
CHITRADURGA NEWS | 05 AUGUST 2025
ಚಿತ್ರದುರ್ಗ: ಮಳೆಯಿಲ್ಲದೆ ಕಂಗೆಟ್ಟು ಬರದ ದವಡೆಯಲ್ಲಿದ್ದ ಜಿಲ್ಲೆಯ ಜನರಿಗೆ ಮಳೆರಾಯ ಸಂತಸ ತಂದಿದ್ದಾನೆ.
ಆಗಸ್ಟ್ 4 ಸೋಮವಾರ ರಾತ್ರಿ ಜಿಲ್ಲೆಯಲ್ಲಿ ಬಹುತೇಕ ಎಲ್ಲ ತಾಲೂಕುಗಳಲ್ಲಿ ಹದವಾದ ಮಳೆಯಾಗಿದೆ.
ಇದನ್ನೂ ಓದಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ತಡರಾತ್ರಿ ಶುರುವಾದ ಮಳೆ ನಸುಕಿನವರೆಗೆ ಸುರಿದಿದೆ. ಮೆಕ್ಕೆಜೋಳ, ಶೇಂಗಾ, ಹತ್ತಿ, ಸೇರಿದಂತೆ ಹಲವು ಬೆಳೆಗಳು ಮಳೆಯಿಲ್ಲದೆ ಸೊರಗಿದ್ದವು.
ಪುನರ್ವಸು ಮಳೆ ಸಂಪೂರ್ಣ ಕೈ ಕೊಟ್ಟಿದ್ದು, ಆಗಸ್ಟ್ 2 ರಂದು ಆರಂಭವಾಗಿರುವ ಆಶ್ಲೇಷ ಮಳೆ ಕೈ ಹಿಡಿದಿದೆ.
ಇದನ್ನೂ ಓದಿ: ನಾಗಪ್ಪನಿಗೆ ಹುಣಸೆ ಹುಳಿ ಸಾರು ನೈವೇದ್ಯ | ಕಾಡುಗೊಲ್ಲ ಸಮುದಾಯದಿಂದ ವಿಶಿಷ್ಟ ಆಚರಣೆ
ಇನ್ನೂ ಎರಡು ದಿನ ಅಂದರೆ, ಆಗಸ್ಟ್ 7 ರವರೆಗೆ ರಾಜ್ಯಾದ್ಯಂತ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ಮತ್ತೆ ನಾಳೆಯೂ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಜನ ಉತ್ತಮ ಮಳೆ ನಿರೀಕ್ಷೆ ಮಾಡಬಹುದಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
