
CHITRADURGA NEWS | 28 JULY 2025
ಇಂದಿನ ಕಾಲದಲ್ಲಿ , ಜನರು ಹೊರಗಿನಿಂದ ಜಂಕ್ ಫುಡ್ ಮತ್ತು ಸಂಸ್ಕರಿಸಿದ ಆಹಾರವನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಈ ವಸ್ತುಗಳು ಕೊಲೆಸ್ಟ್ರಾಲ್ ಸಮಸ್ಯೆಯನ್ನು ಹೆಚ್ಚಿಸಬಹುದು ಎಂದು ತಿಳಿದಿರುವುದಿಲ್ಲ. ಈ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೃದಯ ಸಂಬಂಧಿತ ಕಾಯಿಲೆಗಳಿಗೆ ಪ್ರಮುಖ ಕಾರಣವೆಂದು ಪರಿಗಣಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸರಿಯಾದ ಸಮಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ತಜ್ಞರು ಆಹಾರದಲ್ಲಿ ಹಲವು ಬದಲಾವಣೆಗಳನ್ನು ಮಾಡಲು ತಿಳಿಸುತ್ತಾರೆ. ಹಾಗಾದ್ರೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಯಾವ ಬೀಜಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳಿ.
ಅಗಸೆಬೀಜಗಳು

ಅಗಸೆ ಬೀಜಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಲಿಗ್ನಾನ್‌ಗಳು ಸಮೃದ್ಧವಾಗಿವೆ. ಅಲ್ಲದೆ, ಈ ಬೀಜಗಳು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್) ಅನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತವೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಫೈಬರ್ ಕರುಳಿನಲ್ಲಿ ಕೊಲೆಸ್ಟ್ರಾಲ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಅಗಸೆ ಬೀಜಗಳನ್ನು ಪುಡಿಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸಬಹುದು.
ಚಿಯಾ ಬೀಜಗಳು
ಚಿಯಾ ಬೀಜಗಳನ್ನು ಸೂಪರ್‌ಫುಡ್ ಎಂದು ಪರಿಗಣಿಸಲಾಗುತ್ತದೆ. ಅವು ಫೈಬರ್, ಪ್ರೋಟೀನ್, ಒಮೆಗಾ-3 ಮತ್ತು ಆಂಟಿಆಕ್ಸಿಡೆಂಟ್‌ಗಳನ್ನು ಒಳಗೊಂಡಿರುತ್ತವೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿ ಕುಡಿಯುವುದರಿಂದ, ಅದು ಹೊಟ್ಟೆಯಲ್ಲಿ ಜೆಲ್ ತರಹದ ರೂಪವನ್ನು ಪಡೆಯುತ್ತದೆ. ಇದು ಆಹಾರದ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಕುಂಬಳಕಾಯಿ ಬೀಜಗಳು
ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್, ಸತು, ಕಬ್ಬಿಣ, ಒಮೆಗಾ-3 ಮತ್ತು ಫೈಟೊಸ್ಟೆರಾಲ್‌ಗಳಿವೆ. ಫೈಟೊಸ್ಟೆರಾಲ್‌ಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಬೀಜಗಳನ್ನು ಹುರಿದು ಬೆಳಿಗ್ಗಿನ ಬ್ರೇಕ್‍ಫಾಸ್ಟ್ ಅಲ್ಲಿ ತಿನ್ನಬಹುದು ಅಥವಾ ಸಲಾಡ್‌ಗಳಲ್ಲಿ ಬೆರೆಸಬಹುದು.
ಎಳ್ಳು
ಎಳ್ಳು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಲಿಗ್ನಾನ್ ಎಂಬ ಅಂಶವನ್ನು ಹೊಂದಿರುತ್ತದೆ. ಈ ಬೀಜಗಳಲ್ಲಿ ಬಹುಅಪರ್ಯಾಪ್ತ ಕೊಬ್ಬು ಸಮೃದ್ಧವಾಗಿವೆ. ಇದು ಹೃದಯಕ್ಕೆ ಪ್ರಯೋಜನಕಾರಿ. ಇದು ಉತ್ತಮ ಕೊಲೆಸ್ಟ್ರಾಲ್ (ಎಚ್‌ಡಿಎಲ್) ಹೆಚ್ಚಿಸಲು ಮತ್ತು ಕೆಟ್ಟ ಕೊಲೆಸ್ಟ್ರಾಲ್(ಎಲ್‌ಡಿಎಲ್) ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಸೂರ್ಯಕಾಂತಿ ಬೀಜಗಳು
ಸೂರ್ಯಕಾಂತಿ ಬೀಜಗಳು ವಿಟಮಿನ್ ಇ, ಮೆಗ್ನೀಸಿಯಮ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿವೆ. ಈ ಬೀಜಗಳು ದೇಹದಲ್ಲಿ ಆ್ಯಂಟಿ ಆಕ್ಸಿಡೆಂಟ್‍ಗಳಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
