
CHITRADURGA NEWS | 06 JULY 2025
ಹೊಳಲ್ಕೆರೆ: ರೈಲು ಹಳಿಗೆ ತಲೆಯಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ರೈಲು ಹರಿದ ರಭಸಕ್ಕೆ ದೇಹದಿಂದ ತಲೆಯೇ ಬೇರ್ಪಟ್ಟಿರುವ ಭೀಕರ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹೊಳಲ್ಕೆರೆ ತಾಲೂಕಿನ ಅಮೃತಾಪುರ ಬಳಿ ರೈಲು ಹಳಿಯ ಮೇಲೆ ವ್ಯಕ್ತಿಯ ತಲೆ ಹಾಗೂ ದೇಹ ಬೇರ್ಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ನಗರಸಭೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಮೃತನನ್ನು ಹೈದರಾಬಾದ್ ಮೂಲದ ರಾಜು(46) ಎಂದು ಗುರುತಿಸಿದ್ದು, ಈತ ಹೈದರಾಬಾದ್‌ನಲ್ಲಿ ಆಟೋ ಚಾಲಕನಾಗಿದ್ದ ಎನ್ನಲಾಗಿದೆ.
ಕೆಲಸದ ನಿಮಿತ್ತ ಹೊಳಲ್ಕೆರೆಗೆ ಬಂದಿದ್ದಾಗ ಚಿಕ್ಕಜಾಜೂರು ಸಮೀಪದ ಅಮೃತಾಪುರ ರೈಲು ನಿಲ್ದಾಣದ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇದನ್ನೂ ಓದಿ: ಬೈಕಿಗೆ ಬಸ್ ಡಿಕ್ಕಿ | ನಡು ರಸ್ತೆಯಲ್ಲೇ ಧಗ ಧಗನೆ ಉರಿದ ಬಸ್
ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಸಂಬಂಧಿಕರು ಹೈದರಾಬಾದ್‌ನಿಂದ ಬರುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
