
CHITRADURGA NEWS | 12 AUGUST 2025
ಚಿತ್ರದುರ್ಗ: ಜಿಲ್ಲೆಯ ಕೈಗಾರಿಕಾ ಪ್ರದೇಶ, ಕೈಗಾರಿಕಾ ಘಟಕಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ SBI ಪ್ರಾದೇಶಿಕ ಕಚೇರಿ ಉದ್ಘಾಟನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ, ಕೈಗಾರಿಕಾ ಸ್ಪಂದನಾ ಹಾಗೂ ಪಿಎಂಇಜಿಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಅಕ್ಷಯ ಫುಡ್ ಪಾರ್ಕ್, ಕೆಳಗೋಟೆ ಕೈಗಾರಿಕಾ ಪ್ರದೇಶ, ಚಳ್ಳಕೆರೆ ಕೈಗಾರಿಕಾ ವಸಾಹತು, ಮೇಟಿಕುರ್ಕೆ ಕೈಗಾರಿಕಾ ಪ್ರದೇಶಕ್ಕೆ ನೀರು, ವಿದ್ಯುತ್, ರಸ್ತೆ ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಕರ್ಯಗಳ ಕಲ್ಪಿಸಬೇಕು ಎಂದು ತಿಳಿಸಿದರು.
ಹಿರಿಯೂರು ತಾಲ್ಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಸ್ಥಾಪಿತವಾಗಿರುವ ಅಕ್ಷಯಫುಡ್ ಪಾರ್ಕ್‍ಗೆ ಹೋಗಲು ಸಂಪರ್ಕ ರಸ್ತೆ ಇಲ್ಲದೇ ತುಂಬಾ ಸಮಸ್ಯೆಯಾಗುತ್ತಿದೆ ಎಂದು ಉದ್ದಿಮೆದಾರರು ಸಭೆಯ ಗಮನಕ್ಕೆ ತಂದರು. ಅಕ್ಷಯ್ ಫುಡ್ ಪಾರ್ಕ್‍ನ ಸಂಪರ್ಕ ರಸ್ತೆಯನ್ನು ಕೈಗೊಳ್ಳಲು ಹಿರಿಯೂರು ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ, ಸಂಚಾರಕ್ಕೆ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಇದನ್ನೂ ಓದಿ: ತಹಶೀಲ್ದಾರರು, ವಲಯ ಅರಣ್ಯಾಧಿಕಾರಿಗಳು ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ | ಡಿಸಿ ವೆಂಕಟೇಶ್ ಸೂಚನೆ
ಇಂಡಸ್ಟ್ರೀಯಲ್ ಕಾರಿಡಾರ್ ಯೋಜನೆಗೆ ಭೂ ಸ್ವಾಧೀನವಾಗಿರುವ ಮೇಟಿಕುರ್ಕೆ ಮತ್ತು ಕರಿಓಬನಹಳ್ಳಿ ಗ್ರಾಮದಲ್ಲಿ ಭೂಸ್ವಾಧೀನ ಜಮೀನು ಪೈಕಿ ಕೆಐಎಡಿಬಿ ಕಾಯ್ದೆ ಕಲಂ 28 (8) ರಡಿ ಅಭಿವೃದ್ಧಿ ಶಾಖೆಗೆ ಈಗಾಗಲೇ ಹಸ್ತಾಂತರವಾಗಿರುವ 920-06 ಎಕರೆ ಜಮೀನು ಹಾಗೂ ಹಸ್ತಾಂತರಿಸಲು ಬಾಕಿ ಇರುವ 236-06 ಎಕೆರೆ ಜಮೀನು ಹಸ್ತಾಂತರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆನಂದ್ ಮಾತನಾಡಿ, 2025-26ನೇ ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನೆ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾ ಕೈಗಾರಿಕಾ ಕೇಂದ್ರ, ಕೆವಿಐಬಿ ಮತ್ತು ಕೆವಿಐಸಿ ಬೆಂಗಳೂರು ಅವರಿಗೆ ಆನ್‍ಲೈನ್‍ನಲ್ಲಿ ಅರ್ಜಿ ಹಾಕಲು ಕೇಂದ್ರ ಸರ್ಕಾರದಿಂದ ಅವಕಾಶ ಕಲ್ಪಿಸಿರುತ್ತಾರೆ. ಆದರೆ ಪ್ರಸ್ತುತ ಸಾಲಿಗೆ ಯಾವುದೇ ಗುರಿ ನಿಗದಿಪಡಿಸದೇ ಇರುವುದರಿಂದ ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಗುರಿ ಬಂದ ನಂತರ ಬ್ಯಾಂಕಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಸಭೆಗೆ ತಿಳಿಸಿದರು.
ಇದನ್ನೂ ಓದಿ: ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ | ಶಿಕ್ಷಕರ ಸಂಘ
ಇದೇ ಸಂದರ್ಭದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
