CHITRADURGA NEWS | 10 JULY 2025
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಸ್ಥಾಪನೆಯಾಗಲಿರುವ ಅಕ್ಕಾ ಕೆಫೆ ನಿರ್ವಹಣೆಗೆ ಸ್ವ-ಸಹಾಯ ಗುಂಪು ಆಯ್ಕೆ ಮಾಡಲು ಅಡುಗೆ ತಯಾರಿ ಸ್ಪರ್ಧೆಯೇ ನಡೆಯಿತು.

ನಗರದ ರುಡ್ಸೆಟ್ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಆಹಾರ ಸಿದ್ದಪಡಿಸುವ ಸ್ಪರ್ಧೆಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ವೀಕ್ಷಿಸಿದರು.
ಈಗಾಗಲೇ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಅಕ್ಕ ಕೆಫೆ ಕಟ್ಟಡದ ನಿರ್ಮಾಣ ಪೂರ್ಣಗೊಂಡಿದ್ದು, ಕೆಫೆ ನಿರ್ವಹಣೆಗೆ ಸ್ವ ಸಹಾಯ ಗುಂಪನ್ನು ಆಯ್ಕೆ ಮಾಡಲು ಆಹಾರ ಸಿದ್ದಪಡಿಸುವ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಅನುಭವವಿರುವ ಮೂರು ಸ್ವ-ಸಹಾಯ ಗುಂಪುಗಳು ಭಾಗವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಪರಿಶೀಲಿಸಿ ಆಹಾರ ಸಿದ್ದಪಡಿಸಿರುವ ವಿಧಾನ, ಗುಣಮಟ್ಟ, ರುಚಿ-ಶುಚಿ-ನೈರ್ಮಲ್ಯ, ಆಹಾರ ತಯಾರಿಸಲು ಉಪಯೋಗಿಸಿದ ಪದಾರ್ಥಗಳನ್ನು ಪರಿಶೀಲಿಸಿ, ಸ್ವ-ಸಹಾಯ ಸಂಘದ ಮಹಿಳೆಯರು ಸಿದ್ಧಪಡಿಸಿದ ಆಹಾರದ ರುಚಿ, ಗುಣಮಟ್ಟ ಪರಿಶೀಲನೆ ನಡೆಸಿದರು.
ಅಕ್ಕ ಕೆಫೆ ನಿರ್ವಹಣೆಗೆ ಸ್ವ ಸಹಾಯ ಗುಂಪಿನ ಆಯ್ಕೆಯಲ್ಲಿ ಶುಚಿ-ರುಚಿ ಆಹಾರಕ್ಕೆ ಒತ್ತು ನೀಡಬೇಕು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಆಹಾರ ಸುರಕ್ಷತಾ ಅಧಿಕಾರಿ ನಂದಿನಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ರುಡ್ಸೆಟ್ ಸಂಸ್ಥೆ ನಿರ್ದೇಶಕ ಬಸವರಾಜ್, ಎನ್ಆರ್ಎಲ್ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಯೋಗೇಶ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
