
CHITRADURGA NEWS | 16 AUGUST 2025
ಚಿತ್ರದುರ್ಗ: ಉಳುವವೇ ಭೂಮಿ ಒಡೆಯ ಎಂಬ ಮಾದರಿಯಲ್ಲಿ, ಸರ್ಕಾರ ವಾಸಿಸುವವನೇ ಮನೆ ಒಡೆಯ ಎಂಬ ಪರಿಕಲ್ಪನೆ ರೂಪಿಸಿ ಗೊಲ್ಲರಹಟ್ಟಿಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆ ನೀಡಿ, ಅಲ್ಲಿ ವಾಸಿಸುವ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಕಬೀರಾನಂದಾಶ್ರಮದಲ್ಲಿ ಕೃಷ್ಣ ಜನ್ಮಾಷ್ಠಮಿ | ಕೃಷ್ಣ, ರಾಧೆ ವೇಷ ಧರಿಸಿ ಮಿಂಚಿದ ಪುಟಾಣಿ ಮಕ್ಕಳು
ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಅಖಿಲ ಭಾರತ ಯಾದವ ಮಹಾಸಂಸ್ಥಾನ ಸುಕ್ಷೇತ್ರ ಗೊಲ್ಲಗಿರಿಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಜನವಸತಿ ಇರುವ 296 ಗ್ರಾಮಗಳಿಗೆ ಕಂದಾಯ ಗ್ರಾಮದ ಮಾನ್ಯತೆ ನೀಡಲಾಗಿದೆ. ಇವುಗಳಲ್ಲಿ ವಾಸವಿದ್ದ 6,384 ಕುಟುಂಬಗಳಿಗೆ ಹಕ್ಕುಪತ್ರ ಸಹ ನೀಡಲಾಗಿದೆ. ಜನರು ಖಾಸಗಿ ಅಥವಾ ಸರ್ಕಾರಿ ಜಾಗದಲ್ಲಿ ಬಹುದಿನಗಳಿಂದ ವಾಸವಿದ್ದರೆ ಅಂತಹ ಸ್ಥಳಗಳನ್ನು ಗುರುತಿಸಿ, ತಹಶೀಲ್ದಾರ್ ಹೆಸರಿಗೆ ಮೊದಲು ನೊಂದಣಿ ಮಾಡಲಾಗುವುದು. ತದ ನಂತರ ತಹಶೀಲ್ದಾರರು ಸಂಬಂದ ಪಟ್ಟವರಿಗೆ ಅವರ ಸ್ವತ್ತುಗಳನ್ನು ನೊಂದಣಿ ಮಾಡಿಕೊಡುತ್ತಾರೆ.
ಸರ್ಕಾರ ಕೇವಲ ಹಕ್ಕುಪತ್ರ ನೀಡದೇ, ಫಲಾನುಭವಿಗಳ ಹೆಸರಿನಲ್ಲಿ ನೇರವಾಗಿ ಇ-ಸ್ವತ್ತನ್ನು ಸೃಜಿಸಿ ಕೊಡುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಇ-ಸ್ವತ್ತನ್ನು ವಿತರಣೆ ಕಾರ್ಯ ಪ್ರಗತಿಯಲ್ಲಿದೆ. ಮುಂದುವರಿದು 190 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಗುರುತಿಸಲಾಗಿದೆ. 2026 ರಲ್ಲಿ ದೇಶಾದ್ಯಂತ ಜನಗಣತಿ ನಡೆಯಲಿದ್ದು, ಅದಕ್ಕೂ ಮುನ್ನವೇ ಇ ಸ್ವತ್ತು ವಿತರಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಉತ್ತಮ ಅರೋಗ್ಯವಂತರೆ ಶ್ರೀಮಂತರು | MLC ಕೆ.ಎಸ್.ನವೀನ್
ಗೊಲ್ಲ ಸಮುದಾಯದವರದು ನೆಲ ಮೂಲದ ಸಂಸ್ಕøತಿಯಾಗಿದೆ. ಕೃಷಿ ಹಾಗೂ ಪಶುಪಾಲನೆಯ ವೃತ್ತಿ ಮಾಡುತ್ತಾ ಶ್ರಮ ಜೀವಿಗಳಾಗಿದ್ದಾರೆ. ಇದರೊಂದಿಗೆ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರ ವಿದ್ಯಾರ್ಥಿನಿಲಯ, ವಸತಿ ಶಾಲೆಗಳನ್ನು ತೆರೆದಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು.
ಮೂಡನಂಬಿಕೆಗಳನ್ನು ಕೈ ಬಿಡಬೇಕು. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾದವಾಗಿದೆ. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡಬಾರದು. ಪ್ರತಿಯೊಬ್ಬರು ಭಗವದ್ಗೀತೆ ಓದುವ ಮೂಲಕ ಶ್ರೀ ಕೃಷ್ಣನ ಬೋಧನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಯಾದವ ಮಹಾಸಂಸ್ಥಾನ ಮಠದ ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮಿ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿ ಮಾತನಾಡಿ, ಕೃಷ್ಣ ಪರಮಾತ್ಮ ಎಲ್ಲರಿಗೂ ಗುರು, ಕೇವಲ ಯಾದವ ಜನಾಂಗಕ್ಕೆ ಸೀಮಿತವಲ್ಲ. ಇಂತಹ ಕೃಷ್ಣನಿಗೆ ಜಾತಿ ಬಂಧನದ ಸಂಕೋಲೆಯನ್ನು ತೊಡಿಸುವುದು ತರವಲ್ಲ.
ನ್ಯಾಯಾಲಯಗಳಲ್ಲಿ ಇಂದಿಗೂ ಭಗವದ್ಗೀತೆ ಮೇಲೆ ಕೈ ಇರಿಸಿ ಪ್ರಮಾಣ ಮಾಡಿಸುತ್ತಾರೆ. ಕೃಷ್ಣ ಹಾಗೂ ಬಸವಣ್ಣವರ ತತ್ವಗಳಲ್ಲಿ ಸಾಮ್ಯತೆ ಇದೆ. ಎರಡರಲ್ಲೂ ವಿಧವೆ ಎನ್ನುವ ಪರಿಕಲ್ಪನೆ ಇಲ್ಲ. ಮೂಹೂರ್ತ ನೋಡಿ ಮದುವೆ ಶುಭ ಕಾರ್ಯಗಳನ್ನು ಆಯೋಜಿಸುವುದಿಲ್ಲ. ಭಗವಂತ ಅನುಕ್ಷಣ ನಮ್ಮೊಂದಿಗೆ ಇರುತ್ತಾನೆ. ಭಕ್ತಿಗೆ ಭಗವಂತ ಒಲಿಯುತ್ತಾನೆ ಎನ್ನುವುದನ್ನು ಕೃಷ್ಣ ತತ್ವ ಸಾರುತ್ತದೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 16 | ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಮಾಜಿ ಶಾಸಕ ಎಸ್.ಕೆ.ಬಸವರಾಜ್, ಮಾಜಿ ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಕೆ.ಡಿ.ಪಿ ಸದಸ್ಯ ಕೆ.ಸಿ.ನಾಗರಾಜ್ ಮಾತನಾಡಿದರು.ಸಾಹಿತಿ ಹೆಚ್.ಆನಂದ್ ಕುಮಾರ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ತಿಪ್ಪೆಸ್ವಾಮಿ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಮುಖಂಡರಾದ ಲಿಂಗಾರೆಡ್ಡಿ, ಕವರಪ್ಪ ಸೇರಿದಂತೆ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ಸ್ವಾಗತಿಸಿದರು. ಆಯೋತೋಳ ಮಾರುತೇಶ್ ಮತ್ತು ತಂಡ ಗೀತಗಾಯನ ಪ್ರಸ್ತುತ ಪಡಿಸಿದರು. ಆಕಾಶವಾಣಿಯ ಡಾ.ನವೀನ್ ಮಸ್ಕಲ್ ಕಾರ್ಯಕ್ರಮ ನಿರೂಪಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

