
CHITRADURGA NEWS | 04 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆಗೂ ಜಿಲ್ಲೆಯಾದ್ಯಂತ ಎಲ್ಲ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಈ ದಿನಗಳಂದು ಮದ್ಯ ಮಾರಾಟ ನಿಷೇಧ | ಡಿಸಿ ಆದೇಶ

ಜಿಲ್ಲೆಯಲ್ಲಿ ಕಳೆದ ಆಗಸ್ಟ್ 27ರಂದು ಹಿಂದೂ ಬಾಂಧವರು ಒಟ್ಟು 1,744 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದಾರೆ. ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲಕ ವಿಸರ್ಜನೆ ನಡೆಸಲಿದ್ದಾರೆ ಹಾಗೂ ಸೆ.05 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು “ಈದ್ ಮಿಲಾದ್” ಹಬ್ಬವನ್ನು ಆಚರಿಸಲಿದ್ದಾರೆ.
ಈ ಸಮಯದಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದರಿಂದ ಅನ್ಯಕೋಮಿನವರ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ, ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಸೆ.15 ರವರೆಗೆ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಕಲರ್ ಪೇಪರ್ ಬ್ಲಾಸ್ಟರ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿರುತ್ತಾರೆ.
ಇದನ್ನೂ ಓದಿ: ಬೆಸ್ಕಾಂ ಇಂಜಿನಿಯರ್ ತಿಮ್ಮರಾಯಪ್ಪ ಲೋಕಾಯುಕ್ತ ಬಲೆಗೆ
ಹೀಗಾಗಿ ಸೆ. 15 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯಲಿರುವ ಗಣಪತಿಯ ಶೋಭಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಹಾಗೂ ಸೆ. 05 ರ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಕೋಮು ಸೌಹಾರ್ಧತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಕಲರ್ ಪೇಪರ್ ಬ್ಲಾಸ್ಟರ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶದಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
