
CHITRADURGA NEWS | 07 NOVEMBER 2025
ಚಿತ್ರದುರ್ಗ: ಕಬ್ಬು ಬೆಳೆಗೆ ಮೂರುವರೆ ಸಾವಿರ ದರ ನಿಗಧಿಗೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಬೆಳಗಾವಿ ಜಿಲ್ಲೆಯ ರೈತರ ಪರವಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ರೈತರು ಧ್ವನಿಯೆತ್ತಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 07 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದಂತಹ ಕಬ್ಬಿನ ಬೆಳೆಗೆ ಒಂದು ಟನ್‌ಗೆ ರೂ.3500 ರೂ. ಕೊಡಬೇಕೆಂದು ಕಳೆದ ಒಂದು ವಾರದಿಂದ ಪ್ರತಿಭಟಿಸುತ್ತಿದ್ದಾರರೆ. ಸಾವಿರಾರು ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿ ದರ ನಿಗಧಿ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈತರಿತರು ಖರೀದಿಸುವ ರಸಗೊಬ್ಬರ, ಪೆಟ್ರೋಲ್, ಡಿಸೇಲ್, ಮತ್ತು ವ್ಯವಸಾಯದ ಎಲ್ಲಾ ಕೃಷಿ ಸಲಕರಣೆಗಳ ಬೆಲೆಗಳು ಹೆಚ್ಚಾಗಿವೆ. ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದಂತಾಗಿ. ರೈತರು ಸಾಲಗಾರರಾಗಿ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಚಿತ್ರದುರ್ಗ ಜಿಲ್ಲೆಯ ರೈತರು ಧರಣಿನಿರತ ರೈತರಿಗೆ ಬೆಂಬಲ ಸೂಚಿಸುತ್ತಿದ್ದು, ಸರ್ಕಾರ ನಿರ್ಲಕ್ಷ ಧೋರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಗೆಲ್ಲ. ರೈತರು ಬೆಳೆದಂತಹ ಯಾವುದೇ ಬೆಳೆಗಳು ಬೆಲೆ ಕುಸಿತವಾದಾಗ ಜಿಲ್ಲಾಡಳಿತ ರೈತರ ಮನವಿಯನ್ನು ಸ್ವೀಕರಿಸಿ ಸರ್ಕಾರಕ್ಕೆ ಕಳುಹಿಸಿ ತುರ್ತು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಮೊಳಕಾಲ್ಮೂರು | ಮಕ್ಕಳು ಸೇರಿ 3 ಮೇಲೆ ಹುಚ್ಚು ನಾಯಿ ದಾಳಿ
ಚಿತ್ರದುರ್ಗ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬೆಲೆಯು ಸಹ ಕುಸಿದಿರುವುದರಿಂದ ಕೂಡಲೇ ಸರ್ಕಾರ ಕ್ರಮ ವಹಿಸಿ ಸೂಕ್ತ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಂತೆ ರೈತರ ಮೆಕ್ಕೆಜೋಳವನ್ನು ಖರೀದಿ ಮಾಡಿ ರೈತರ ನೆರವಿಗೆ ಬರಬೇಕೆಂದು ಈ ಮೂಲಕ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಕಾರ್ಯದರ್ಶಿ ರಾಮರೆಡ್ಡಿ, ಹಳಿಯೂರ್ ಸಿದ್ದಣ್ಣ, ಕಾಂತರಾಜ್, ರವಿಕುಮಾರ್, ಈರಣ್ಣ, ಅಂಜಿನಪ್ಪ, ಮುದ್ದಾಪುರ ಮಂಜುನಾಥ್, ನಾಗಣ್ಣ, ಸಂಜೀವಪ್ಪ, ಗುರುಸಿದ್ದಪ್ಪ ನಾರಪ್ಪ, ಬಾಬುರೆಡ್ಡಿ, ಮಾರುತಿ, ಕಲ್ಲೇಶ್, ಮಂಜುನಾಥ ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
