CHITRADURGA NEWS | 14 JULY 2025
ಚಿತ್ರದುರ್ಗ: ನಗರದ ಬಿ.ಡಿ.ರಸ್ತೆಗೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಹೆಸರು ಬದಲಾವಣೆ ಮಾಡುವುದು ಬೇಡ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಪೌರಾಯುಕ್ತರಾದ ಎಂ.ರೇಣುಕಾ ಅವರಿಗೆ ಸಂಸದರು ಮೋದಿ ಹೆಸರು ಬದಲಾವಣೆ ಮಾಡದಂತೆ ಸಲಹೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗದ ಮುಖ್ಯ ರಸ್ತೆಗೆ ನರೇಂದ್ರ ಮೋದಿ ಹೆಸರು ನಾಮಕರಣ
ನಗರಸಭೆ ಸಾಮಾನ್ಯ ಸಭೆಯಲ್ಲಿ ಬಿ.ಡಿ.ರಸ್ತೆಗೆ ನರೇಂದ್ರ ಮೋದಿ ಹೆಸರು ಅನುಮೋದನೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕೆಗಳಲ್ಲೂ ವರದಿಯಾಗಿದೆ. ಆದರೆ, ಈ ವಿಚಾರದಲ್ಲಿ ಗೊಂದಲ ಉಂಟಾಗಿ ಬದಲಾವಣೆ ಮಾಡುವ ವಿಚಾರ ಕೇಳಿದ್ದು, ಯಾವ ಕಾರಣಕ್ಕೂ ಬದಲಾಯಿಸಬಾರದು. ಹೆಸರು ಇಡದಿದ್ದರೆ ಗೊಂದಲ ಇರುತ್ತಿರಲಿಲ್ಲ. ಆದರೆ, ನಾಮಕರಣ ಮಾಡಿ ಬದಲಾಯಿಸುವುದು ಬೇಡ ಎಂದರು.
ಇದನ್ನೂ ಓದಿ: ಬಿ.ಡಿ.ರಸ್ತೆಗೆ ನರೇಂದ್ರ ಮೋದಿ ಹೆಸರು ಚರ್ಚೆ ಮಾತ್ರ | ನಿರ್ಣಯ ಅಲ್ಲ
ಗಾಂಧಿ ವೃತ್ತದ ಹೆಸರನ್ನು ಬದಲಾವಣೆ ಮಾಡಬಾರದು. ದೇಶದ ಎಲ್ಲಿಯೂ ಗಾಂಧೀಜಿ ಹೆಸರುಗಳನ್ನು ಬದಲಾಯಿಸಬಾರದು. ಗಾಂಧೀ ವೃತ್ತ ಹೊರತುಪಡಿಸಿ ಉಳಿದ ರಸ್ತೆಗೆ ಪ್ರಧಾನಿ ನರೇಂದ್ರ ಮೋದಿ ಹೆಸರು ಅಂತಿಮಗೊಳಿಸಿ. ಅವರು ಬಿಜೆಪಿ ಅಥವಾ ಕಾಂಗ್ರೆಸ್ ಪ್ರಧಾನಿ ಅಲ್ಲ. ದೇಶದ ಪ್ರಧಾನಿ. ಅವರಿಗೆ ಅಗೌರವ ತೋರುವುದು ಬೇಡ. ಗೊಂದಲಗಳಿದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಎಂದು ಸಂಸದರು ತಿಳಿಸಿದರು.
ಇದನ್ನೂ ಓದಿ: ದಾವಣಗೆರೆ ರೋಡ್ ರೈಲ್ವೇ ಮೇಲ್ಸೇತುವೆ | ಕಾಮಗಾರಿ ಆರಂಭಿಸಿ | ಗೋವಿಂದ ಕಾರಜೋಳ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
