
CHITRADURGA NEWS | 17 JULY 2025
ಚಿತ್ರದುರ್ಗ: ನಗರದ ಹೊರವಲಯದ ಮಲ್ಲಾಪುರ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನ ಸಿಲಿಂಡರ್‌ನಿಂದ ಗ್ಯಾಸ್ ಲೀಕ್ ಆಗಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸುವ ವೇಳೆ ಗ್ಯಾಸ್ ಲೀಕೇಜ್ ಕಾಣಿಸಿಕೊಂಡು ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಅಡುಗೆ ಸಿಬ್ಬಂದಿ ಗಾಬರಿಯಾಗಿ ಬೆಂಕಿ ನಂದಿಸಲು ಪರದಾಡಿದ್ದಾರೆ.
ಅಡುಗೆ ಕೊಠಡಿಯಲ್ಲಿ ದಟ್ಟ ಬೆಂಕಿ ಕಾಣಿಸಿಕೊಳ್ಳುತ್ತಲೇ, ಅಕ್ಕಪಕ್ಕದ ಕೊಠಡಿಗಳಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರು ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿದ್ದಾರೆ.
ಅಷ್ಟರಲ್ಲಿ ಶಾಲೆಯ ಹೊರ ಭಾಗದಲ್ಲಿದ್ದ ಸಾರ್ವಜನಿಕರು, ಎಸ್‌ಡಿಎಂಸಿ ಸದಸ್ಯರು, ಅಧ್ಯಕ್ಷರು ಸ್ಥಳಕ್ಕೆ ಬಂದು ಗೋಣಿ ಚೀಲ ವದ್ದೆ ಮಾಡಿ ಬೆಂಕಿಯ ಮೇಲೆ ಹಾಕಿ ತಹಬದಿಗೆ ತಂದಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದಿತ್ತಾದರೂ, ಅಷ್ಟರಲ್ಲಿ ಬೆಂಕಿ ನಂದಿಸಲಾಗಿತ್ತು. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಶೀಲನೆ ನಡೆಸಿದರು.
ಇದನ್ನೂ ಓದಿ: ಅಡಿಕೆ ವ್ಯಾಪಾರಿ ದರೋಡೆಗೆ ಸ್ಕೆಚ್ | ಮೂವರ ಬಂಧನ, ಸಿರಿಗೆರೆ, ಭರಮಸಾಗರ ಪೊಲೀಸರ ಕಾರ್ಯಚರಣೆ
ಅದೃಷ್ಟವಶಾತ್ ನೂರಾರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ನಿಟ್ಟಿಸಿರು ಬಿಟ್ಟರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
