CHITRADURGA NEWS | 27 JUNE 2025
ಚಿತ್ರದುರ್ಗ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸಬೇಕಿದೆ.
Also Read: ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ CA ನಿವೇಶನಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.
ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ.
ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Also Read: ಕುಡಿಯುವ ನೀರಿನ ರಾಜಕೀಯ | ಭದ್ರಾ ನೀರು ಹರಿಸಲು ಅಡ್ಡಿ | ಅವಳಿ ಜಿಲ್ಲೆಗಳಲ್ಲಿ ಬೀದಿಗಿಳಿದು ಹೋರಾಟ
ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಮಾರ್ಟ್ ಮೀಟರ್ ವೈಶಿಷ್ಟ್ಯ:
ಹಳೆಯ ಮಾದರಿಯ ಮೀಟರ್ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್ ಮೀಟರ್ಗಳು ಜಿಪಿಆರ್ಎಸ್/ಆರ್ ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ.
ಅಡ್ವಾನ್ಸ್ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್ ಮೀಟರ್ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ.
ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ.
Also Read: ಬೇಕರಿ ಉತ್ಪನ್ನಗಳ ತಯಾರಿಕೆ ಬಗ್ಗೆ ಒಂದು ದಿನದ ತರಬೇತಿ | ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ
ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್ ಮಾಡಿಕೊಳ್ಳಬಹುದು. ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
