
CHITRADURGA NEWS | 20 OCTOBER 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಚಿತ್ತ ಮಳೆಯು ಗುಡುಗು- ಮಿಂಚು ಸಹಿತ, ಹಲವೆಡೆ ಧಾರಾಕಾರ ಮಳೆಯಾಗಿದೆ.
ಇದನ್ನೂ ಓದಿ: ವಿವಿ ಸಾಗರ ಜಲಾಶಯ ಭರ್ತಿ | 4ನೇ ಸಲ ಕೋಡಿ ಬಿದ್ದು ಹೊಸ ದಾಖಲೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಬಳಿ ತುಂಬಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು.
ಚಿತ್ತ ಮಳೆಯ ಅಬ್ಬರಕ್ಕೆ ಕೃಷಿ ಹೊಂಡ, ಚೆಕ್ ಡ್ಯಾಂ ಗಳು ಭರ್ತಿಯಾಗಿವೆ.
ಭರ್ಜರಿ ಮಳೆಯಿಂದ ರೈತರ ಜಮೀನುಗಳಿಗೆ ನೀರು ನುಗ್ಗಿದ್ದು, ಸತತ ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಟೊಮ್ಯಾಟೊ ಬೆಳೆ ಜಲಾವೃತವಾಗಿದೆ.
ಅರಳೀಕೆರೆ ಗೊಲ್ಲರಹಟ್ಟಿ ಗ್ರಾಮದ ಮುದ್ದಣ್ಣ ತೋಟ ಜಲಾವೃತವಾಗಿದ್ದು. ಧಾರಾಕಾರವಾಗಿ ಸುರಿದ ಮಳೆಗೆ ದಾಳಿಂಬೆ, ಈರುಳ್ಳಿ ಬೆಳೆ ಹಾನಿಯಾಗಿದ್ದು, ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿನ ದೇವಸ್ಥಾನಕ್ಕೆ ನುಗ್ಗಿದ ಮಳೆ ನೀರು. ಮಳೆಯ ನೀರು ದೇವಸ್ಥಾನಕ್ಕೆ ನುಗ್ಗಿ, ದೇವಸ್ಥಾನ ಜಲಾವೃತವಾಗಿದೆ.
ಇದನ್ನೂ ಓದಿ: ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ ಅ.23ಕ್ಕೆ
ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯು, ಬರದ ನಾಡಲ್ಲಿ ಮಳೆಯ ಅಬ್ಬರಕ್ಕೆ ರೈತರಲ್ಲಿ ಮೂಡಿದ ಮಂದಹಾಸ ಮೂಡಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
