
CHITRADURGA NEWS | 20 AUGUST 2025
ಚಿತ್ರದುರ್ಗ: 2024-25ನೇ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 7 ಅರ್ಜಿ ಸಲ್ಲಿಸಲು ಕೊನೆಯ ದಿನ.
ಈ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ.40 ರಷ್ಟು, ಮಹಿಳೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.60 ರಷ್ಟು ಘಟಕ ವೆಚ್ಚದ ಸಹಾಯಧನ ನೀಡಲಾಗುವುದು.

ಇದನ್ನೂ ಓದಿ: ಅಡಿಕೆ ಧಾರಣೆಯ ನಾಗಾಲೋಟ | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ತಲುಪಿದ ರಾಶಿ
ಆಸಕ್ತ ಫಲಾನುಭವಿಗಳು ಸೆಪ್ಟೆಂಬರ್ 7 ರೊಳಗಾಗಿ ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಕೋರಿದೆ.
ಯೋಜನೆಗಳ ಅನುಷ್ಠಾನಕ್ಕೆ ನಿಗದಿ ಪಡಿಸಿದ ಗುರಿ ಹಾಗೂ ಮೀಸಲಾತಿ ಸೇರಿದಂತೆ ಇತರೆ ಮಾಹಿತಿಗಾಗಿ, ಚಿತ್ರದುರ್ಗ ಮತ್ತು ಮೊಳಕಾಲ್ಮೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ತುಳಸಿದಾಸ್ ಅವರ ದೂರವಾಣಿ ಸಂಖ್ಯೆ 9342187356 ಹಾಗೂ ಹಿರಿಯೂರು ತಾಲ್ಲೂಕು ಸಹಾಯಕ ನಿರ್ದೇಶಕ ಎನ್.ಮಂಜುನಾಥ್ ಅವರ ದೂರವಾಣಿ ಸಂಖ್ಯೆ 7022933310, ಚಳ್ಳಕೆರೆ ತಾಲ್ಲೂಕು ಸಹಾಯಕ ನಿರ್ದೇಶಕರಾದ ದೀಪಾಲಿ ದೂರವಾಣಿ ಸಂಖ್ಯೆ 9740900866 ಹಾಗೂ ಹೊಸದುರ್ಗ ಮತ್ತು ಹೊಳಲ್ಕೆರೆ ಮೀನುಗಾರಿಕೆ ಸಹಾಯಕ ನಿರ್ದೇಶಕ ವೆಂಕಟೇಶ್ವರ ಅವರ ದೂರವಾಣಿ ಸಂಖ್ಯೆ 9945004235 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
