By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    10 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    11 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    11 hours ago
    ಅರ್ಜಿ ಅಹ್ವಾನ
    ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
    20 hours ago
    Rudset Institute
    ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    28 minutes ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    23 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 day ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    22 hours ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    23 hours ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    2 days ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    3 days ago
Reading: ನಗರದಲ್ಲಿ ಅದ್ದೂರಿ ಕನಕ ಜಯಂತಿ | ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಗರದಲ್ಲಿ ಅದ್ದೂರಿ ಕನಕ ಜಯಂತಿ | ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ ಭಾಗೀ

News Desk Chitradurga News
Last updated: 8 November 2025 18:29
News Desk Chitradurga News
10 months ago
Share
ಕನಕದಾಸರ ಜಯಂತಿ ಆಚರಣೆ
SHARE

CHITRADURGA NEWS | 08 NOVEMBER 2025

ಚಿತ್ರದುರ್ಗ: ಸಂತಶ್ರೇಷ್ಠ ಭಕ್ತ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತ. ಸಾಮಾಜಿಕ ಸಮಾನತೆ, ಮಾನವ ಧರ್ಮನಿಷ್ಠೆ, ಬಹುತ್ವದ ದೈವೋಪಾಸನೆ ಮತ್ತು ನೈತಿಕ ಬದುಕಿನ ಕುರಿತು ಅವರ ಸಂದೇಶವು ಇಂದಿನ ಸಮಾಜಕ್ಕೆ ದಾರಿದೀಪ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಇದನ್ನೂ ಓದಿ: ಕುಂದು-ಕೊರತೆ ದಾಖಲಿಸಲು ನಗರಸಭೆಯಲ್ಲಿ ಸಹಾಯವಾಣಿ ಕೇಂದ್ರ

ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂತಶ್ರೇಷ್ಟ ಭಕ್ತ ಕನಕದಾಸರ ಜಯಂತಿ ಆಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಭಕ್ತಿ ಸಾಹಿತ್ಯ ಪರಂಪರೆಯಲ್ಲಿ ಕನಕದಾಸರದು ಪ್ರಮುಖ ಸ್ಥಾನ. ಪುರಂದರದಾಸರಂತೆ ಕನಕದಾಸರೂ ಮಹಾಜ್ಞಾನಿಗಳು. ಅವರು ಬರೀ ಕವಿಯಷ್ಟೆ ಆಗಿರಲಿಲ್ಲ. ಸಮಾಜ ಸುಧಾರಕ. ಪ್ರಸಿದ್ದ ಕೀರ್ತನಕಾರರು, ಜೊತೆಗೆ ಕರ್ನಾಟಕದ ಪ್ರಮುಖ ಹರಿದಾಸರು, ದಾರ್ಶನಿಕ ಹಾಗೂ ಮಾನವೀಯತೆಯ ಸಾಕಾರವಾಗಿದ್ದರು. 

ಅವರ ಕೃತಿಗಳು ಭಕ್ತಿಯ ಪರಮೋನ್ನತ ಸ್ಥಿತಿ ತೋರಿಸುವುದರ ಜೊತೆಗೆ ಅದರ ಸಾಮಾಜಿಕ ಸಮಾನತೆ, ಮಾನವೀಯ ಮೌಲ್ಯಗಳು ಮತ್ತು ದೈವಭಕ್ತಿಯ ಸಾರ್ಥಕತೆಯ ಸಂದೇಶ ಸಾರಿ ನಿಂತಿವೆ. ಇವರು ಪುನರಂದರ ದಾಸರೊಡಗೂಡಿ ಕರ್ನಾಟಕ ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು, ಈ ಹಿನ್ನೆಲೆಯಲ್ಲಿ ಕನಕದಾಸರು ಮತ್ತು ಪುರಂದರದಾಸರು ಕರ್ನಾಟಕ ಕೀರ್ತನಾ ಲೋಕದ ಅಶ್ವಿನಿ ದೇವತೆಗಳೆಂದು ಹೆಸರಾಗಿದ್ದಾರೆ ಎಂದರು.

ಇದನ್ನೂ ಓದಿ: ವಂದೆ ಮಾತರಂ ಗೀತೆಗೂ ಹೆಚ್ಚಿನ ಮಹತ್ವ ಕೊಡಿ | MLA ಎಂ.ಚಂದ್ರಪ್ಪ

ಕನಕದಾಸರು ಕೀರ್ತನಾಕಾರರೂ ಹೌದು, ಕವಿಯೂ ಹೌದು, ಕಾರಣ ಇವರ ರಚನೆಯ ಪ್ರಮುಖ ಕೃತಿಗಳಾದ ಹರಿಭಕ್ರಸಾರ, ಮೋಹನ ತರಂಗಿಣಿ, ನಳಚರಿತ್ರೆ, ರಾಮಧಾನ್ಯಚರಿತ್ರೆ, ಮೊದಲಾದವುಗಳು ಇವರ ಕಾವ್ಯ ಶಕ್ತಿಯ ಕಾಣಿಕೆಗಳು. 

ಪ್ರಮುಖವಾಗಿ ಕನಕದಾಸರು ತನ್ನ ಹರಿಭಕ್ತರ ಸಾರದ ಮೂಲಕ ನೀತಿ, ನೇಮ, ಭಕ್ತಿ, ವೈರಾಗ್ಯಳನ್ನು ಕುರಿತು ಚಿಂತಿಸಿದರೆ, ಮೋಹನ ತರಂಗಿಣಿಯಲ್ಲಿ ಕೃಷ್ಣ ಚರಿತೆಯನ್ನು ನಿರೂಪಿಸುತ್ತಲ್ಲೇ ಶೃಂಗಾರ ರಸವನ್ನು ಅಲ್ಲಿ ಅಭಿವ್ಯಕ್ತಗೊಳಿಸುತ್ತಾರೆ. ಅವರ ಕೀರ್ತನೆಗಳಲ್ಲಿ ಸಾಮಾಜಿಕ ಮೇಲು-ಕೀಲು ಎಂಬ ತಾರತಮ್ಯ ಭಾವನೆಗೆ ಸ್ಪಷ್ಟ ಉತ್ತರವಿದೆ. ಭಕ್ತಿಯ ಮೂಲಕವೇ ಸಮಾನತೆ, ಸಹೋದರತ್ವ, ದೈವಾನ್ವೇಶಣೆ ಮತ್ತು ದೈವದ ಜೊತೆ ಸಂವಾದದ ಮಾರ್ಗವನ್ನೂ ಅವರು ಭೋದಿಸಿದರು ಎಂದರು.

ಕನಕದಾಸರ ಕಾವ್ಯಭಾಷೆ ಸರಳವಾಗಿದ್ದು, ಜಾನಪದೀಯವಾಗಿದೆ. ಅದು ನೇರವಾಗಿ ಜನಮನವನ್ನು ತಲುಪುತ್ತದೆ. ಅವರ ಪದ್ಯಗಳಲ್ಲಿರುವ ಸಂಗೀತಮಯತೆ, ನಾದಮಾಧುರ್ಯ ಮತ್ತು ದಾರ್ಶನಿಕ ಸಮನ್ವಯತೆಯ ಗುಣ ಈ ಲೋಕವೇ ಮೆಚ್ಚುವಂತಹದ್ದು, ಈ ಶೈಲಿಯು ಅವರನ್ನು ನಿತ್ಯಕಾಲೀನ ಸಂತ ಕವಿಯಾಗಿ ಮನುಕುಲಕ್ಕೆ ಕಾಣಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಳಗಟ್ಟ ಸೂರ್ಯಯರಘಟ್ಟ ಸ್ವಾಮಿಯ ಎತ್ತಿನ ಜಾತ್ರೆ | ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ವಿಶೇಷ ಪೂಜೆ

ಕನಕದಾಸರ ದಾರ್ಶನಿಕ ಕವಿತ್ವದ ಮಾರ್ಗದರ್ಶನ ಸಮ ಸಮಾಜದ ಜನಪದ ಕಟ್ಟಡಕ್ಕೆ ಭದ್ರ ಬುನಾದಿ ಒದಗಿಸುತ್ತಿರಲಿ. ನಾಳಿನ ಯುವಪೀಳಿಗೆ ಹಿಂದಣ ಹೆಜ್ಜೆಯನರಿತು ಮುನ್ನಡೆಯಲಿ. ಹಾಗೇ ಮಾನವನ ಉದ್ಧರಿಸುವ ಶಕ್ತಿಯಾಗಿ ಲೋಕದ ಎಲ್ಲ ದರ್ಶನಗಳ ವಿವೇಕವು ಸಮರಸವಾಗಿ ಒಗ್ಗೂಡಬೇಕು ಇದೇ ಬಾಳಿನ ತತ್ವವೂ ಆಗಬೇಕು ಇದಾದರೇ ಕನಕದಾಸರ ಜಯಂತಿ ಆಚರಣೆ ಸಾರ್ಧಕ ಎಂದರು.

ಸಂಸದ ಗೋವಿಂದ ಎಂ ಕಾರಜೋಳ ಮಾತನಾಡಿ, ಮಹನೀಯರ ಜಯಂತಿ ಆಚರಣೆಗಳು ಆಯಾ ಸಮುದಾಯಗಳಿಗೆ ಮಾತ್ರ ಸೀಮಿತವಾಗಬಾರದು. ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಜಯಂತಿ ಆಚರಿಸುವಂತಾಗಬೇಕು. ಹಿಂದುಳಿದ ಸಮುದಾಯಗಳನ್ನು ಮೇಲೆತ್ತಲು ಶಿಕ್ಷಣದಿಂದ ಮಾತ್ರ ಸಾಧ್ಯ. ಹಾಗಾಗಿ ಎಲ್ಲ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ಹಿರಿಯ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ ನಾಯಕ ಉಪನ್ಯಾಸ ನೀಡಿ, ಮಹನೀಯರ ಜಯಂತಿ ಆಚರಣೆಗಳು ನಮ್ಮ ಆತ್ಮಾವಲೋಕನದ ಜಯಂತಿಗಳು ಆಗಬೇಕು. ಸಮುದಾಯದ ಮಹನೀಯರು ಕೊಟ್ಟಂತಹ ಕೊಡುಗೆ ಹಾಗೂ ಅಂತಹ ಮಹನೀಯರ ದಾರಿಯಲ್ಲಿ ಹೇಗೆ ನಡೆಯಲು ಸಾಧ್ಯವಾಗಲಿದೆ ಎಂಬುದನ್ನೂ ಸಹ ಯೋಚನೆ ಮಾಡಬೇಕು. ಮಹನೀಯರನ್ನು ಜಯಂತಿಗಳಾಗಿ ನೆನಪು ಮಾಡಿಕೊಳ್ಳುವುದು ಮಾತ್ರವಲ್ಲ. 

ಇದನ್ನೂ ಓದಿ: ನ.11 ರಂದು ಒನಕೆ ಓಬವ್ವ ಜಯಂತಿ | ಜಾನಪದ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ

ನಮ್ಮ ಆತ್ಮಶಕ್ತಿ, ವ್ಯಕ್ತಿತ್ವ, ಘನತೆ, ಸ್ವಾಭಿಮಾನ ಹಾಗೂ ಅವರ ಹಾದಿಗಳಲ್ಲಿ ನಡೆಯಬಹುದಾದ ರೀತಿಗಳನ್ನು ರೂಪಿಸಿಕೊಳ್ಳುವ ಕ್ರಮಗಳು ಆಗಬೇಕು ಎಂದು ಅಭಿಪ್ರಾಯಪಟ್ಟರು.

ಕನಕದಾಸರನ್ನು ಕವಿಯಾಗಿ, ಭಕ್ತನಾಗಿ, ದಾರ್ಶನಿಕವಾಗಿ, ವಿಮರ್ಶಕನಾಗಿ, ಮಾಕ್ರ್ಸ್‍ವಾದಿ ಚಿಂತಕನಾಗಿ ಹಾಗೂ ಸಮಾಜವಾದಿ ಚಿಂತಕನಾಗಿ ನೋಡಲಿಕ್ಕೆ ಸಾಧ್ಯವಿದೆ. ಆ ಸಂದರ್ಭದಲ್ಲಿಯೇ ಕನಕದಾಸರಲ್ಲಿ ವೈಚಾರಿಕಾ ಚಿಂತನೆಯನ್ನೂ ಕಾಣಬಹುದಾಗಿದೆ ಎಂದರು.

ಕುರುಬ ಸಮಾಜವನ್ನು ಎಸ್.ಟಿ. ಸೇರ್ಪಡೆ, ಕುರುಬ ಸಮುದಾಯವರಿಗೆ ಶವ ಸಂಸ್ಕಾರಕ್ಕಾಗಿ ಪ್ರತ್ಯೇಕವಾಗಿ ಜಿಲ್ಲಾ ಕೇಂದ್ರದಲ್ಲಿ 5 ಎಕರೆ ಹಾಗೂ ತಾಲ್ಲೂಕು ಕೇಂದ್ರ 2 ಎಕರೆ ಜಮೀನು ಮಂಜೂರು, ಸಮಾಜದ ಶೈಕ್ಷಣಿಕ ಚಟುವಟಿಕೆ ಉದ್ದೇಶಕ್ಕೆ ಜಿಲ್ಲೆಯ ಆರು ತಾಲ್ಲೂಕುಗಳ ಕೇಂದ್ರಸ್ಥಾನದಲ್ಲಿ ತಲಾ 5 ಎಕರೆ ಭೂಮಿಯನ್ನು ಬಡ ವಿದ್ಯಾರ್ಥಿಗಳ ಸೌಲಭ್ಯಕ್ಕಾಗಿ ಭೂಮಿಯನ್ನು ಮಂಜೂರು ಮಾಡಿ, ಈ ಭೂಮಿಯಲ್ಲಿ ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ನಿರ್ಮಿಸಿಕೊಳ್ಳಲು ಅನುವು ಮಾಡಿಕೊಡವುದು ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಮನವಿಯನ್ನು ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಬಿ.ಟಿ.ಜಗದೀಶ್ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಕುರಿ ಕಳ್ಳನ ಬಂಧನ | 9.92 ಲಕ್ಷ ಬೆಲೆ ಬಾಳುವ ಕುರಿಗಳು ವಶ

ಅದ್ದೂರಿ ಮೆರವಣಿಗೆ: ಸಂತಶ್ರೇಷ್ಟ ಕನಕದಾಸರ ಜಯಂತಿ ಅಂಗವಾಗಿ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಜಿಲ್ಲಾ ಕುರುಬರ ಸಂಘದ ಕಚೇರಿವರೆಗೆ ವಿವಿಧ ಜಾನಪದ ಕಲಾ ತಂಡಗೊಂದಿಗೆ ಕನಕದಾಸರ ಭಾವಚಿತ್ರದ ಅದ್ಧೂರಿಯಾಗಿ ಮೆರವಣಿಗೆ ನಡೆಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಕನಕಶ್ರೀ ಸೇವಾರತ್ನ ಪ್ರಶಸ್ತಿ ಪ್ರಧಾನ: 

ಜಿಲ್ಲಾ ಕುರುಬರ ಸಂಘದ ವತಿಯಿಂದ ಕಾಶಿವಿಶ್ವನಾಥ ಶೆಟ್ಟಿ, ಬಿ.ಎಸ್.ಸುರೇಶ್ ಬಾಬು, ಕೆ.ಟಿ.ಶಿವಕುಮಾರ್, ಈ.ಅಶೋಕ್, ಎನ್.ಅಶೋಕ್ ಅವರಿಗೆ ಕನಕಶ್ರೀ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು ಹಾಗೂ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ 10 ಜನ ಸಮಾಜದ ಸಾಧಕರಿಗೆ ಗೌರವ ಸಮರ್ಪಣೆ ಮಾಡಲಾಯಿತು. 

ಇದೇ ಸಂದರ್ಭದಲ್ಲಿ ತುರುವನೂರಿನ ಕೆ.ಲಿಂಗಯ್ಯ ವಿರಚಿತ ಕನಕದಾಸರ ಚರಿತ್ರೆ ಮತ್ತು ಜ್ಞಾನಾಂಮೃತಸಾರ ಕೃತಿಗಳ ಲೋಕಾರ್ಪಣೆ ನಡೆಯಿತು. ಆಯಿತೋಳು ವಿರೂಪಾಕ್ಷಪ್ಪ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

ಇದನ್ನೂ ಓದಿ: ಮೊಳಕಾಲ್ಮೂರು | ಮಕ್ಕಳು ಸೇರಿ 3 ಮೇಲೆ ಹುಚ್ಚು ನಾಯಿ ದಾಳಿ

ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಕಂಠೀರವ ಸ್ಟುಡಿಯೋ ಅಧ್ಯಕ್ಷ ಮಹೆಬೂಬ್ ಪಾಷಾ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ಕಾರ್ಯದರ್ಶಿ ಬಿ.ಟಿ.ಜಗದೀಶ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಓಂಕಾರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಡಿವೈಎಸ್‍ಪಿ ಪಿ.ಕೆ.ದಿನಕರ್, ಮುಖಂಡರಾದ ಸೋಮಶೇಖರ್, ಜಿ.ಬಿ.ವಿನಯ್ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKanakadasa Jayantiಕನಕದಾಸ ಜಯಂತಿಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಕೂದಲು ಉದುರುವುದನ್ನು ತಡೆಯಲು, ಮನೆಯಲ್ಲಿಯೇ ತಯಾರಿಸಿಕೊಳ್ಳಿ ಈ ವಿಶೇಷ ನೆಲ್ಲಿಕಾಯಿ ಎಣ್ಣೆ
Next Article Press Club Chitradurga ಪತ್ರಕರ್ತರ ಸಂಘದ ಚುನಾವಣೆ | ನಾಳೆ ಮತದಾನ | 39 ಅಭ್ಯರ್ಥಿಗಳು ಕಣದಲ್ಲಿ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
Dina Bhavishya
ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
ಮುಖ್ಯ ಸುದ್ದಿ
ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಮುಖ್ಯ ಸುದ್ದಿ
ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up