CHITRADURGA NEWS | 25 JUNE 2025
ಚಿತ್ರದುರ್ಗ: ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ 7,8,9ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 10 ಅರ್ಜಿ ಸಲ್ಲಿಸಲು ಕೊನೆಯ ದಿನ.
Also Read: ಹೊಸದುರ್ಗ ಪೊಲೀಸರಿಂದ ಕೊಲೆ ಆರೋಪಿಗಳ ಬಂಧನ | ಹುಣವಿನಡು ಗ್ರಾಮದಲ್ಲಿ ನಡೆದಿದ್ದ ಭೀಕರ ಹತ್ಯೆ
ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ನಡೆಸಲಾಗುತ್ತಿರುವ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿರುವ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಉಳಿದಿರುವ 7,8 ಹಾಗೂ 9 ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆ ನಡೆಯಲಿದೆ. ಜುಲೈ 18 ರಂದು ಬೆಳಿಗ್ಗೆ 10:30 ರಿಂದ 1 ಗಂಟೆವರೆಗೆ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು ನೇರವಾಗಿ ಆದರ್ಶ ಶಾಲಾ ಶಿಕ್ಷಕರಿಗೆ ಜುಲೈ 10ರ ಒಳಗೆ ಅರ್ಜಿ ಸಲ್ಲಿಸಬಹುದು.
ಈ ಎರಡು ತಾಲೂಕುಗಳ ಸ್ಥಳೀಯ ಖಾಯಾಂ ನಿವಾಸಿಗಳ ಮಕ್ಕಳು ಬೇರೆ ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ ಮೂಲ ತಾಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಚಿಸಿದ್ದಲ್ಲಿ ಅರ್ಜಿ ಸಲ್ಲಿಸಬಹುದು.
Also Read: ಗೈರು ಹಾಜರಿ | ಇಬ್ಬರು ಸರ್ಕಾರಿ ನೌಕರರ ಅಮಾನತು
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ, ಬಿ.ಇ.ಓ/ಬಿ.ಆರ್.ಸಿ(ಆಡಳಿತ/ಅಭಿವೃದ್

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
