
CHITRADURGA NEWS | 16 OCTOBER 2025
ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚಿತ್ರದುರ್ಗ ಜಿಲ್ಲಾ ಘಟಕದ ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ನೇಮಕವಾಗಿದ್ದು, ಚುನಾವಣಾ ಕಚೇರಿ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ಇದನ್ನೂ ಓದಿ: ಕಾರ್ಯನಿರತ ಪತ್ರಕರ್ತರ ಸಂಘ | ಮತದಾರರ ಕರಡು ಪಟ್ಟಿ ಪ್ರಕಟಣೆ | ನವೆಂಬರ್ 09 ಮತದಾನ
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಓ.ಪರಮೇಶ್ವರಪ್ಪನವರು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿಯಾಗಿ ಇದುವರೆಗೂ ಕರ್ತವ್ಯನಿರ್ವಹಿಸಿದ್ದು, ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಚುನಾವಣಾ ಕರ್ತವ್ಯ ನಿರ್ವಹಿಸಲು ಇನ್ನೂ ಮುಂದೆ ಸಾಧ್ಯವಾಗದ ಕಾರಣ ಜಿಲ್ಲಾ ಚುನಾವಣಾಧಿಕಾರಿಯ ಕರ್ತವ್ಯದಿಂದ ಬಿಡುಗಡೆಗೊಳಿಸಿದರು.
2025-28ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರನ್ನು ನೇಮಕ ಮಾಡಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
