
CHITRADURGA NEWS | 29 JULY 2025
ಚಿತ್ರದುರ್ಗ: ಕ್ಷಯ ರೋಗವು ಒಂದು ಸಾಂಕ್ರಾಮಿಕ ರೋಗ. ಚಿಕಿತ್ಸೆ ಪಡೆಯದ ಕ್ಷಯರೋಗಿಯು ಕೆಮ್ಮುವುದರಿಂದ, ಸೀನುವುದರಿಂದ, ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕ್ಷಯ ರೋಗ ಹರಡುವ ಸಾಧ್ಯತೆ ಇದೆ. ಕ್ಷಯ ರೋಗಕ್ಕೆ ನಿಗದಿತ ಚಿಕಿತ್ಸೆ ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯ ಇರುವುದರಿಂದ “ಕ್ಷಯಕ್ಕೆ ಭಯ ಬೇಡ” ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ.ವಿನಯ್ ಸಜ್ಜನ್ ಹೇಳಿದರು.
ಇದನ್ನೂ ಓದಿ: ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಜಿಪಂ ನೂತನ ಸಿಇಓ ಡಾ.ಆಕಾಶ್ | ಜೆಜೆಎಂ ಕಾಮಗಾರಿ ಮುಗಿಸಲು ಸೂಚನೆ

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಜಾನ್ ಮೈನ್ಸ್ ವತಿಯಿಂದ ನಿಕ್ಷಯ ಮಿತ್ರ ಯೋಜನೆ ಅಡಿಯಲ್ಲಿ ಮೈನಿಂಗ್ ವಲಯದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ 34 ಕ್ಷಯ ರೋಗಿಗಳಿಗೆ ಆರನೇ ಮಾಸಿಕ ಪೌಷ್ಟಿಕ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಪೌಷ್ಠಿಕ ಆಹಾರ ಕಿಟ್‍ಗಳಲ್ಲಿ ಕಾರ್ಬೋಹೈಡ್ರೇಟ್ಸ್, ಪೆÇ್ರೀಟೀನ್ಸ್ ಮತ್ತು ವಿಟಮಿನ್ಸ್ ಸೇರಿದ ಆಹಾರದ ಧಾನ್ಯಗಳು ಮತ್ತು ಡ್ರೈಫ್ರೂಟ್ಸ್‍ಗಳಿದ್ದು ಕ್ಷಯ ರೋಗಿಗಳು ಇವುಗಳ ಸದುಪಯೋಗಪಡಿಸಿಕೊಂಡು ಸರಿಯಾದ ಚಿಕಿತ್ಸೆ ಪಡೆದು ಕುಟುಂಬದ ಇತರರಿಗೆ ಸೋಂಕು, ಹರಡದಂತೆ ಜಾಗ್ರತೆವಹಿಸಿ ರೋಗದಿಂದ ಗುಣಮುಖ ಹೊಂದುವುದರ ಜೊತೆಗೆ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಬೇಕು ಎಂದರು.
ಎನ್‍ಟಿಇಪಿ ಕಚೇರಿ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಮಹೇಂದ್ರ ಮಾತನಾಡಿ, ತಮ್ಮಗಳ ಗ್ರಾಮಗಳಲ್ಲಿ ಯಾರಿಗಾದರೂ ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಕಫ, ಕಫದಲ್ಲಿ ರಕ್ತ ಬರುವುದು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಇಂತಹ ಲಕ್ಷಣಗಳಿದ್ದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಬೇಕು.
ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಕ್ಷಯ ರೋಗ ದೃಢಪಟ್ಟಲ್ಲಿ ಸರ್ಕಾರ ಉಚಿತವಾಗಿ ಕ್ಷಯ ರೋಗಿಯ ಮನೆ ಬಾಗಿಲಿಗೆ ಔಷಧಿ ಒದಗಿಸುತ್ತದೆ. ಜೊತೆಗೆ ಪೌಷ್ಟಿಕ ಆಹಾರ ಸೇವನೆಗಾಗಿ ಡಿಬಿಟಿ ಮುಖಾಂತರ ಚಿಕಿತ್ಸಾ ಅವಧಿಯಲ್ಲಿ ಮಾಸಿಕ ರೂ.1000 ರೋಗಿಯ ಬ್ಯಾಂಕ್ ಖಾತೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಅಥವಾ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದರು.
ಕಾರ್ಯಕ್ರಮದಲ್ಲಿ ದಾನಿಗಳಾದ ಜಾನ್‍ಮೈನ್ಸ್‍ನ ಉಪ ವ್ಯವಸ್ಥಾಪಕ ಆರ್ ಪ್ರವೀಣ್ ಚಂದ್ರ ಮತ್ತು ಅಜಿತ್ ಕುಮಾರ್ ಮಾಳಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರವಿಕುಮಾರ್, ಇಸ್ಮಾಯಿಲ್, ಸುನಿಲ್ ಕುಮಾರ್, ಹಾಲನಾಯ್ಕ, ವೀರೇಶ, ಆಶಾ ಕಾರ್ಯಕರ್ತೆಯರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
