
CHITRADURGA NEWS | 11 SEPTEMBER 2025
ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಿತ್ರದುರ್ಗ ನ್ಯಾಯಾಲಯ 20 ವರ್ಷಗಳ ಕಾಲ ಕಠಿಣ ಸಜೆ ಹಾಗೂ ಹತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ | ಸೆ.12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಚಳ್ಳಕೆರೆ ತಾಲೂಕು ಗಿರಿಯಮ್ಮನಹಳ್ಳಿ ಮೂಲದ 24 ವರ್ಷದ ಆರ್.ಕಾರ್ತಿಕ್ ಶಿಕ್ಷೆಗೊಳಗಾದ ಅಪರಾಧಿ.
2024 ಜೂನ್ ತಿಂಗಳಿಂದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪ್ರಕರಣ ತಳುಕು ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ರಾಜಶೇಖರ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್ ಆಪಾದಿತನಿಗೆ ಪೋಕ್ಸೋ ಕಾಯ್ದೆ ಅಡಿ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಹೊಳಲ್ಕೆರೆ | PDO ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ
ಪ್ರಕರಣದಲ್ಲಿ ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಢಳೂ ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
