
CHITRADURGA NEWS | 14 August 2025
ಚಿತ್ರದುರ್ಗ: ನಗರದ ವಿಆರ್ ಎಸ್ ಬಡಾವಣೆಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದಾಗಿದೆ. ಈ ವೇಳೆ ತಂದೆ ಶಿವನಗೌಡರ್, ತಾಯಿ ರತ್ನಪ್ರಭ ಹಾಗೂ ರೇಣುಕಾಸ್ವಾಮಿ ಪತ್ನಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಕಾನೂನಿನಲ್ಲಿ ನಮಗೆ ನಂಬಿಕೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಬಂಧನ

ರೇಣುಕಾಸ್ವಾಮಿ ತಂದೆ ಶಿವನಗೌಡರ್ ಮಾತನಾಡಿ, ಈ ದಿನ ದರ್ಶನ್ ಅವರ ಬೇಲ್ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ರದ್ದಾಗಿದೆ. ಅರೆಸ್ಟ್ ಮಾಡಲು ಆದೇಶ ಆಗಿದೆ. ನ್ಯಾಯಾಂಗದ ಮೇಲೆ ನಂಬಿಕೆ ಹೆಚ್ಚಾಗಿದೆ ಎಂದಿದ್ದಾರೆ.
ಹೈಕೋರ್ಟ್ ಬೇಲ್ ಕೊಟ್ಟಾಗ ಆತಂಕ ಆಗಿತ್ತು. ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈಗ ಕಾನೂನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವ ತೀರ್ಪು ಬಂದಿದೆ.
ಸರ್ಕಾರ ಮತ್ತು ನ್ಯಾಯಾಂಗದ ಬಗ್ಗೆ ಹೆಚ್ಚು ನಂಬಿಕೆ ಹುಟ್ಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಈ ಕೇಸ್ ನಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ಇದೆ. ನೊಂದ ಸೊಸೆ ಸಹನ ಅವರಿಗೆ ಉದ್ಯೋಗ ನೀಡಬೇಕು ಎಂದು ಶಿವನಗೌಡರ್ ಒತ್ತಾಯಿಸಿದರು.
ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಯಾರೂ ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಿದೆ. ಕಾನೂನಿನಲ್ಲಿ ಎಲ್ಲರೂ ಸಮಾನರು ಎಂದು ಗೊತ್ತಾಗಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬದ ಜತೆ ಸರ್ಕಾರವಿದೆ | ಗೃಹ ಸಚಿವ ಡಾ.ಜಿ.ಪರಮೇಶ್ವರ್
ಯಾರು ತಪ್ಪು ಮಾಡಿದ್ದಾರೊ ಅವರಿಗೆ ಶಿಕ್ಷೆಯಾಗಲಿ, ಕಾನೂನಿನಲ್ಲಿ ಯಾವ ರೀತಿಯಲ್ಲಿ ಶಿಕ್ಷೆ ಆಗಬೇಕು ಅದೇ ಶಿಕ್ಷೆ ಕೊಡಲಿ ಎಂದಿದ್ದಾರೆ.ಕೆಳ ಹಂತದ ನ್ಯಾಯಾಲಯದಲ್ಲಿ ತ್ವರಿತ ವಿಚಾರಣೆ ಆಗಬೇಕು. ಯಾರೇ ದೊಡ್ಡವರು ಆದರೂ ಕಾನೂನು ಒಂದೇ ಎಂದು ಸಾಬೀತು ಆಗಿದೆ.
ನಮಗೆ ಈ ಪ್ರಕರಣದಲ್ಲಿ ತುಂಬಾ ಆತಂಕ ಇತ್ತು, ಸುಪ್ರೀಂ ಕೋರ್ಟ್ ನಿರ್ಧಾರ ವಿಶ್ವಾಸ ಬಂದಿದೆ. ನಿತ್ತ ಎಂದಿನಂತೆ ಪೂಜೆ ಮಾಡುವಾಗ ಈ ತೀರ್ಪು ಬಂದಿದೆ. ಪೂಜೆ ಮಾಡುವ ವೇಳೆ ನನ್ನ ಪತ್ನಿ ಬೇಲ್ ವಜಾ ಆಗಿದೆ ಎಂದರು.
ನಮ್ಮ ಮನೆಯ ಪೂಜೆ ಸಲ್ಲಿಕೆ ವೇಳೆ ಅರ್ಜಿ ವಜಾ ಆಯ್ತು. ಗುರುಗಳು, ದೇವರ ಆಶಿರ್ವಾದದಿಂದ ಬೇಲ್ ಅರ್ಜಿ ವಜಾ ಆಗಿದೆ. ಎಲ್ಲಾ ಮಾಧ್ಯಮಗಳಿಗೂ ನಾನು ಧನ್ಯವಾದ ಎಂದರು.ರೇಣುಕಾಸ್ವಾಮಿ ತಾಯಿ ರತ್ನಪ್ರಭ ಮಾತನಾಡಿ, ಕೋರ್ಟಿಗೆ ತಲೆ ಬಾಗಲೇ ಬೇಕು, ನಮಗೆ ನ್ಯಾಯ ಸಿಕ್ಕಿದೆ.ಟ್ರಯಲ್ ಇನ್ನೂ ಕೂಡಾ ನಡೆಯಬೇಕಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಮಾತಿಲ್ಲ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ನಮ್ಮ ಮನೆಯವರು ಪೂಜೆ ಕೂತಾಗ ಹೇಳಿದ್ದೇನೆ. ನಮಗೆ ಇದೀಗ ಸಂತೋಷ ವಾಗಿದೆ. ಕಾನೂನಿನಲ್ಲಿ ಏನೂ ತೀರ್ಪು ಬರುತ್ತೋ ಅದಕ್ಕೆ ನಂಬಿಕೆ ಇದೆ. ಇವತ್ತಿನ ಕೋರ್ಟ್ ತೀರ್ಪು ನಂಬಿಕೆ ಬಂದಿದೆ ಎಂದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
