
CHITRADURGA NEWS | 02 NOVEMBER 2025
ಚಿತ್ರದುರ್ಗ: ಕಾಯಕ ಗ್ರಾಮದಲ್ಲಿ ಎಲ್ಲದಕ್ಕಿಂತ ಮುಖ್ಯವಾಗಿ ನಮಗೆಲ್ಲರಿಗೂ ಇಚ್ಚಾಶಕ್ತಿ ಬಹಳ ಮುಖ್ಯವಾಗಿ ಬೇಕಾಗಿದೆ. ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಅನುದಾನ ನೀಡುತ್ತದೆ. ಸರ್ಕಾರ ನೀಡಿದ ಅನುದಾನವನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಂಡರೆ ಗ್ರಾಮ ಪಂಚಾಯಿತಿ ಸಮಗ್ರವಾಗಿ ಅಭಿವೃದ್ಧಿಯಾಗಲು ಸಹಕಾರಿಯಾಗಲಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಆಡಳಿತ ಉಪ ಕಾರ್ಯದರ್ಶಿ ಹಾಗೂ ರಾಜ್ಯಮಟ್ಟದ ನೋಡಲ್ ಅಧಿಕಾರಿ ಜಾಫರ್ ಷರೀಫ್ ಸುತಾರ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಕಲಾಶ್ರೀ ಸ್ಪರ್ಧೆ | ನೋಂದಣಿಗೆ ಸೂಚನೆ
ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮ ಪಂಚಾಯಿತಿಯ ರೇಣುಕಾಪುರ ಗ್ರಾಮದಲ್ಲಿ ಶನಿವಾರ ಗ್ರಾಮಗಳ ಸಮಗ್ರ ಪ್ರಗತಿಯ ಆಶಯ ಹೊಂದಿದ ಕಾಯಕ ಗ್ರಾಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು 2025-26ನೇ ಸಾಲಿನ ಬಜೆಟ್ ಭಾಷಣದಲ್ಲಿ ಕಾಯಕ ಗ್ರಾಮವೆಂಬ ಪರಿಕಲ್ಪನೆ ಘೋಷಿಸಿದರು. ಅದರಂತೆ ಪ್ರಗತಿಯಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಹಿರಿಯ ಅಧಿಕಾರಿಗಳು ಆಯ್ಕೆ ಮಾಡಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸುವ ಸಲುವಾಗಿ ಯೋಜನೆ ರೂಪಿಸಿ ಅಭಿವೃದ್ಧಿ ಸಾಧಿಸಲಾಗುವುದು ಎಂದರು.
ಸರ್ಕಾರದ ಆದೇಶದಂತೆ ಪಂಚಾಯತ್ ರಾಜ್ ಇಲಾಖೆಯ ಇ ಆಡಳಿತ ವಿಭಾಗವು ಸಿದ್ದಪಡಿಸಿರುವ ಗ್ರಾಮ ಪಂಚಾಯತ್ ಪರ್ಪಮೆನ್ಸ್ ರ್ಯಾಂಕಿಂಗ್‍ನಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ರಾಜ್ಯಮಟ್ಟದ ಅಧಿಕಾರಿಗಳು ಆಯ್ಕೆ ಮಾಡಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಗ್ರಾಮ ಪಂಚಾಯಿತಿ ಕಾರ್ಯ ನಿರ್ವಹಣೆ, ನಿಯಮಿತವಾಗಿ ವಿವಿಧ ಸೇವೆಗಳ ಆಯೋಜನೆ, ತೆರಿಗೆ ವಸೂಲಾತಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ
ಕಾರ್ಯಕ್ರಮದಲ್ಲಿ ರೇಣುಕಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಾನಜ್ಜ, ಸದಸ್ಯರಾದ ವೀರೇಶ, ಜಗಳೂರಪ್ಪ, ರಾಮಕ್ಕ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ದಯಾನಂದಸ್ವಾಮಿ, ಕಿರಿಯ ಅಭಿಯಂತರರಾದ ರಮ್ಯ, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನೆಯ ವ್ಯವಸ್ಥಾಪಕ ಮಂಜುನಾಥ್ ಎಸ್ ನಾಡರ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ಕೆಎಸ್‍ಆರ್‍ಡಬ್ಲ್ಯೂಎಸ್‍ಪಿ ಸಮಾಲೋಚಕ ಕಿರಣ್ ಕುಮಾರ್ ಪಾಟೇಲ್, ಗೀತಾಲಕ್ಷ್ಮೀ, ಯಲ್ಲಪ್ಪ, ರೇಣುಕಾಪುರ ಗ್ರಾಮ ಪಂಚಾಯಿತಿ ಲೆಕ್ಕ ಸಹಾಯಕ ವೀರನಾಯಕ, ಕರವಸೂಲಿಗಾರ ಗುಜ್ಜಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮಸ್ಥರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
