ಕೆಡಿಪಿ ಸಭೆಗಳಲ್ಲಿ ಜನಪ್ರತಿನಿಧಿಗಳು ಮಾಹಿತಿ ಹಕ್ಕು ವಿಷಯವನ್ನು ಚರ್ಚಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ತಿಳಿಸಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿದೆ. ಅರ್ಜಿಗಳು ಸ್ವೀಕಾರವಾದ ತಕ್ಷಣ ಅವರಿಗೆ ಗೊಂದಲ ಉಂಟಾಗುತ್ತಿದೆ. ಇದನ್ನು ನಿವಾರಿಸಲು ಅಧಿಕಾರಿಗಳು ಕಾಯ್ದೆಯ ಬಗ್ಗೆ ಅಧ್ಯಯನ ನಡೆಸಬೇಕು. ಕಾಯ್ದೆಯ ಜಾರಿಯ ಮೂಲ ಉದ್ದೇಶ ಸಾರ್ವಜನಿಕ ಆಡಳಿತದಲ್ಲಿ ಪಾದರ್ಶಕತೆ ತರುವುದು, ಅಧಿಕಾರಿಗಳ ಜವಾಬ್ದಾರಿ ಹೆಚ್ಚಿಸಿ, ಕೆಲಸಗಳಿಗೆ ಹೊಣೆಗಾರರನ್ನಾಗಿ ಮಾಡಿ ಉತ್ತಮ ಆಡಳಿತ ನೀಡುವುದಾಗಿದೆ ಎಂದು ಮಾಹಿತಿ ಆಯುಕ್ತ ಎಸ್.ರಾಜಶೇಖರ್ ತಿಳಿಸಿದರು.

ಸ್ವಾತಂತ್ರ್ಯದ ತರುವಾಯ ಸಾರ್ವಜನಿಕರಿಗೆ ಆಡಳಿತದ ವಿಷಯಗಳನ್ನು ತಿಳಿದುಕೊಳ್ಳಲು ಮಾಹಿತಿ ಹಕ್ಕು ಕಾಯ್ದೆ ಅಧಿಕಾರ ನೀಡಿದೆ. ಇದರ ಸದ್ಭಳಕೆಯಾಗಬೇಕು. ಯಾವುದೇ ರೀತಿಯ ವೈಯಕ್ತಿಕ ಮಾಹಿತಿಗಳನ್ನು ಕಾಯ್ದೆಯಡಿ ಮೂರನೇ ವ್ಯಕ್ತಿಗೆ ನೀಡಲು ಬರುವುದಿಲ್ಲ. 2005ರಲ್ಲಿ ಕಾಯ್ದೆ ಜಾರಿಯಾಗಿದ್ದು, ಅದಕ್ಕೂ ಮುಂಚಿನ 20 ವರ್ಷ ಅವಧಿಯ ದಾಖಲೆಗಳನ್ನು ಮಾತ್ರ ಕಾಯ್ದೆಯ ಮೂಲಕ ಸಾರ್ವಜನಿಕರು ಪಡೆದುಕೊಳ್ಳಬಹುದು. ನೂರಾರು ವರ್ಷಗಳ ಹಿಂದಿನ ದಾಖಲೆ ನೀಡಲು ಕಾಯ್ದೆಯಲ್ಲಿ ಕಡ್ಡಾಯ ಪಡಿಸಲಾಗಿಲ್ಲ ಎಂದು ಮಾಹಿತಿ ಆಯುಕ್ತ ಎಸ್.ರಾಜಶೇಖರ್ ಸಂವಾದದಲ್ಲಿ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಪಿಡಿಓಗಳಿಗೆ ಮಾಹಿತಿ ಕಾಯ್ದೆ ಕುರಿತು ಕಾರ್ಯಗಾರ ಏರ್ಪಡಿಸಲಾಗುವುದು ಎಂದು ತಿಳಿಸಿದರು.

Also Read: ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅಧಿಕಾರಿಗಳು ಲಭ್ಯ ಇರುವ ಮಾಹಿತಿಯನ್ನು ಮಾತ್ರ ಸಾರ್ವಜನಿಕರಿಗೆ ನೀಡಬೇಕು. ಪ್ರಥಮ ಮೇಲ್ಮನವಿ ಪ್ರಾಧಿಕಾರ ಅಧಿಕಾರಿಗಳು ನೀಡುವ ಆದೇಶವನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಎಂದರು.

ಕಾರ್ಯಗಾರ ಹಾಗೂ ಸಂವಾದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಂಗಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CaseChitradurgaChitradurga newsChitradurga UpdatesKannada Latest NewsKannada NewsRight to Information ActRudranna HartikoteState Information CommissionWorkshopZilla Panchayatಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾರ್ಯಾಗಾರಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯತ್ಪ್ರಕರಣಮಾಹಿತಿ ಹಕ್ಕು ಕಾಯ್ದೆರಾಜ್ಯ ಮಾಹಿತಿ ಆಯೋಗರುದ್ರಣ್ಣ ಹರ್ತಿಕೋಟೆ
Share This Article
Facebook Email Print
Previous Article ಅರ್ಜಿ ಅಹ್ವಾನ ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
Next Article ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
Leave a Comment

Leave a Reply Cancel reply

Your email address will not be published. Required fields are marked *

turmeric to your hair
ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
Life Style
Dr.Yuvaraj
ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
ಮುಖ್ಯ ಸುದ್ದಿ
Heart Health
ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up