
CHITRADURGA NEWS | 21 SEPTEMBER 2025
ಚಿತ್ರದುರ್ಗ: ವಿದ್ಯಾಬ್ಯಾಸ ಮೀರಿದ ಶಕ್ತಿ ಇರುವುದು ಕ್ರೀಡೆಗೆ. ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಪರಿಶ್ರಮವಿರಬೇಕು. ಕ್ರೀಡಾ ಸ್ಫೂರ್ತಿ ತುಂಬಿಕೊಂಡು ಶ್ರಮಪಟ್ಟರೆ ಸಾಧನೆ ಹೆಚ್ಚಾಗುತ್ತದೆ ಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ

ಮುರುಘಾ ಮಠದಿಂದ ಶರಣ ಸಂಸ್ಕೃತಿ ಉತ್ಸವಕ್ಕೆ ಪೂರ್ವಭಾವಿಯಾಗಿ ಎಸ್.ಜೆ.ಎಂ.ವಿದ್ಯಾಪೀಠದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಮುರಾ ಕಪ್-2025 ಕ್ರೀಡಾ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಈ ಬಾರಿ ಜಮುರಾ ಕಪ್ ಪಂದ್ಯಾವಳಿಯನ್ನು ವಿಶೇಷವಾಗಿ ಎಸ್.ಜೆ.ಎಂ. ವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಆಯೋಜಿಸಿರುವುದು ಶ್ಲಾಘನೀಯ. ವಿದ್ಯಾಪೀಠದಡಿ ವಿದ್ಯಾಬ್ಯಾಸ ಮಾಡುತ್ತಿರುವ ನಿಮ್ಮಗಳಿಗೆ ಈ ಸಾಲಿನಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಕ್ರೀಡಾ ಸಾಧನೆ ಮಾಡಿ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ ಕೆ ತಾಜ್ ಪೀರ್ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವವರು ಗೆಲುವಿಗೆ ಮಾತ್ರ ಶ್ರಮಿಸಬೇಡಿ. ನಿಮ್ಮ ಆರೋಗ್ಯ ಚೆನ್ನಾಗಿರಲು ಶ್ರಮಿಸಿ. ದುಶ್ಚಟಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಕ್ರೀಡಾ ಸ್ಫೂರ್ತಿ ಮೆರೆದು ಒಳ್ಳೆಯ ಕ್ರೀಡಾಪಟುಗಳಾಗಿ ನಾಡಿಗೆ ಕೀರ್ತಿ ತನ್ನಿ ಎಂದು ತಿಳಿಸಿದರು.
ಡಾ.ಬಸವಕುಮಾರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಇದನ್ನೂ ಓದಿ: 2.20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಗುರುಮಠಕಲ್ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ, ಶ್ರೀ ಸಿದ್ಧಬಸವ ಕಬೀರ ಸ್ವಾಮಿಗಳು, ಶ್ರೀ ಬಸವ ಮಹಾಂತ ಸ್ವಾಮಿಗಳು, ಕೊಲ್ಲಾಪುರದ ಶ್ರೀ ಶಿವಾನಂದ ಸ್ವಾಮಿಗಳು, ಶ್ರೀ ಬಸವಲಿಂಗಮೂರ್ತಿ ಶರಣರು, ಡಿಡಿಪಿಐ ಮಂಜುನಾಥ್, ನಗರಸಭೆ ಅಧ್ಯಕ್ಷೆ ಎಂ ಪಿ ಅನಿತಾ, ಡಾ,ಭರತ್ ಪಿ ಬಿ, ರಾಜೇಶ್ ಪಿ ಎಂ ಜಿ, ಎಂ.ಕೆ.ಹಟ್ಟಿ ಗ್ರಾ.ಪಂ. ಅಧ್ಯಕ್ಷ ಗಣೇಶ್, ರಮೇಶ್, ವಕೀಲರಾದ ಉಮೇಶ್, ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಲಿರುವ ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಕಬ್ಬಡಿ, ಥ್ರೋ ಬಾಲ್ ಆಟಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಪಥಸಂಚಲನ ನಡೆಸಿಕೊಟ್ಟರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
