By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    6 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    6 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    20 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    7 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    24 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    5 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    6 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ಸೆ.13 ರಂದು ಹಿಂದೂ ಮಹಾಗಣಪತಿ ವಿಸರ್ಜನೆ | ತುರ್ತು ಸ್ಪಂದನಾ ತಂಡ ನೇಮಕ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸೆ.13 ರಂದು ಹಿಂದೂ ಮಹಾಗಣಪತಿ ವಿಸರ್ಜನೆ | ತುರ್ತು ಸ್ಪಂದನಾ ತಂಡ ನೇಮಕ

News Desk Chitradurga News
Last updated: 2 September 2025 19:36
News Desk Chitradurga News
12 months ago
Share
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್
SHARE

CHITRADURGA NEWS | 02 SEPTEMBER 2025

ಚಿತ್ರದುರ್ಗ: ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಸೆ.13 ರಂದು ನೆರವೇರಲಿದ್ದು, ಸುಮಾರು 4 ಲಕ್ಷಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಯಾವುದೇ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತುರ್ತು ಸ್ಪಂದನಾ ತಂಡವನ್ನು ನೇಮಿಸಿ, ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಜಿಲ್ಲೆಯಲ್ಲಿ DJ ಬ್ಯಾನ್ | ಜಿಲ್ಲಾಧಿಕಾರಿ ಆದೇಶ 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆ.13 ರಂದು ನಗರಕ್ಕೆ ಸುಮಾರು 4 ಲಕ್ಷಕ್ಕೂ ಹೆಚ್ಚಿನ ಜನ ಸೇರಲಿದ್ದು, ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯ ಸುಗಮ ಹಾಗೂ ವ್ಯವಸ್ಥಿತ ರೀತಿಯಲ್ಲಿ ಜರುಗುವಂತಾಗಬೇಕು, ಯಾವುದೇ ಅವಘಡಗಳಿಗೆ ಅವಕಾಶವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.  

ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಅಗ್ನಿಶಾಮಕ, ಆರೋಗ್ಯ, ಬೆಸ್ಕಾಂ, ನಗರಸಭೆ, ಗೃಹರಕ್ಷಕದಳ ಮತ್ತಿತರ ಅಗತ್ಯ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತುರ್ತು ಸ್ಪಂದನಾ ತಂಡವನ್ನು ನೇಮಿಸಲಾಗುವುದು. ಇವರ ಜೊತೆಗೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ವಿವಿಧ ತಾಲ್ಲೂಕುಗಳ ತಹಸಿಲ್ದಾರರನ್ನು ಕೂಡ ಸಮನ್ವಯಕ್ಕಾಗಿ ನಿಯೋಜಿಸಲಾಗುವುದು.  

ಇದನ್ನೂ ಓದಿ: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ

ಯಾವುದೇ ಅವಘಡಗಳು ಸಂಭವಿಸದಂತೆ ಪೂರ್ವ ಮುನ್ನೆಚ್ಚರಿಕಾ ಕ್ರಮಗಳನ್ನು ಈ ತಂಡ ಕೈಗೊಳ್ಳಬೇಕು, ಇದರ ಜೊತೆಗೆ ಒಂದು ವೇಳೆ ಯಾವುದೇ ವಿಪತ್ತಿನ ಪರಿಸ್ಥಿತಿ ಬಂದರೂ, ನಿರ್ವಹಣೆಗೆ ಸಿದ್ಧರಿರುವ ರೀತಿ ಕಾರ್ಯ ಯೋಜನೆ ರೂಪಿಸಿಕೊಳ್ಳಬೇಕು.  

ಈಗಾಗಲೆ ಜಿಲ್ಲೆಯಲ್ಲಿ ಡಿ.ಜೆ. ಸೌಂಡ್ ಸಿಸ್ಟಂ ಅನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ನಿಗದಿತ ಡೆಸಿಬಲ್ ಸಾಮಥ್ರ್ಯಕ್ಕಿಂತ ಮೀರಿದ ಧ್ವನಿ ವರ್ಧಕಗಳ ಬಳಕೆಗೆ ಅವಕಾಶವಿಲ್ಲ, ಈ ಬಗ್ಗೆ ಪೊಲೀಸ್ ಇಲಾಖೆಯವರು ಎಚ್ಚರಿಕೆ ವಹಿಸಿ, ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು.  

ಮೆರವಣಿಗೆ ಸಾಗುವ ದಾರಿಯಲ್ಲಿ ಅಂದು ಸಂಪೂರ್ಣವಾಗಿ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗುವುದು, ಈ ನಿಟ್ಟಿನಲ್ಲಿ ಒಂದು ದಿನ ಮೊದಲೇ ಎಲ್ಲೆಡೆ ಬ್ಯಾರಿಕೇಡ್‍ಗಳನ್ನು ನಿರ್ಮಿಸಿಕೊಳ್ಳಬೇಕು. ಪ್ರವೇಶ ಹಾಗೂ ನಿರ್ಗಮನ ಪ್ರದೇಶಗಳನ್ನು ಗುರುತಿಸಿಕೊಳ್ಳಬೇಕು. ಮಾರ್ಗದಲ್ಲಿ ಸೂಕ್ತ ಸ್ಥಳಗಳಲ್ಲಿ ವಾಚಿಂಗ್ ಟವರ್‍ಗಳ ನಿರ್ಮಾಣ, ಅಗತ್ಯವಿರುವ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಕೆ ಪೂರ್ಣಗೊಳ್ಳಬೇಕು.  

ಮೆರವಣಿಗೆ ಮಾರ್ಗದಲ್ಲಿನ ಮಾಧ್ಯಮಿಕ ಶಾಲಾ ಮೈದಾನ, ಪ್ರವಾಸಿ ಮಂದಿರ, ತ.ರಾಸು ರಂಗಮಂದಿರ, ಮತ್ತಿತರ ಸರ್ಕಾರಿ ಕಟ್ಟಡಗಳನ್ನು ಗುರುತಿಸಿ, ವಶಕ್ಕೆ ಪಡೆದುಕೊಂಡಿರಬೇಕು. ಸೂಕ್ಷ್ಮ ಪ್ರದೇಶಗಳನ್ನು ಮೊದಲೇ ಗುರುತಿಸಿಕೊಂಡು, ಇಂತಹ ಸ್ಥಳಗಳಲ್ಲಿ ಪರಿಸ್ಥಿತಿ ನಿರ್ವಹಣೆಗೆ ಯೋಜನೆ ರೂಪಿಸಿಕೊಳ್ಳಬೇಕು.  

ಇದನ್ನೂ ಓದಿ: ಹಿರಿಯೂರು | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

ಅಂದು ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ವಿದ್ಯುತ್ ಸಂಪರ್ಕ ವ್ಯವಸ್ಥೆ ಪರಿಶೀಲಿಸಿಕೊಂಡು, ರಾತ್ರಿ ವೇಳೆ ಅಗತ್ಯ ಇರುವ ಕಡೆಗಳಲ್ಲಿ ಜನರೇಟರ್‍ಗಳನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಮೆರವಣಿಗೆ ಮಾರ್ಗದಲ್ಲಿನ ಎರಡೂ ಬದಿಯಲ್ಲಿ ಖಾಸಗಿ ಕಟ್ಟಡಗಳ ಮೇಲೆ ಆಯಾ ಕಟ್ಟಡ ಮಾಲೀಕರು, ಕುಟುಂಬದವರು ಮಾತ್ರ ಇರಬೇಕೆ ಹೊರತು, ಇತರೆ ಜನರು ಕಟ್ಟಡಗಳ ಮೇಲೆ ಇರುವಂತಿಲ್ಲ.  

ಒಂದು ವೇಳೆ ಯಾವುದೇ ಅವಘಡ ಸಂಭವಿಸಿದಲ್ಲಿ ಆಯಾ ಕಟ್ಟಡಗಳ ಮಾಲೀಕರನ್ನೇ ಹೊಣೆಗಾರರನ್ನಾಗಿಸಿ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅವಘಡಗಳು ಸಂಭವಿಸದಂತೆ ಬಹಳ ಎಚ್ಚರಿಕೆಯಿಂದ, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಮಾತನಾಡಿ, ವಿಸರ್ಜನಾ ಮೆರವಣಿಗೆಯಲ್ಲಿ 4 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಹೆಚ್ಚಿನ ಜನರ ದಟ್ಟಣೆಯಿಂದಾಗಿ ಕಾಲ್ತುಳಿತ, ವೈದ್ಯಕೀಯ ತುರ್ತು ಪರಿಸ್ಥಿತಿ, ವಿದ್ಯುತ್ ಅವಘಡ ಮತ್ತು ಅಗ್ನಿ ಅವಘಡಗಳು ಸೇರಿದಂತೆ ಅಹಿತಕರ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಜಿಲ್ಲಾಡಳಿತ, ತುರ್ತು ಸೇವೆಯ ಇಲಾಖೆಗಳು ಹಾಗೂ, ಸ್ವಯಂ ಸೇವಕರು, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ತಂಡಗಳ ರಚನೆ ಮಾಡಿ, ಈಗಾಗಲೇ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ.  

ಇದನ್ನೂ ಓದಿ: ಡಿವೈಡರ್ ಗೆ ಬೈಕ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ಹಿಂದೂ ಮಹಾಗಣಪತಿ ಮೆರವಣಿಗೆ ಸಾಗುವ ದಾರಿಯಲ್ಲಿನ ಪ್ರವಾಸಿ ಮಂದಿರ, ಎಸ್‍ಬಿಐ ಬ್ಯಾಂಕ್ ವೃತ್ತ, ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಕನಕ ವೃತ್ತ ಸೇರಿದಂತೆ ಅಗತ್ಯ ಇರುವ ಕಡೆಗಳಲ್ಲಿ ತಾತ್ಕಾಲಿಕ ವೈದ್ಯಕೀಯ ಸೇವೆ ಕೇಂದ್ರ ತೆರೆಯಬೇಕು, ಇಲ್ಲಿ ತುರ್ತು ನಿರ್ವಹಣೆ ಹಾಗೂ ಪ್ರಾಥಮಿಕ ಚಿಕಿತ್ಸೆ ಲಭ್ಯವಾಗುವ ರೀತಿ ಆ್ಯಂಬುಲೆನ್ಸ್ ಸಹಿತ ವೈದ್ಯರು ಹಾಗೂ ಶುಶ್ರೂಷಕರನ್ನು ನಿಯೋಜಿಸಬೇಕು, ಸಾಕಷ್ಟು ಅಗತ್ಯ ಔಷಧಿ ಲಭ್ಯವಿರಬೇಕು.  

ಬ್ಯಾರಿಕೇಡ್ ಹಾಗೂ ವಾಚ್ ಟವರ್‍ಗಳನ್ನು ಲೋಕೋಪಯೋಗಿ ಇಲಾಖೆ ಪರಿಶೀಲಿಸಿ ದೃಢೀಕರಣ ನೀಡಬೇಕು. ನಗರಸಭೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕೈಗೊಳ್ಳಬೇಕು. ಮೆರವಣಿಗೆ ಮಾರ್ಗದಲ್ಲಿ ಯಾವುದೇ ಕಟ್ಟಡ ಕಾಮಗಾರಿ ನಡೆಯುತ್ತಿದ್ದಲ್ಲಿ, ತಾತ್ಕಾಲಿವಾಗಿ ಅಲ್ಲಿನ ಕಲ್ಲು ಮತ್ತು ಮಣ್ಣನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು.  

ಚಂದ್ರವಳ್ಳಿ, ವಿಸರ್ಜನಾ ಸ್ಥಳಗಳಲ್ಲಿನ ರಸ್ತೆ ಅಕ್ಕಪಕ್ಕದ ಮರಗಳು ರಸ್ತೆಗೆ ಬಾಗುವಂತಿದ್ದಲ್ಲಿ, ರೆಂಬೆ ಕೊಂಬೆಗಳನ್ನು ತೆರವುಗೊಳಿಸಬೇಕು. ಕಡ್ಡಾಯವಾಗಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಅದರ ಅನುಷ್ಠಾನ ಸಮರ್ಪಕವಾಗಿ ಆಗಬೇಕು ಎಂದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDissolutionemergency response teamHindu MahaganapatiPolice DepartmentRecruitmentvarious department officialsಚಿತ್ರದುರ್ಗಚಿತ್ರದುರ್ಗ ನ್ಯೂಸ್ತುರ್ತು ಸ್ಪಂದನಾ ತಂಡನೇಮಕಪೊಲೀಸ್ ಇಲಾಖೆವಿವಿಧ ಇಲಾಖೆ ಅಧಿಕಾರಿಗಳುವಿಸರ್ಜನೆಹಿಂದೂ ಮಹಾಗಣಪತಿ
Share This Article
Facebook Email Print
Previous Article DJ ಜಿಲ್ಲೆಯಲ್ಲಿ DJ ಬ್ಯಾನ್ | ಜಿಲ್ಲಾಧಿಕಾರಿ ಆದೇಶ 
Next Article ಗ್ರಾಮಗಳಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಸಿ | ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
hernia
ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up