By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    2 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    2 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    2 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    4 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    14 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    14 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಜಾತಿ ಗಣತಿ | ಎಚ್.ಆಂಜನೇಯ ಮನೆ ಮನೆಗೆ ಭೇಟಿ ನೀಡಿ ಜಾಗೃತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಾತಿ ಗಣತಿ | ಎಚ್.ಆಂಜನೇಯ ಮನೆ ಮನೆಗೆ ಭೇಟಿ ನೀಡಿ ಜಾಗೃತಿ

News Desk Chitradurga News
Last updated: 5 October 2025 18:11
News Desk Chitradurga News
7 months ago
Share
Caste Census, H. Anjaneya visits every house to create awareness
ಜಾತಿ ಗಣತಿ | ಎಚ್.ಆಂಜನೇಯ ಮನೆ ಮನೆಗೆ ಭೇಟಿ ನೀಡಿ ಜಾಗೃತಿ
SHARE

CHITRADURGA NEWS | 05 OCTOBER 2025

ಹೊಳಲ್ಕೆರೆ: ರಾಜ್ಯದಲ್ಲಿ ಆರಂಭವಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಾಡಿನ ಪ್ರಗತಿಗೆ ಬುನಾದಿ ಆಗಲಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು. 

ಇದನ್ನೂ ಓದಿ: ಬಾಲ ವೈಜ್ಞಾನಿಕ್ ಪ್ರದರ್ಶಿನಿ | ಚಳ್ಳಕೆರೆ ತಾಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ತಾಲೂಕಿನ ಬಿ.ದುರ್ಗದಲ್ಲಿ ಗಣತಿದಾರರೊಂದಿಗೆ ಮನೆ ಮನೆಗೆ ಭೇಟಿ ನೀಡಿದ ಬಳಿಕ ಆಯೋಜಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಯಾವ ಸಮುದಾಯ ಎಷ್ಟು ಸಂಖ್ಯೆಯಲ್ಲಿದೆ, ಅವರು ಯಾವ ಮಟ್ಟದಲ್ಲಿ ಹಿಂದುಳಿದಿದ್ದಾರೆಂಬ ಮಾಹಿತಿ ಸಂಗ್ರಹಿಸಿ, ಅವರ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಸಮೀಕ್ಷೆ ಕಾರ್ಯ ಸಹಕಾರಿ ಆಗಲಿದೆ ಎಂದರು.

ಸಮೀಕ್ಷೆ ಕುರಿತು ಅಪಸ್ವರ, ಅಸಡ್ಡೆ ಮಾತುಗಳು ನೊಂದ ಜನರ ಬದುಕಿಗೆ ಕಂಟಕವಾಗಲಿದೆ. ಆದ್ದರಿಂದ ಈ ವಿಷಯದಲ್ಲಿ ಪಕ್ಷಾತೀತವಾಗಿ ಒಗ್ಗೂಡಿ, ಬದ್ಧತೆಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕಿದೆ. ಎಲ್ಲ ಪಕ್ಷಗಳ ಕಾರ್ಯಕರ್ತರು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಲಿಂಗಾಯಿತ, ಕುಂಚಿಟಿಗ, ಗೊಲ್ಲರು, ಮಾದಿಗರು, ಕುರುಬರು, ಬ್ರಾಹ್ಮಣರು ಸೇರಿ ಎಲ್ಲ ಜಾತಿಗಳಲ್ಲೂ ಬಡವರಿದ್ದಾರೆ. ಈ ವರ್ಗದ ಜನರನ್ನು ಮುಖ್ಯವಾಹಿನಿಗೆ ತರಲು ಸಮೀಕ್ಷೆ ಬುನಾದಿ ಆಗಲಿದೆ ಎಂಬ ಸತ್ಯ ಅರಿತುಕೊಳ್ಳಬೇಕು ಎಂದರು.

ಇದನ್ನೂ ಓದಿ: ಕಥೆಗಾರ ಮೊಗಳ್ಳಿ ನಿಧನಕ್ಕೆ ಸಾಹಿತಿ ಜಡೆಕುಂಟೆ ಸಂತಾಪ

ಕುಟುAಬವೊAದರಲ್ಲಿ ಎಷ್ಟು ಜನರಿದ್ದಾರೆ, ಅವರ ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ಏನು ಹೀಗೆ ಅನೇಕ ವಿಷಯಗಳನ್ನು ಅರಿತರೇ ಮಾತ್ರ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಲು ಸಾಧ್ಯ. ಇಲ್ಲದಿದ್ದರೇ ಮೀಸಲಾತಿ, ಸರ್ಕಾರಿ ಸೌಲಭ್ಯಗಳು ಬಡ ಜನರಿಗೆ ತಲುಪಲು ಕಷ್ಟವಾಗಲಿದೆ ಎಂದು ತಿಳಿಸಿದರು.

ಸರ್ಕಾರಿ ಯೋಜನೆಗಳನ್ನು ಯಾವ ಆಧಾರದ ಮೇಲೆ ರೂಪಿಸುತ್ತೀರಿ, ಯಾವ ಸಮುದಾಯದ ಸಂಖ್ಯೆ ಎಷ್ಟು, ಅವರ ಹಿಂದುಳಿಯುವಿಕೆಗೆ ನಿಮ್ಮಲ್ಲಿ ಯಾವ ಅಂಕಿ ಅಂಶ ಇದೆ ಎಂದು ಅನೇಕ ಪ್ರಸಂಗಗಳಲ್ಲಿ ನ್ಯಾಯಾಲಯ ಕೂಡ ಸರ್ಕಾರಗಳನ್ನು ಪ್ರಶ್ನೇ ಮಾಡಿದೆ. ಇಂತಹ ಎಲ್ಲ ಪ್ರಶ್ನೇಗಳಿಗೂ ಸಮೀಕ್ಷೆ ಕಾರ್ಯ ಉತ್ತರದ ಜೊತೆಗೆ ರಾಜ್ಯದ ಸರ್ವ ಸಮುದಾಯಗಳ ಪ್ರಗತಿಗೆ ಆಧಾರವಾಗಲಿದೆ ಎಂದರು.

ಈ ವಿಷಯದಲ್ಲಿ ಯಾವುದೇ ಪಕ್ಷದ ಮುಖಂಡರು ರಾಜಕಾರಣ ಮಾಡುವುದು ತಮ್ಮದೇ ಸಮುದಾಯಕ್ಕೆ ಅನ್ಯಾಯ ಮಾಡಿದಂತೆ. ಆದ್ದರಿಂದ ರಾಜಕೀಯಕ್ಕಾಗಿ ವಿರೋಧ ಮಾಡದೆ ತಮ್ಮ ಜಾತಿಗಳಲ್ಲಿ ಸಮೀಕ್ಷೆಯಲ್ಲಿ ಸಮರ್ಥವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿದರೆ ಬಡ, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಜಾತಿಗಣತಿ ಕಾರ್ಯ ಕೈಗೊಂಡ ಹೆಗ್ಗಳಿಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಕಾಂತರಾಜ್ ಆಯೋಗದ ವರದಿ ಬಿಡುಗಡೆ ವಿಳಂಬ ಆಗಿದ್ದರಿಂದ, ಮರು ಸಮೀಕ್ಷೆ ನಡೆಸಲಾಗುತ್ತಿದೆ. 

ಇದನ್ನೂ ಓದಿ: ರುಡ್‍ಸೆಟ್ ಸಂಸ್ಥೆಯಿಂದ ಟ್ಯಾಲಿ(Tally) ತರಬೇತಿ

ಆದರೆ, ಸಮೀಕ್ಷೆ ವೇಳೆ 60 ಪ್ರಶ್ನೇಗಳಲ್ಲಿ ಕೆಲವುಗಳಿಗೆ ಕಡಿವಾಣ ಹಾಕಬಹುದಿತ್ತು. ಅದರಲ್ಲೂ ಮತದಾರರ ಚೀಟಿ, ಜನನ ಪ್ರಮಾಣ ಪತ್ರ ಕೇಳುವುದು ಅನಗತ್ಯ. ಪರಿಣಾಮ ಜನಸಂಖ್ಯೆ ಕಡಿಮೆ ದಾಖಲಾಗುವ ಆತಂಕ ಇದೆ. ಆದ್ದರಿಂದ ಆಯೋಗ ಇದನ್ನು ಗಮನಿಸಿ, ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಟಿ.ಹನುಮಂತಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್.ಶಿವಕುಮಾರ್, ಮಾಜಿ ಸದಸ್ಯ ರಂಗಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುತ್ತುಗದೂರು ರುದ್ರಪ್ಪ, ಯುವ ಘಟಕದ ಅಧ್ಯಕ್ಷ ಚೇತನಕುಮಾರ್ ಬೋರೇನಹಳ್ಳಿ, ಮುಖಂಡರಾದ ಗಿರಿಜಮ್ಮ ಬಸವರಾಜ್, ಸಾಸಲು ದೇವಣ್ಣ, ಕೆ.ಸಿ.ಪುರುಷೋತ್ತಮ್, ಹನುಮಂತಪ್ಪ ಗೋಡೆಮನೆ, ಪ್ರಕಾಶ್, ಬಸವರಾಜ್, ಸಂಗನಗುAಡಿ ಮಂಜಣ್ಣ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AwarenessCaste censusChitradurgaChitradurga newsFormer Minister H. AnjaneyaHolalkereಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಗೃತಿಜಾತಿ ಗಣತಿಮಾಜಿ ಸಚಿವ ಎಚ್.ಆಂಜನೇಯಹೊಳಲ್ಕೆರೆ
Share This Article
Facebook Email Print
Previous Article Children's Science Demonstrator , Govt School Girl National Level ಬಾಲ ವೈಜ್ಞಾನಿಕ್ ಪ್ರದರ್ಶಿನಿ | ಚಳ್ಳಕೆರೆ ತಾಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Next Article ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 6 ಜೋಡಿ ದಾಂಪತ್ಯ ಜೀವನಕ್ಕೆ ಪಾದರ್ಪಣೆ 
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up