By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Veerashaiva Urban Credit Co-operative Society's 25th Anniversary (Silver Jubilee) and Annual General Meeting of All Members
    ವೀರಶೈವ ಅರ್ಬನ್ ಸೊಸೈಟಿ ವ್ಯಾಪ್ತಿ ಜಿಲ್ಲೆಯ ಐದು ತಾಲೂಕುಗಳಿಗೆ ವಿಸ್ತರಣೆ | ಪಟೇಲ್ ಶಿವಕುಮಾರ್
    3 hours ago
    B.T. Kumaraswamy presided over the preliminary meeting and spoke
    ಸಶಸ್ತ್ರ ಕಾನ್‌ಸ್ಟೇಬಲ್ ಪರೀಕ್ಷೆಗೆ ಕಟ್ಟುನಿಟ್ಟಿನ ಭದ್ರತೆ | ಅಕ್ರಮವೆಸಗಿದರೆ ಕಠಿಣ ಕ್ರಮ
    8 hours ago
    ಅಭಿನಂದನಾ ಸಮಾರಂಭದಲ್ಲಿ ಟಿ.ವೆಂಕಟೇಶ್ ಮಾತನಾಡಿದರು
    ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಗೆ KMERC ಅಡಿ ರೂ.3,574 ಕೋಟಿ ಅನುದಾನ ಅನುಮೋದನೆ | ಟಿ.ವೆಂಕಟೇಶ್ 
    8 hours ago
    ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ
    ಭದ್ರಾ ಮೇಲ್ದಂಡೆ ನೀರು ಹರಿಯಲು ದಿನಾಂಕ ಫಿಕ್ಸ್‌ | ಚಿತ್ರದುರ್ಗ ಶಾಖಾ ಕಾಲುವೆಯಿಂದ ಕೆರೆಗಳಿಗೆ ನೀರು
    20 hours ago
    ಸಹಸ್ರ ಕಂಠಗಳಿಂದ ಮೊಳಗಿದ ಭಗವದ್ಗೀತಾ ಶ್ಲೋಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರ್ಪಡೆ
    ಸಹಸ್ರ ಕಂಠಗಳಿಂದ ಮೊಳಗಿದ ಭಗವದ್ಗೀತಾ ಶ್ಲೋಕ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರ್ಪಡೆ | ಎಸ್‌ಆರ್‌ಎಸ್ ಸಂಸ್ಥೆಯ ಮೈಲಿಗಲ್ಲು
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 day ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    19 hours ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    9 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 hour ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    5 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    7 hours ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    8 hours ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    1 day ago
    The hands were swollen
    ನಿಮ್ಮ ಕೈಗಳು ಊದಿಕೊಂಡಿದ್ದರೆ ಅದು ಈ ಸಮಸ್ಯೆಗಳ ಸಂಕೇತವಾಗಿರಬಹುದಂತೆ
    1 day ago
    Shatavari powder
    ಮಹಿಳೆಯರು ಶತಾವರಿ ಪುಡಿಯನ್ನು ಸೇವಿಸುವುದರಿಂದ ಏನಾಗುತ್ತದೆ ಗೊತ್ತಾ?
    2 days ago
Reading: ಹೆಣ್ಣುಮಕ್ಕಳಿಗೆ ಶಿಕ್ಷಣ ಅಗತ್ಯ | ADC ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೆಣ್ಣುಮಕ್ಕಳಿಗೆ ಶಿಕ್ಷಣ ಅಗತ್ಯ | ADC ಬಿ.ಟಿ.ಕುಮಾರಸ್ವಾಮಿ

News Desk Chitradurga News
Last updated: 27 July 2025 12:05
News Desk Chitradurga News
1 year ago
Share
ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
SHARE

CHITRADURGA NEWS | 27 JULY 2025

ಚಿತ್ರದುರ್ಗ: ಎಲ್ಲಾ ರಂಗಗಳಲ್ಲಿಯೂ ಪೈಪೋಟಿಯಿರುವುದರಿಂದ ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮುಸ್ಲಿಂ ಸಮುದಾಯದವರಿಗೆ ಕರೆ ನೀಡಿದರು.

ಇದನ್ನೂ ಓದಿ: ಯೂರಿಯಾಗೆ ಮುಗಿಬಿದ್ದ ಸಾವಿರಾರು ರೈತರು | ಎಪಿಎಂಸಿ ಬಳಿ ದಿನವಿಡೀ ಸರತಿ ಸಾಲು | ಸರ್ಕಾರದ ಬೇಜವಾಬ್ದಾರಿಗೆ ಆಕ್ರೋಶ

ಎಸ್.ಎಸ್.ಎಲ್.ಸಿ. ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆಯಿಂದ ಅಹಮದ್ ಪ್ಯಾಲೇಸ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣಕ್ಕೆ ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆ ಕಲ್ಪಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಜಾತಿ ತಾರತಮ್ಯವಿಲ್ಲದೆ ಐಕ್ಯತೆಯಿಂದ ಬದುಕಲು ಸಾಧ್ಯ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ದಿ ನಿಗಮದಿಂದ ಸಾಕಷ್ಟು ಸೌಲಭ್ಯಗಳಿವೆ. ಚಿಕ್ಕಂದಿನಲ್ಲಿಯೇ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿ ಕೆಲಸಕ್ಕೆ ಕಳಿಸಬೇಡಿ. ಮನೆಯಲ್ಲಿ ಓದುವ ವಾತಾವರಣವಿಲ್ಲದಿದ್ದರೆ ವಸತಿ ಶಾಲೆಗಳಿವೆ. ಮಕ್ಕಳನ್ನು ಅಲ್ಲಿಗೆ ಸೇರಿಸಿ ಶಿಕ್ಷಣವಂತರನ್ನಾಗಿಸಿ ಎಂದು ಹೇಳಿದರು.

ಆಧುನಿಕ ತಂತ್ರಜ್ಞಾನದಲ್ಲಿ ಗುಡಿ ಕೈಗಾರಿಕೆಗಳು ನಿಲ್ಲುತ್ತಿವೆ. ವಿದ್ಯೆ ಕಲಿತ ಮನೆಯಲ್ಲಿ ಸಾಮಾಜಿಕ ಸಂಘರ್ಷವಿರುವುದಿಲ್ಲ. ಸಮಸ್ಯೆಗಳಿಂದ ಹೊರ ಬರಬಹುದು. ಶಿಕ್ಷಣದ ಜೊತೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳಿಗೆ ಕಲಿಸುವುದು ತಂದೆ-ತಾಯಿಗಳ ಕರ್ತವ್ಯ. 

ಇದನ್ನೂ ಓದಿ: ಬಿಜೆಪಿ ಜಿಲ್ಲಾ ಘಟಕದಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ

ವಿದ್ಯೆ ಸಾಧಕನ ಸ್ವತ್ತೆ ವಿನಃ ಎಂದಿಗೂ ಸೋಮಾರಿಯ ಸ್ವತ್ತಾಗುವುದಿಲ್ಲ. ವಿದ್ಯಾವಂತರಿಗೆಲ್ಲಾ ಸರ್ಕಾರಿ ನೌಕರಿ ಸಿಗುವುದು ಕಷ್ಟ. ಸ್ವ-ಉದ್ಯೋಗ ಕೈಗೊಂಡು ಸ್ವಾವಲಂಭಿಗಳಾಗಿ ಬದುಕಲು ಅನೇಕ ದಾರಿಗಳಿವೆ ಎಂದು ತಿಳಿಸಿದರು.

ಮಕ್ಕಳು ಮೊಬೈಲ್‍ಗೆ ದಾಸರಾಗುವ ಬದಲು ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ವೃದ್ದಿಯಾಗುತ್ತದೆ. ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸುವುದರಿಂದ ಇತರೆ ಮಕ್ಕಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಬೆಂಗಳೂರಿನಲ್ಲಿರುವ ಹಜ್ ಭವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಅರಿವು ಯೋಜನೆಯಡಿ ವಿದ್ಯಾರ್ಥಿ ವೇತನ ಸಿಗುತ್ತದೆ. ಸರ್ಕಾರ ನಿಮ್ಮ ಜೊತೆಗಿದೆ. ಶಿಕ್ಷಣದ ಜೊತೆ ನೈಪುಣ್ಯ ವೃತ್ತಿಯಲ್ಲಿ ತೊಡಗಿಕೊಂಡರೆ ಸುಂದರವಾದ ಬದುಕು ಕಟ್ಟಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬಹುದು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಮುಸ್ಲಿಂರು ಮಕ್ಕಳ ಶಿಕ್ಷಣಕ್ಕೆ ಮಾನ್ಯತೆ ಕೊಡುವುದಿಲ್ಲ. ಚಿಕ್ಕಂದಿನಲ್ಲಿಯೇ ಗ್ಯಾರೆಜ್ ಇಲ್ಲವೇ ಬೇರೆ ಬೇರೆ ಕೆಲಸಗಳಿಗೆ ಕಳಿಸುತ್ತಾರೆಂಬ ತಪ್ಪು ಕಲ್ಪನೆಯಿತ್ತು. ಈಗ ಕಾಲ ಬದಲಾಗಿದೆ. ಸರ್ಕಾರದ ಅನೇಕ ಯೋಜನೆಗಳ ಪ್ರಯೋಜನ ಪಡೆದುಕೊಂಡು ಹೆಣ್ಣು ಮಕ್ಕಳಿಗೂ ಶಿಕ್ಷಣ ಕೊಡಿಸಬೇಕೆಂಬ ಛಲ ಪೋಷಕರುಗಳಲ್ಲಿ ಮೂಡಿದೆ. ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿದರೆ ಪೋಷಕರುಗಳಿಗೆ ಖುಷಿಯಾಗುತ್ತದೆ. ಮಕ್ಕಳನ್ನು ಶಾಲೆಗೆ ಕಳಿಸುವುದಷ್ಟೆ ಅಲ್ಲ. ಅವರ ಚಲನವಲನಗಳ ಮೇಲೆ ನಿಗಾ ಇಡುವುದು ಹೆತ್ತವರ ಜವಾಬ್ದಾರಿಯಾಗಬೇಕೆಂದು ಸಲಹೆ ನೀಡಿದರು.

ನಿವೃತ್ತ ನೌಕರರನ್ನು ನಿಮ್ಮ ಸಂಘದಲ್ಲಿ ಸೇರಿಸಿಕೊಳ್ಳಿ. ಆಗ ಇನ್ನು ಹೆಚ್ಚಿನ ಚಟುವಟಿಕೆಗಳನ್ನು ನಡೆಸಲು ಸಹಾಯವಾಗಲಿದೆ. ಸರ್ಕಾರಿ ನೌಕರಿಗಾಗಿಯೇ ಶಿಕ್ಷಣ ಪಡೆಯಬೇಡಿ. ಸ್ವಾವಲಂಭಿಗಳಾಗಿ ಬದುಕಲು ಶಿಕ್ಷಣ ಮುಖ್ಯ ಎಂದು ನುಡಿದರು.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿ | ಕರಡಿ ಸಾವು

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಇಕ್ಬಾಲ್,  ಸಂಘದ ಪ್ರಧಾನ ಕಾರ್ಯದರ್ಶಿ ತಾಜೀರ್‍ಭಾಷ ಮಾತನಾಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಅಬುಲ್ ಮಜೀದ್, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ನಯಾಜ್‍ಖಾನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಂತೇಶ್, ಹಿರಿಯೂರು ನಗರಸಭೆ ಕಮಿಷನರ್ ವಸೀಂ, ಕೆ.ಪಿ.ಟಿ.ಸಿ.ಎಲ್. ಇಂಜಿನಿಯರ್ ಸಾಜಿಯಾ ಪರ್ವಿನ್, ಡಾ.ಇಫ್ತಿಯಾರ್, ಮಹಮದ್ ಆಲಿ, ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಸಹೋದರಿ ವೀಣ, ಹನೀಸ್ ಸೈಯದ್ ಖುದ್ದೂಸ್, ಸಂಘಧ ಕಾರ್ಯದರ್ಶಿ, ಕಾರ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ADC B.T. KumaraswamyADC ಬಿ.ಟಿ.ಕುಮಾರಸ್ವಾಮಿChitradurgaChitradurga newsEducationMuslim CommunityTalent Awardಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಾ ಪುರಸ್ಕಾರಮುಸ್ಲಿಂ ಸಮುದಾಯಶಿಕ್ಷಣ
Share This Article
Facebook Email Print
Previous Article ತಲೆಹೊಟ್ಟು ನಿವಾರಿಸಲು ಮನೆಯಲ್ಲಿ ತಯಾರಿಸಿದ ಮಾವಿನ ಬೀಜದ ಹೇರ್‍ ಪ್ಯಾಕ್ ಹಚ್ಚಿ
Next Article ಕೇಂದ್ರದಿಂದ ಅಗತ್ಯ ಯೂರಿಯಾ ಗೊಬ್ಬರ ಪೂರೈಕೆ | ರಾಜ್ಯ ಸರ್ಕಾರ ಅಭಾವ ಸೃಷ್ಟಿಸಿದೆ | MLC ಕೆ.ಎಸ್. ನವೀನ್ ಆರೋಪ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Veerashaiva Urban Credit Co-operative Society's 25th Anniversary (Silver Jubilee) and Annual General Meeting of All Members
ವೀರಶೈವ ಅರ್ಬನ್ ಸೊಸೈಟಿ ವ್ಯಾಪ್ತಿ ಜಿಲ್ಲೆಯ ಐದು ತಾಲೂಕುಗಳಿಗೆ ವಿಸ್ತರಣೆ | ಪಟೇಲ್ ಶಿವಕುಮಾರ್
ಮುಖ್ಯ ಸುದ್ದಿ
PCOS
ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
Life Style
Eucalyptus oil
ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up