CHITRADURGA NEWS | 01 AUGUST 2025
ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಜಿಲ್ಲಾ ವ್ಯಾಪ್ತಿಯ ಕಾನೂನು ಪದವೀಧರರಿಗೆ ಶಿಷ್ಯ ವೇತನ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ನಾಗಪುರ ದೀಕ್ಷಾ ಭೂಮಿ ಯಾತ್ರೆ | ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 09 ಕೊನೆ ದಿನ
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ದ, ಮತ್ತು ಸಿಖ್ ವರ್ಗದ ಅರ್ಹ ಅಭ್ಯರ್ಥಿಗಳಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷದ ಒಳಗೆ ಅಭ್ಯರ್ಥಿ ಎಲ್.ಎಲ್.ಬಿ ಪದವಿ ಪೂರೈಸಿರಬೇಕು. 38 ವರ್ಷದ ಒಳಗಿದ್ದು, ಬಾರ್ ಕೌನ್ಸಿಲ್ನಲ್ಲಿ ನೊಂದಣಿಯಾಗಿರಬೇಕು.
ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 15 ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ವಕೀಲರ ಬಳಿ ತರಬೇತಿ ಪಡೆಯುತ್ತಿರುವ ಬಗ್ಗೆ ಲಿಖಿತ ರೂಪದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷಗಳಿಗೆ ಮೀರಿರಬಾರದು. ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಅವಧಿ ಮೀರಿ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳು, ಅಪೂರ್ಣ ಹಾಗೂ ತಪ್ಪು ಮಾಹಿತಿ ಹೊಂದಿರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು, ಜಿಲ್ಲಾ ವ್ಯಾಪ್ತಿಯ ಅಭ್ಯರ್ಥಿಗಳು ತರಬೇತಿಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿಯೇ ಪಡೆಯಬೇಕಾಗಿದ್ದು, ಉದ್ಯೋಗದಲ್ಲಿರುವ ನೌಕರರಿಗೆ ಅವಕಾಶ ಇರುವುದಿಲ್ಲ.
ಅರ್ಜಿ ನಮೂನೆಗಳನ್ನು, ನಗರದ ಸ್ಟೇಡಿಯಂ ರಸ್ತೆಯಲ್ಲಿ ಶ್ರೀರಾಮ ಕಾಂಪ್ಲೆಕ್ಸ್ನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235134 ಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

