
CHITRADURGA NEWS | 17 OCTOBER 2025
ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕ್ರಮಗಳ ಕುರಿತು ಜನಜಾಗೃತಿ ಮೂಡಿಸಲು ಕಲಾ ತಂಡಗಳನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಚಿಕ್ಕಪ್ಪನಹಳ್ಳಿ ಷಣ್ಮುಖ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಬಾಲ ಗರ್ಭಿಣಿ, ಗಂಡಾಂತರ ಗರ್ಭಿಣಿ, ರಕ್ತ ಹೀನತೆ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ, ಕುಟುಂಬ ಕಲ್ಯಾಣ ವಿಧಾನ, ಸುರಕ್ಷಿತ ಗರ್ಭಪಾತ ಭ್ರೂಣ ಲಿಂಗಪತ್ತೆ ಕಾಯ್ದೆ, ಆಯುಷ್ಮಾನ್ ಭಾರತ್ ಕಾರ್ಡ್ ಹಾಗೂ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಬೀದಿ ನಾಟಕ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ರಾಷ್ಟ್ರೀಯ ಸಂಗೀತ ಮತ್ತು ಡ್ರಾಮ ಡಿವಿಜನ್ , ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಬೀದಿನಾಟಕ ಕಾರ್ಯಕ್ರಮಗಳನ್ನು ನೀಡಿ ಅನುಭವ ಹೊಂದಿರುವ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದಾಗಿದೆ.ಒಂದು ಕಲಾ ತಂಡದಲ್ಲಿ ಕನಿಷ್ಠ 8 ಕಲಾವಿದರು ಇರಬೇಕು.
ಈ ಪೈಕಿ ಇಬ್ಬರು ಮಹಿಳಾ ಕಲಾವಿದರು ಕಡ್ಡಾಯವಾಗಿರಬೇಕು. ಒಂದು ತಂಡದಲ್ಲಿ ಇರುವ ಸದಸ್ಯರು ಬೇರೊಂದು ತಂಡದಲ್ಲಿ ಭಾಗವಹಿಸುವಂತಿಲ್ಲ, ಕಲಾ ತಂಡಗಳು ನೋಂದಾಯಿತ ತಂಡವಾಗಿದ್ದು, ಚಾಲ್ತಿ ವರ್ಷದ ಆಡಿಟ್ ವರದಿ ಹಾಗೂ ನವೀಕರಣ ಹೊಂದಿರಬೇಕು.
ಇದನ್ನೂ ಓದಿ: 30 ಲಕ್ಷ ಪಡೆದು ನಕಲಿ ಚಿನ್ನ ಮಾರಿದ್ದ ಇಬ್ಬರ ಬಂಧನ | ತಳಕು ಪೊಲೀಸರ ಕಾರ್ಯಾಚರಣೆ
ಕಲಾತಂಡಗಳ ಪ್ರತಿ ಸದಸ್ಯರ ಹೆಸರು ಮತ್ತು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಸಹಿಯೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಐಇಸಿ ವಿಭಾಗಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
