
CHITRADURGA NEWS | 11 OCTOBER 2025
ಚಿತ್ರದುರ್ಗ: ಮಹಾತ್ಮಾ ಗಾಂಧಿ ನರೇಗಾ ಯೋಜನೆ ಅಡಿ ನೋಂದಾಯಿತ, ಜಾಬ್ ಕಾರ್ಡ್ ಪಡೆದ ಕುಟುಂಬಸ್ಥರು ಇದೇ ಅಕ್ಟೋಬರ್-30 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು Face authentication ಮಾಡಲು ತಮ್ಮ ಮನೆಗಳಿಗೆ ಬಂದಾಗ ಸಹಕಾರ ಕೊಡುವುದು ಹಾಗೇ ಸಾಧ್ಯವಾದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್. ಆಕಾಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 11 | ಹತ್ತಿ ರೇಟ್ ಎಷ್ಟಿದೆ?

ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಕ್ರಿಯಾಶೀಲಾ 2,89,025 ಜಾಬ್ ಕಾರ್ಡ್ ಗಳಲ್ಲಿರುವ ಎಲ್ಲಾ ಸದಸ್ಯರುಗಳು ಇ-ಕೆವೈಸಿ ಮಾಡಿಸಬೇಕು.
ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಯಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಈ ಪ್ರಕ್ರಿಯೆಗೆ ಮುಂದಾಗಿದೆ.
ಈಗಾಗಲೇ ನಮ್ಮ ಸಿಬ್ಬಂದಿಗಳು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಇ-ಕೆವೈಸಿ ಪ್ರಕಿಯೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಪ್ರಕ್ರಿಯೆಯಲ್ಲಿ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರೂ ತಮ್ಮ ತಮ್ಮ ಜಾಬ್ ಕಾರ್ಡ್ ಗಳಿಗೆ ಇ-ಕೆವೈಸಿ ಮಾಡಿಸಿಕೊಳ್ಳುವುದು. ಇ-ಕೆವೈಸಿ ಮಾಡಿಸಿಕೊಳ್ಳದ ಜಾಬ್ ಕಾರ್ಡ್ ಗಳು ನಿಷ್ಕ್ರೀಯವಾಗುತ್ತವೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ಜರಿ ಒಳಹರಿವು | ಕೋಡಿ ಬೀಳಲು ಕ್ಷಣಗಣನೆ !
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
