
CHITRADURGA NEWS | 23 AUGUST 2025
ಚಿತ್ರದುರ್ಗ: ಸತ್ಯಮೇವ ಜಯತೆ. ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಎಷ್ಟೇ ಷಡ್ಯಂತ್ರ ಮಾಡಿದರೂ ಸತ್ಯ ಸಾಯುವುದಿಲ್ಲ ಎನ್ನುವುದಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಾಕ್ಷಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಇದನ್ನೂ ಓದಿ: ಗಣೇಶ ಹಬ್ಬ | ಶಾಂತಿ, ಸೌಹಾರ್ದತೆಯಿಂದ ಆಚರಿಸಿ | ಡಿಸಿ ವೆಂಕಟೇಶ್

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದುಗಳು ಮಾತ್ರವಲ್ಲದೆ ಎಲ್ಲ ಧರ್ಮದವರು ಕಳೆದ ಏಳೆಂಟು ಶತಮಾಗಳಿಂದ ಧರ್ಮಸ್ಥಳಕ್ಕೆ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುತ್ತಿದ್ದಾರೆ. ಇಂತಹ ಸ್ಥಳಕ್ಕೆ ಮಸಿ ಬಳಿಯುವ ಪ್ರಯತ್ನ ನಡೆದಿತ್ತು ಎಂದರು.
ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಅವರು ಮಾಡಿರುವ ಸೇವೆಗೆ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿದೆ. ಅವರು ಮಾಡಿರುವ ಸೇವೆಗೆ ಬೆಲೆ ಕಟ್ಟಲಾಗದು. ಭಾರತ ರತ್ನ ಕೊಟ್ಟರೂ ಕಡಿಮೆಯೇ ಎಂದು ಸುಧಾಕರ್ ಹೇಳಿದರು.
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿಯನ್ನು ಅಭಿನಂದಿಸುತ್ತೇನೆ. ಕರ್ನಾಟಕ ಪೊಲೀಸರು ಅತ್ಯಂತ ಧಕ್ಷತೆಯಿಂದ ಈ ಪ್ರಕರಣ ಬೇಧಿಸಿದ್ದಾರೆ. ಷಡ್ಯಂತ್ರ ಮಾಡಿದವರನ್ನು ಬಗ್ಗು ಬಡಿದಿದ್ದಾರೆ ಎಂದರು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಇ.ಡಿ.ವಶಕ್ಕೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದಂತೆ ಷಡ್ಯಂತ್ರ ಇರುವುದು ಈಗ ಸಾಬೀತಾಗಿದೆ ಎಂದು ಸಚಿವ ಸುಧಾಕರ್ ಹೇಳಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
