
CHITRADURGA NEWS | 19 SEPTEMBER 2025
ಚಿತ್ರದುರ್ಗ: ಕುರುಬರಿಗೂ ನಾಯಕರಿಗೂ ಎತ್ತಿಕಟ್ಟುವ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಗೂಬೆ ಕೂರಿಸುವ ಕೆಲಸವಾಗುತ್ತಿರುವುದರಿಂದ ಕುರುಬ ಸಮಾಜ ಅವರಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಹೊಸದುರ್ಗ ಕೆಲ್ಲೋಡು ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಸೆ.25 ರಿಂದ ಶರಣ ಸಂಸ್ಕೃತಿ ಉತ್ಸವ | ಆಹ್ವಾನ ಪತ್ರಿಕೆ ಬಿಡುಗಡೆ
ರಂಗಯ್ಯನ ಬಾಗಿಲು ಸಮೀಪವಿರುವ ಕುರುಬರ ಹಾಸ್ಟೆಲ್‍ನಲ್ಲಿ ಶುಕ್ರವಾರ ಕರೆಯಲಾಗಿದ್ದ ತುರ್ತು ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು. ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ನಾನು ಪಾದಯಾತ್ರೆ ನಡೆಸಿದಾಗ ಅಂದಿನ ಸಚಿವ ಆರ್.ಅಶೋಕ್ ಮನವಿ ಪಡೆದು ನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದಾಗ ಕೆಲವು ಅಂಕಿ ಅಂಶಗಳು ಬೇಕೆಂದು ಹಿಂದಕ್ಕೆ ಕಳಿಸಲಾಗಿತ್ತು.
ಗುಲ್ಬರ್ಗ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಕುರುಬರ ಸಮಸ್ಯೆಗಳನ್ನು ಚರ್ಚಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದನ್ನೆ ದೊಡ್ಡ ಪ್ರಮಾದವನ್ನಾಗಿ ಮಾಡಿ ಕುರುಬರನ್ನು ಎಸ್ಟಿಗೆ ಸೇರಿಸಲು ಹುನ್ನಾರ ನಡೆಸುತ್ತಿದ್ದಾರೆಂಬ ಕೂಗು ಕೇಳಿ ಬಂದಿತು.
ಕುರುಬ ಹಾಲು ಮತಸ್ಥರೆಂದು ಸುಳ್ಳು ಜಾತಿ ಸರ್ಟಿಫಿಕೇಟ್‍ಗಳನ್ನು ತೆಗೆದುಕೊಳ್ಳುತ್ತಿದ್ದಾರೆಂಬ ಆಪಾದನೆ ನಮ್ಮ ಜನಾಂಗದ ಮೇಲಿದೆ ಎಂದರು.
ಇದನ್ನೂ ಓದಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ದುರ್ಗೋತ್ಸವ
ಕಾಂತರಾಜ್ ಆಯೋಗದ ವರದಿಯನ್ನು 60 ಪ್ರಬಲ ಶಾಸಕರುಗಳು ವಿರೋಧಿಸಿದರು. ಲಿಂಗಾಯಿತ ಸಮುದಾಯಗಳಲ್ಲಿ ಅನೇಕ ಪಂಗಡಗಳಿವೆ. ಅವರ ಸಮಸ್ಯೆಗಳನ್ನು ಸರ್ಕಾರದ ಮೇಲೆ ಹಾಕಿ ಮುಖ್ಯಮಂತ್ರಿಗಳ ತೇಜೋವಧೆ ಮಾಡಲಾಗುತ್ತಿದೆ.
ಸೆ.22 ರಿಂದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಗಣತಿಯಲ್ಲಿ ಕಡ್ಡಾಯವಾಗಿ ಕುರುಬ ಎಂದು ನಮೂದಿಸಬೇಕು. ಪರ್ಯಾಯ ಜಾತಿಗಳ ಪದನಾಮಗಳನ್ನು ಬರೆಸಬಾರದು. ಈ ಕುರಿತು ಕರಪತ್ರಗಳನ್ನು ಮುದ್ರಿಸಿ ಪ್ರತಿ ಹಳ್ಳಿಗಳಲ್ಲಿ ಹಂಚುವ ಮೂಲಕ ಕುರುಬ ಜನಾಂಗದವರಲ್ಲಿ ಜಾಗೃತಿ ಮೂಡಿಸುವಂತೆ ಹೇಳಿದರು.
ನಮ್ಮ ಮಠದಿಂದ ಕಾಗಿನೆಲೆ ಗ್ರಾಮೀಣಾಭಿವೃದ್ದಿ ಕೋ-ಆಪರೇಟಿವ್ ಸೊಸೈಟಿ ಆರಂಭಿಸುತ್ತಿದ್ದೇವೆ. ಪ್ರತಿ ತಾಲ್ಲೂಕಿನಲ್ಲಿ 150 ಷೇರು ಸಂಗ್ರಹಿಸುವ ಗುರಿಯಿದೆ.
ಮಹಿಳೆಯರಿಗೆ ಒಂದು ಕೋಟಿ ರೂ.ಗಳವರೆಗೆ ಸಾಲ ನೀಡಿ ಆರ್ಥಿಕವಾಗಿ ಸ್ವಾವಲಂಭಿಯನ್ನಾಗಿಸುವ ಉದ್ದೇಶವಿದೆ. ಇದಕ್ಕೆ ಕುರುಬ ಸಮಾಜದ ಪ್ರತಿಯೊಬ್ಬರು ಕೈಜೋಡಿಸಬೇಕು. ಜನಾಂಗದ ಮಕ್ಕಳ ಶಿಕ್ಷಣಕ್ಕೆ ಸಾಲ ನೀಡಲಾಗುವುದು. ಪ್ರತಿ ಜಿಲ್ಲೆಯಲ್ಲಿಯೂ ಹತ್ತು ಸಾವಿರ ಮಹಿಳೆಯರನ್ನು ಸಂಘಟಿಸಿ ರಾಜ್ಯದಲ್ಲಿ ಅತಿ ಎತ್ತರಕ್ಕೆ ತೆಗೆದುಕೊಂಡು ಹೋಗಬೇಕಿದೆ.
ಇದನ್ನೂ ಓದಿ: ದಸರಾ ರಜೆ ಕಡಿತ ಮಾಡಿದರೆ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಗೇಟಿಗೆ ಬೀಗ | ಪ್ರಮೋದ್ ಮುತಾಲಿಕ್
2019 ರ ಕೋವಿಡ್ ಸಂದರ್ಭದಲ್ಲಿ ಎರಡು ಸಾವಿರ ಮಹಿಳೆಯರ ಗುಂಪುಗಳನ್ನು ರಚಿಸಿ ಮೂರರಿಂದ ನಾಲ್ಕು ಕೋಟಿ ರೂ.ಗಳ ಸಾಲ ಕೊಟ್ಟಿದ್ದೇವೆ ಎಂದರು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್ ಮಾತನಾಡಿ, ಸಂಘಕ್ಕೆ ಏಳೆಂಟು ಲಕ್ಷ ರೂ.ಗಳನ್ನು ಖರ್ಚು ಮಾಡಿ ವ್ಯವಸ್ಥಿತವಾಗಿಟ್ಟಿದ್ದೇವೆ. ಸಂಘಕ್ಕೆ ಬರುವ 24 ಸಾವಿರ ರೂ. ಬಾಡಿಗೆ ಹಣ ಎಲ್ಲಿಯೂ ಪೋಲಾಗಿಲ್ಲ. ಮಾಳಪ್ಪನಹಟ್ಟಿ ಸಮೀಪ ಒಂದು ಎಕರೆ ಜಾಗವಿದೆ. ಐವತ್ತರಿಂದ ಅರವತ್ತು ಕೋಟಿ ರೂ.ಗಳ ಆಸ್ತಿಯಿದೆ.
ಹೈಟೆಕ್ ಸಮುದಾಯ ಭವನ, ಪಿ.ಜಿ. ಮಾಡಬೇಕೆಂದಿದ್ದೇವೆ. ನಾಲ್ಕೈದು ಕೋಟಿ ರೂ.ಗಳನ್ನು ಸಂಗ್ರಹಿಸಿ ಕಟ್ಟಡ ಕಟ್ಟಬೇಕಾಗಿರುವುದರಿಂದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಅನುದಾನ ಕೊಡಿಸುವಂತೆ ಸ್ವಾಮೀಜಿಯವರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: ಹೆದ್ದಾರಿಗೆ ಮತ್ತೊಂದು ಕರಡಿ ಬಲಿ
ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್, ಕುರುಬ ಸಮಾಜದ ಮುಖಂಡರುಗಳಾದ ಹೆಚ್.ಮಂಜಪ್ಪ, ಡಿ.ಉಮೇಶ್, ಲೋಕೇಶ್, ಸಜ್ಜನಕೆರೆ ರಾಜಣ್ಣ ಇವರುಗಳು ವೇದಿಕೆಯಲ್ಲಿದ್ದರು. ಕುರುಬ ಸಮಾಜದವರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
