
CHITRADURGA NEWS | 16 SEPTEMBER 2025
ಚಿತ್ರದುರ್ಗ: ಗರ್ಭಿಣಿ, ಬಾಣಂತಿಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸೂಚನೆ ಮೇರೆಗೆ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ರಶ್ಮಿ ಎಸ್ ಮರಡಿ ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ | ನಾಳೆ ಉದ್ಘಾಟನೆ

ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪೋಷಣ್ ಮಾಹೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಮಹಿಳೆಯರು ಮತ್ತು ಗರ್ಭಿಣಿ, ಬಾಣಂತಿಯರು ಹೆಚ್ಚು ಹೆಚ್ಚು ಹಸಿ ತರಕಾರಿ, ಸೊಪ್ಪುಗಳು ಹಾಗೂ ಹಣ್ಣುಗಳನ್ನು ಬಳಸುವುದರಿಂದ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಅಭಿನವ್ ಮಾತನಾಡಿ, ಸಮತೋಲನ ಆಹಾರ ಸೇವಿಸುವುದರಿಂದ ಆಹಾರದ ಕೊರತೆಯಿಂದ ಕಂಡುಬರುವ ರಕ್ತ ಹೀನತೆ ಬಗ್ಗೆ ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಇಂತಹ ಕಾರ್ಯಕ್ರಮಗಳು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದಲ್ಲಿ ಹೆಚ್ಚು ಪ್ರಚಾರ ಮಾಡಬಹುದು ಎಂದು ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮಂಜುಳಾ, ಅನುರಾಧ, ಅಂಗನವಾಡಿ ಕಾರ್ಯಕರ್ತರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
