CHITRADURGA NEWS | 30 AUGUST 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸೆಪ್ಟಂಬರ್ 03 ರಂದು ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಮುಂದೂಡಲಾಗಿದೆ.
ಇದನ್ನೂ ಓದಿ: ಧರ್ಮಪುರದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಮಂಜೂರಾತಿ | ಸಚಿವ ರಾಮಲಿಂಗಾ ರೆಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಗೆ ತರುವ ಭರವಸೆ ನೀಡಿ ಹಾಗೂ ಶಿಕ್ಷಕರು ಮುಷ್ಕರಕ್ಕೆ ಹೋಗದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸಕರಾತ್ಮಕ ನಿರ್ಧಾರದ ನಿರೀಕ್ಷೆಯ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದರಿಂದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದಿರುವುದಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಚಿತ್ರದುರ್ಗ ತಾಲ್ಲೂಕು ಘಟಕದ ತಾಲ್ಲೂಕು ಅಧ್ಯಕ್ಷ ಎಸ್.ಕೆಂಚಪ್ಪ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ಆ.29 ರಂದು ನಡೆದ ಸಭೆಯಲ್ಲಿ ಶಿಕ್ಷಕರ ವಿವಿಧ ಬೇಡಿಕೆಗಳಾದ 2016ಕ್ಕಿಂತ ಮೊದಲು ನೇಮಕಾತಿ ಆದವರಿಗೆ ಪದವೀಧರ ಶಿಕ್ಷಕರೆಂದು ಸೇವಾ ಜೇಷ್ಠತೆ ನೀಡಬೇಕು.
ಇದನ್ನೂ ಓದಿ: ಅಂಬೇಡ್ಕರ್ ಅವರದ್ದು ಸಾಮಾಜಿಕ ನ್ಯಾಯದ ದೃಷ್ಠಿಕೋನ | ಕೆ.ವಿ.ಪ್ರಭಾಕರ್
ಪ್ರಾ.ಶಾ.ಶಿಕ್ಷಕರಿಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಸಿ ಅಂಡ್ ಆರ್ ತಿದ್ದುಪಡಿಯಾಗಬೇಕು. ಹಾಗೂ ಮುಖ್ಯ ಶಿಕ್ಷಕರ ಹುದ್ದೆಯಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವುದು.
ಈ ಬೇಡಿಕೆಗಳ ಬಗ್ಗೆ ರಾಜ್ಯದ ಎಲ್ಲಾ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಶಾಲಾ ಶಿಕ್ಷಣ ಇಲಾಖೆ ಸದಾ ಶಿಕ್ಷಕರೊಂದಿಗೆ ನಿಲ್ಲುತ್ತದೆ. ಈ ಎಲ್ಲಾ ಬೇಡಿಕೆಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಗೆ ತರುವ ಭರವಸೆ ನೀಡಲಾಯಿತು.
ಶಿಕ್ಷಕರು ಮುಷ್ಕರಕ್ಕೆ ಹೋಗದಂತೆ ತಿಳಿಸುತ್ತಾ, ಸಕರಾತ್ಮಕ ನಿರ್ಧಾರದ ನಿರೀಕ್ಷೆಯ ಬಗ್ಗೆ ಭರವಸೆ ವ್ಯಕ್ತಪಡಿಸಿದರು.
ಆದ್ದರಿಂದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ತಾತ್ಕಾಲಿಕವಾಗಿ ಸೆ. 03 ರಂದು ನಡೆಸಲು ತೀರ್ಮಾನಿಸಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 30 | ಹತ್ತಿ ರೇಟ್ ಎಷ್ಟಿದೆ?
ಸಭೆಯಲ್ಲಿ ಇಲಾಖಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಶ್ಮಿ ಮಹೇಶ್, ಆಯುಕ್ತರಾದ ತ್ರಿಲೋಕ ಚಂದ್ರ.ಕೆ.ವಿ, ಪ್ರಾಥಮಿಕ ಶಾಲಾ ನಿರ್ದೇಶಕರಾದ ಅನಿತ ನಜಾರೀಯ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮೂಗಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ರಾಜ್ಯ ಸಂಘದ ಗೌರವಾಧ್ಯಕ್ಷ ನಾಗೇಶ್, ರಾಜ್ಯ ಉಪಾಧ್ಯಕ್ಷ ಮಾರುತೇಶ್, ಜಿಲ್ಲಾ ಘಟಕ ಅಧ್ಯಕ್ಷ ಜಿ.ವಿ.ಮಹಂತೇಶ್, ಪ್ರಧಾನ ಕಾರ್ಯದರ್ಶಿ ಜಿ.ಟಿ.ಹನುಮಂತಪ್ಪ ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
