
CHITRADURGA NEWS | 21 AUGUST 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯನ್ನು ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡುವ ಕೆಲಸ ನಡೆಯುತ್ತಿದೆ.
ಸದ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಶಿಕ್ಷಣ ಇಲಾಖೆ ಸುಪರ್ದಿಗೆ ಹೋಗಲಿದೆ.

ಇದನ್ನೂ ಓದಿ: ವಿದ್ಯಾರ್ಥಿನಿ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ | ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ
ಇದರಿಂದ ಚಿಕಿತ್ಸೆಗೆ ಒತ್ತಡ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ತೃತೀಯ ಹಂತದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈಗ ಇರುವ 100 ಬೆಡ್ ಆಸ್ಪತ್ರೆಯನ್ನು 200 ಬೆಡ್ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಆದೇಶಿಸಿದೆ.

ಸದ್ಯ ಮೊಲಕಾಲ್ಮೂರು ಸರ್ಕಾರಿ ಆಸ್ಪತ್ರೆ 1 ಎಕರೆ 27 ಗುಂಟೆ ಪ್ರದೇಶದಲ್ಲಿದ್ದು, ಎರಡು ಹಂತಸ್ತಿನ ಕಟ್ಟಡವಿದೆ. ಇದರ ಮೇಲೆ ಮತ್ತೆ ಕಟ್ಟಡ ಕಟ್ಟುವುದು ಸಾಧ್ಯವಿಲ್ಲ.
ಇದನ್ನೂ ಓದಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ | ಅರ್ಜಿ ಆಹ್ವಾನ
ಹೀಗಾಗಿ ಹಿಂಭಾಗದಲ್ಲಿರುವ ವಸತಿ ಗೃಹ, ಕ್ಯಾಂಟೀನ್ ತೆರವುಗೊಳಿಸಿ, ಹಳೆಯ ಕಟ್ಟಡದಿಂದ ಸಂಪರ್ಕ ತೆಗೆದುಕೊಂಡು ಹಿಂಭಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ 91.25 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಲಾಗಿದೆ.
ಇದರೊಟ್ಟಿಗೆ ಮೊಳಕಾಲ್ಮೂರು ತಹಶೀಲ್ದಾರ್ ನೀಡುವ ಜಾಗದಲ್ಲಿ ವೈದ್ಯರು, ಶುಶ್ರೂಷಕರು, ಅಡುಗೆ ಮನೆ, ಬಟ್ಟೆ ತೊಳೆಯುವ ಜಾಗವನ್ನು ನಿರ್ಮಾಣ ಮಾಡಬೇಕಿದೆ.
ಇದನ್ನೂ ಓದಿ: ಆಗಸ್ಟ್ 25 ರಿಂದ ನೀರು ಮತ್ತು ನೈರ್ಮಲ್ಯದ ಕುರಿತು ಪ್ರಬಂಧ, ಚಿತ್ರಕಲಾ ಸ್ಪರ್ಧೆ
ಒಟ್ಟಾರೆ ಮೊಳಕಾಲ್ಮೂರು ಆಸ್ಪತ್ರೆ ಮೇಲ್ದರ್ಜೆಗೇರಿಸಲು 91.25 ಕೋಟಿ ರೂ. ಇದರಲ್ಲಿ ವೈದ್ಯಕೀಯ ಉಪಕರಣಕ್ಕೆ 5.93 ಕೋಟಿ ರೂ. ಮೀಸಲಿಡಲಾಗಿದೆ.
ಮೊಳಕಾಲ್ಮೂರು ಜಿಲ್ಲಾ ಮಟ್ಟದ ಆಸ್ಪತ್ರೆಗೆ 197 ವಿವಿಧ ವೃಂದದ ಹುದ್ದೆಗಳನ್ನು ಹಾಲಿ ತಾಲೂಕು ಆಸ್ಪತ್ರೆಗೆ ಮಂಜೂರಾಗಿರುವ 85 ಹುದ್ದೆಗಳ ಜೊತೆಗೆ ಹೆಚ್ಚುವರಿಯಾಗಿ ಸೃಜಿಸಬೇಕಿದೆ. ಇದಕ್ಕಾಗಿ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಸರ್ಕಾರ ತಿಳಿಸಿದೆ. ಇಲ್ಲಿಗೆ ಜಿಲ್ಲಾ ಆಸ್ಪತ್ರೆಯಿಂದಲೂ ಹೆಚ್ಚುವರಿ 20 ಹುದ್ದೆಗಳನ್ನು ಸ್ಥಳಾಂತರಿಸಲಾಗುತ್ತದೆ.
ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿಯ ಕೊಲೆ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆ
ಎರಡು ವರ್ಷದಲ್ಲಿ ಮೊಳಕಾಲ್ಮೂರು ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸುವ ಗಡುವು ಇಟ್ಟುಕೊಳ್ಳಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
