
CHITRADURGA NEWS | 25 OCTOBER 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಗೆ ಕ್ರೀಡಾಕ್ಷೇತ್ರದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಕೀರ್ತಿ ತರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
ಇದನ್ನೂ ಓದಿ: ತರಳಬಾಳು ಶ್ರೀಗಳ ಜಲಕಲ್ಯಾಣ | ಕೋಡಿ ಬಿದ್ದ ಕೆರೆ | ಮುಗಿಲು ಮುಟ್ಟಿದ ಜನರ ಸಂಭ್ರಮ

ತಾಲೂಕು ಕಸಬಾ ಹೋಬಳಿ ವ್ಯಾಪ್ತಿಯ ಚಿಕ್ಕಗೊಂಡನಹಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಎಸ್ ಮುಬಾರಕ್ ಚಿತ್ರದುರ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು ಉದ್ದ ಜಿಗಿತ-ತಟ್ಟೆ ಎಸೆತ ಕ್ರೀಡೆಗಳಲ್ಲಿ ದ್ವಿತೀಯ ಸ್ಥಾನಗಳಿಸಿ ಈಗ ಈ ಮೂರು ವಿಭಾಗಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗೆ ಅಭಿನಂದನಾ ಸಮಾರಂಭದಲ್ಲಿ ವಿದ್ಯಾರ್ಥಿಯನ್ನು ಪುರಸ್ಕರಿಸಿ ಮಾತನಾಡಿದರು.
ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ, ಸಂಸ್ಕೃತಿ, ಸಾಹಿತ್ಯ ಮತ್ತು ಸೃಜನಾತ್ಮಕ ಕಲೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಶಿಕ್ಷಕರು ಪ್ರೇರೇಪಿಸಬೇಕು ಎಂದರು.
ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಮಾತನಾಡಿ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಕರು ಹೆಚ್ಚೆಚ್ಚು ಸಹಪಠ್ಯಚಟುವಟಿಕೆಗಳಿಗೆ ಆದ್ಯತೆ ನೀಡಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ಸೂಕ್ತ ತರಬೇತಿ ನೀಡಬೇಕು ಇದರಿಂದ ಅವರು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾಡಳಿತ ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆದಿರುವ ಚಿಕ್ಕಗೊಂಡನಹಳ್ಳಿ ಶಾಲೆಯ ಎಸ್. ಮುಬಾರಕ್ ಮತ್ತು ಶಾಲಾ ಶಿಕ್ಷಕರ ಸಾಧನೆಯನ್ನು ಪ್ರಶಂಶಿಸಿ ಗೌರವಿಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಡಿಡಿಪಿಐ ಎಂ.ಆರ್.ಮಂಜುನಾಥ, ಬಿಇಒ ಗಿರಿಜಾ, ಬಿಆರ್‌ಸಿ ಇ.ಸಂಪತ್‌ಕುಮಾರ, ಮುಖ್ಯ ಶಿಕ್ಷಕ ದಿನೇಶ್ ರೆಡ್ಡಿ, ಶಿಕ್ಷಕರಾದ ಕೆ.ರೇವಣ್ಣ, ದೈಹಿಕ ಶಿಕ್ಷಣ ಶಿಕ್ಷಕ ವೀಣಾ, ಅಣ್ಣಪ್ಪ, ಚಿತ್ರದುರ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಮಿತಿಯವರು, ಗ್ರಾಮಸ್ಥರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
