
CHITRADURGA NEWS | 20 AUGUST 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿ ದೊಡ್ಡಸಿದ್ದವ್ವನಹಳ್ಳಿ, ಕಸವನಹಳ್ಳಿ, ಎಣ್ಣೆಗೆರೆ, ಮತ್ತು ತೋಪರಮಾಳಿಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಹೆಚ್ಚಿನ ಮಳೆಯಿಂದಾಗಿ ಈರುಳ್ಳಿ ಬೆಳೆಗೆ ಹಾನಿಯಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿನಿ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ | ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹ

ಬೆಳೆ ಹಾನಿಯಾದ ರೈತರ ಜಮೀನುಗಳಿಗೆ ತೋಟಗಾರಿಕೆ ಉಪನಿರ್ದೇಶಕ ಶರಣಬಸಪ್ಪ ಭೋಗಿ ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕ ಬಿ.ದೇವರಾಜು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈರುಳ್ಳಿ ಬೆಳೆ ಹಾನಿಯಾಗಿರುವ ರೈತರು, ಬೆಳೆ ಹಾನಿ ಹಾಗೂ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರೀಶಿಲಿಸಿರುವ ಫೋಟೋಗಳೊಂದಿಗೆ ಆಧಾರ್ ಕಾರ್ಡ್, ಎಫ್.ಐ.ಡಿ., ಪಹಣಿ, ಬ್ಯಾಂಕ್ ಪಾಸ್‍ಬುಕ್, ನಕಲು ಪ್ರತಿಯೊಂದಿಗೆ ತೋಟಗಾರಿಕೆ ಇಲಾಖೆಗೆ ಅರ್ಜಿಯನ್ನು ನೀಡಿ, ರೈತರು ಪರಿಹಾರ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
