
CHITRADURGA NEWS | 03 SEPTEMBER 2025
ಚಿತ್ರದುರ್ಗ: 2025-26ನೇ ಸಾಲಿನ ಬೆಂಗಳೂರು ಗ್ರಾಮಾಂತರ ಮಟ್ಟದ ಟೇಕ್ವಾಂಡೋ ಕ್ರೀಡೆಗೆ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ಸೆ.6 ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ನಗರದ ಒನಕೆ ಓಬವ್ವ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಎಲ್ಲಾ ವಯೋಮಾನದವರು ಭಾಗವಹಿಸಬಹುದಾಗಿರುತ್ತದೆ. ಆದರೆ ಸಮವಸ್ತ್ರ ಸೇವೆಗಳಿಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: ಜಿಲ್ಲೆಯಲ್ಲಿ DJ ಬ್ಯಾನ್ | ಜಿಲ್ಲಾಧಿಕಾರಿ ಆದೇಶ
ಜಿಲ್ಲೆಯ ಸ್ಥಳೀಯ ಕ್ರೀಡಾಪಟುಗಳಿಗೆ ಅವಕಾಶವಿದ್ದು, ಸ್ಥಳೀಯ ವಾಸಿ ದೃಢೀಕರಣದ ಬಗ್ಗೆ ದಾಖಲೆ ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯಲ್ಲಿ ವಿಜೇತರಾದ ಕ್ರೀಡಾಪಟುಗಳು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ನಂಬರ್‍ಗಳನ್ನು ತಪ್ಪದೇ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಹಮ್ಮದ್ ಮುಹೀಬುಲ್ಲಾ, ವಾಲಿಬಾಲ್ ತರಬೇತುದಾರ ಮೊಬೈಲ್ ಸಂಖ್ಯೆ 9611673475 ಸಂಪರ್ಕಿಸಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
