By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    11 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    17 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    22 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    22 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    22 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    21 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    22 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    2 days ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    3 days ago
Reading: ಗಾಂಧಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ | ಜಿಪಂ ಸಿಇಓ ಡಾ.ಆಕಾಶ್ ಮಹತ್ವದ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಾಂಧಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ | ಜಿಪಂ ಸಿಇಓ ಡಾ.ಆಕಾಶ್ ಮಹತ್ವದ ಸೂಚನೆ

News Desk Chitradurga News
Last updated: 3 September 2025 19:35
News Desk Chitradurga News
12 months ago
Share
ಜಿ.ಪಂ. ಸಿಇಓ ಡಾ.ಆಕಾಶ್
SHARE

CHITRADURGA NEWS | 03 SEPTEMBER 2025

ಚಿತ್ರದುರ್ಗ: ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಸೆಪ್ಟಂಬರ್ 08 ರಂದು ಏಕಕಾಲಕ್ಕೆ ಜಿಲ್ಲೆಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ 03 ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ | ವಿದ್ಯಾರ್ಥಿಗಳ ಪ್ರತಿಭಟನೆ

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಆಯಾ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು.

ಪ್ರತಿ ವಿಭಾಗಕ್ಕೂ ಪ್ರತ್ಯೇಕವಾಗಿ ಪ್ರಥಮ- ರೂ. 3000, ದ್ವಿತೀಯ- ರೂ. 2000 ಹಾಗೂ ತೃತೀಯ- ರೂ. 1000 ನಗದು ಬಹುಮಾನ ಇರುತ್ತದೆ. ಪ್ರಥಮ ಬಹುಮಾನ ಪಡೆದ ಪ್ರಬಂಧಗಳನ್ನು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗೆ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ- ರೂ. 31,000, ದ್ವಿತೀಯ- ರೂ. 21,000 ಹಾಗು ತೃತೀಯ- 11,000 ರೂ. ಬಹುಮಾನವಿರುತ್ತದೆ.

ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ಸ್ಪರ್ಧೆಯ ಕುರಿತು ಸಾಕಷು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿ, ಅವರು ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕ್ರಮ ವಹಿಸಬೇಕು.

ಇದನ್ನೂ ಓದಿ: ಮರಣದ ನಂತರ ನೇತ್ರಾದಾನ ಮಾಡಿ ಅಂದರ ಬಾಳಿಗೆ ಬೆಳಕಾಗಿ | ಡಾ.ಅಶ್ವಿನಿ

ಪ್ರೌಢಶಾಲಾ ವಿಭಾಗದ ಸ್ಪರ್ಧೆ ವಿಷಯಗಳು ಇಂತಿದೆ. ಸ್ವಚ್ಛತೆಯ ಪಾಠ- ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ, ಗಾಂಧೀಜಿಯವರ ಸ್ವಾತಂತ್ರ್ಯದ ಕನಸು- ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿನ ವಿಷಯಗಳು ಇಂತಿವೆ. ಅಸ್ಪøಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೊರಾಟ. ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ. ಬದಲಾವಣೆ ನನ್ನಿಂದಲೇ ಆರಂಭ- ಗಾಂಧೀಜಿಯವರ ಪಾಠ. ಈ ವಿಷಯಗಳ ಪೈಕಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿಷಯಗಳು ಇಂತಿದೆ. ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ. ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್- ತತ್ವಗಳ ಹೋಲಿಕೆ. ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ-ಯುವಕರಿಗೆ ಗಾಂಧೀಜಿಯವರ ಪಾಠ. ಈ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪ್ರಬಂಧ ಸ್ಪರ್ಧೆಗೆ ನಿಬಂಧನೆಗಳನ್ನು ವಿಧಿಸಲಾಗಿದ್ದು, ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈ ಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು/ ಮೊಬೈಲ್ ಗಳ ಬಳಕೆಗೆ ಅವಕಾಶ ಇರುವುದಿಲ್ಲ. ಪ್ರಬಂಧಕಾರರ ಹೆಸರು, ತರಗತಿ, ಕಾಲೇಜು ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ವಿವರಗಳನ್ನು ಪ್ರಬಂಧದಲ್ಲಿ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.  

ಇದನ್ನೂ ಓದಿ: ಹರಿಹರ ಶಾಸಕ ಹರೀಶ್‍ ವಿರುದ್ಧ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ

ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಅತ್ಯುತ್ತಮ 03 ಪ್ರಬಂಧದ ಫಲಿತಾಂಶವನ್ನು ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರು. ಪದವಿಪೂರ್ವ ವಿಭಾಗದ ಫಲಿತಾಂಶವನ್ನು ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ವಿಭಾಗ, ಚಿತ್ರದುರ್ಗ ಇವರು ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶವನ್ನು ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು, ಚಿತ್ರದುರ್ಗ ಇವರು ಉತ್ತಮ ರೀತಿಯಲ್ಲಿ ಮೌಲ್ಯಮಾಪನ ಮಾಡಿಸಿ, ಸೆಪ್ಟಂಬರ್ 11 ರಂದು ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಪ್ರಬಂಧದ ಪ್ರತಿಗಳು, ಪ್ರಬಂಧ ಏರ್ಪಡಿಸಿದ ಫೋಟೋಗಳು ಹಾಗೂ ಪ್ರತಿ ವಿಭಾಗದಲ್ಲೂ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡ ತಾಲ್ಲೂಕುವಾರು ವಿದ್ಯಾರ್ಥಿಗಳ ಸಂಖ್ಯೆಯ ವಿವರಗಳೊಂದಿಗೆ ಜಿಲ್ಲಾ ವಾರ್ತಾಧಿಕಾರಿಗಳು, ಚಿತ್ರದುರ್ಗ ಇವರಿಗೆ ಕಡ್ಡಾಯವಾಗಿ ತಲುಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಮುತುವರ್ಜಿಯಿಂದ ವ್ಯವಸ್ಥಿತ ರೀತಿಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEssay competitionGandhiji Jayantiಗಾಂಧೀಜಿ ಜಯಂತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಬಂಧ ಸ್ಪರ್ಧೆ
Share This Article
Facebook Email Print
Previous Article ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ | ವಿದ್ಯಾರ್ಥಿಗಳ ಪ್ರತಿಭಟನೆ
Next Article ಸಹಜ ಕೃಷಿ ಆನಂದಮಯ ಜೀವನಕ್ಕೆ ದಾರಿ ಕುರಿತು ಬಬ್ಬೂರು ಕೃಷಿ ಫಾರಂನಲ್ಲಿ ತರಬೇತಿ 
Leave a Comment

Leave a Reply Cancel reply

Your email address will not be published. Required fields are marked *

ವಾಣಿವಿಲಾಸ ಸಾಗರ ಜಲಾಶಯ
ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up