
CHITRADURGA NEWS | 15 October 2025
ಚಿತ್ರದುರ್ಗ: ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ (DDPI) ಕಚೇರಿಯ ಕೆಲ ಸಿಬ್ಬಂದಿ ಗುಂಡು ಪಾರ್ಟಿ ಮಾಡಿದ ಆರೋಪದಡಿ ಐದು ಜನರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಬೈಕ್ ಅಪಘಾತ | ಇಬ್ಬರು ಸಾವು
20 ಲೀಟರ್ ಕುಡಿಯುವ ನೀರಿನ ಕ್ಯಾನ್ ಗೆ ಮದ್ಯ ಹಾಕಿ, ಸ್ವಲ್ಪ ಕುಡಿದು ನಂತರ ಅಲ್ಲಿಂದ ಕಾರಿಗೆ ಕ್ಯಾನ್ ಶಿಫ್ಟ್ ಮಾಡುವ ವೀಡಿಯೋ ವೈರಲ್ ಆಗಿತ್ತು.
ಈ ವರದಿ ತಿಳಿಯುತ್ತಿದ್ದಂತೆ ಡಿಡಿಪಿಐ ಮಂಜುನಾಥ್ ಐದು ಜನ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಶಿಕ್ಷಣ ಇಲಾಖೆ ಸಿಬ್ಬಂದಿಗಳಾದ ರವಿಕುಮಾರ್, ಗಣೇಶ್, ತಿಪ್ಪೇಸ್ವಾಮಿ, ಸ್ವಾಮಿ, ಸುನೀಲ್ ಕುಮಾರ್ ಅಮಾನತುಗೊಂಡಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಡಿಪಿಐ ಮಂಜುನಾಥ್, ಕಚೇರಿಯ ಜೀಪ್ ಶೆಡ್ ನಲ್ಲಿ ಈ ಘಟನೆ ನಡೆದಿದ್ದು, ವಾಹನ ಚಾಲಕ ರವಿ, ಡಿ ಗ್ರೂಪ್ ನೌಕರ ತಿಪ್ಪೇಸ್ವಾಮಿ, ಪ್ರಥಮ ದರ್ಜೆ ಸಹಾಯಕರಾದ (FDA) ಗಣೇಶ ಹಾಗೂ ಸ್ವಾಮಿ, ಸುಪರಿಂಟೆಂಡೆಂಟ್ ಸುನೀಲ್ ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆ | 25 ಜನರಿಗೆ 2 ದಿನ ತರಬೇತಿ
ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ಮಾಹಿತಿ ಸಲ್ಲಿಸಿದ್ದೇನೆ.ಈ ಘಟನೆ ಆಗಬಾರದಿತ್ತು, ನಮ್ಮ ಸಿಬ್ಬಂದಿ ತಪ್ಪು ಮಾಡಿದ್ದಾರೆ. ಕೃತ್ಯ ಎಸಗಿದವರ ವಿರುದ್ಧ ತುರ್ತು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


Report correct agi madi, bear alla hakirodu hot drinks adu black and white full bottel
ha ha