CHITRADURGA NEWS | 25 JUNE 2025
ಚಿತ್ರದುರ್ಗ: ಪದೇ ಪದೇ ಅನಧಿಕೃತ ಗೈರು ಹಾಜರಾಗುತ್ತಿದ್ದ ಇಬ್ಬರು ಸರ್ಕಾರಿ ನೌಕರರನ್ನು ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಸೇವೆಯಿಂದ ಅಮಾನತು ಮಾಡಿದ್ದಾರೆ..
ಹೊಳಲ್ಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಟಿ.ಎನ್.ವಿನಯ್ ಕುಮಾರ್ 2025 ಮೇ 15 ರಿಂದ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ, ರಜೆ ಅರ್ಜಿ ಸಲ್ಲಿಸದೆ, ಮೇಲಾಧಿಕಾರಿಗಳ ಅನುಮತಿಯನ್ನೂ ಪಡೆಯದೆ ಈವರೆಗೆ ಗೈರು ಹಾಜರಾಗಿದ್ದಾರೆ.

ಇದನ್ನೂ ಓದಿ: ಬಿ.ಡಿ.ರಸ್ತೆಗೆ ನರೇಂದ್ರ ಮೋದಿ ಹೆಸರು ಚರ್ಚೆ ಮಾತ್ರ | ನಿರ್ಣಯ ಅಲ್ಲ
ಈ ಸಂಬಂಧ ಶಿಸ್ತು ಕ್ರಮ ಜರುಗಿಸಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜೂ.24 ರಂದು ಇಲಾಖಾ ವಿಚಾರಣೆ ಕಾಯ್ದಿರಿಸಿ ಟಿ.ಎನ್.ವಿನಯ್ಕುಮಾರ್ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ನೌಕರ ಅಮಾನತು:
ಹೊಸದುರ್ಗದ ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.ರಂಗಸ್ವಾಮಿ ಅವರನ್ನು ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಅಮಾನತು ಮಾಡಿದ್ದಾರೆ.
ಇದನ್ನೂ ಓದಿ: ಹೊಸದುರ್ಗ ತಾಲೂಕಿನಲ್ಲಿ ಜೂನ್ 26 ರಂದು ವಿದ್ಯುತ್ ವ್ಯತ್ಯಯ
ಪೂರ್ವಾನುಮತಿ ಇಲ್ಲದೆ 2025 ಮೇ 14 ರಿಂದ ಜೂ.10 ರವರೆಗೆ ಕರ್ತವ್ಯಕ್ಕೆ ಗೈರು ಹಾಜರಾದ ಪರಿಣಾಮ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
