
CHITRADURGA NEWS | 07 October 2025
ಚಿತ್ರದುರ್ಗ: ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ತನ್ನ ಪತ್ನಿಯನಗನು ಕೊಲೆ ಮಾಡಿದ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಡಲಾಗಿದೆ ಎಂಬ ಆರೋಪವಿದು.ಹಿರಿಯೂರು ತಾಲೂಕು ಕಣಜನಹಳ್ಳಿ ಗ್ರಾಮದಲ್ಲಿ ಈ ಭೀಕರ ಹತ್ಯೆ ನಡೆದಿದೆ.
ಇದನ್ನೂ ಓದಿ: ದಿನ ಭವಿಷ್ಯ | 07 ಅಕ್ಟೋಬರ್ | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆ, ಆರ್ಥಿಕ ಪ್ರಗತಿ
ಕೊಲೆಯಾದ ಮಹಿಳೆ ಸುನೀತಾ (25) ಆಕೆಯ ಪತಿ ಲಿಂಗರಾಜ್ ಮೇಲೆ ಪತ್ನಿ ಕೊಂದ ಆರೋಪಿ.ಕಳೆದ 4 ವರ್ಷಗಳ ಹಿಂದೆ ಲಿಂಗರಾಜ್ ಸುನೀತಾ ಮದುವೆ ಆಗಿದ್ದರು. ನಾಲ್ಕು ವರ್ಷಗಳಿಂದ ಮೃತ ಸುನೀತಾಗೆ ಮಕ್ಕಳಾಗಿರಲಿಲ್ಲ.
ಸುನೀತಾ ಶೀಲ ಶಂಕಿಸಿ ಪದೇ ಪದೇ ಜಗಳ ಮಾಡುತ್ತಿದ್ದ ಲಿಂಗರಾಜ್. ಅ.6 ರಂದು ಜಮೀನಿಗೆ ಕರೆದೊಯ್ದು ಕೊಲೆ ಮಾಡಿ ಸುಟ್ಟು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಕೃತ್ಯ ಎಸಗುವ ವೇಳೆ ಆರೋಪಿ ಲಿಂಗರಾಜ್ ಗೆ ಬೆಂಕಿ ಸುಟ್ಟು ಗಾಯಗಳಾಗಿವೆ.ಆರೋಪಿ ಲಿಂಗರಾಜ್ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ
ಹಿರಿಯೂರು ತಾಲೂಕು ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
