
CHITRADURGA NEWS | 03 OCTOBER 2025
ಹಿರಿಯೂರು: ತಾಲ್ಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿಯಾಗಿ ಮಗು ಸೇರಿ ಮೂರು ಜನ ಮೃತಪಟ್ಟಿದ್ದಾರೆ.
ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಇದನ್ನೂ ಓದಿ: ವಿಕಲಚೇತನರಿಂದ ವಿವಿಧ ಯೋಜನೆಗೆ ಅರ್ಜಿ
ಮೃತರನ್ನು ಯಾದಗಿರಿ ಮೂಲದ ಮಲ್ಲಮ್ಮ (26) ಸರೋಜಮ್ಮ (25) ಎಂದು ಗುರುತಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದ್ದು, ಮಗುವಿನ ಹೆಸರು ತಿಳಿದು ಬಂದಿಲ್ಲ.
ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ನೂತನ ಭವನದಲ್ಲಿ ಅಕ್ಟೋಬರ್ 07ರಂದು ವಾಲ್ಮೀಕಿ ಜಯಂತಿ ಆಚರಣೆ
ಚಾಲಕನ ಅಜಾಗರೂಕತೆಯಿಂದ ಪಲ್ಟಿಯಾಗಿರುವ ಜಾರು, ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ.
ಐತಿಹಾಸಿಕ ಚಿತ್ರದುರ್ಗದ ಕೋಟೆ ನೋಡಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ, ಪಿಎಸ್ಐ ಅನುಸೂಯಮ್ಮ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
