CHITRADURGA NEWS | 11 NOVEMBER 2025
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಪರುಶುರಾಂಪುರ ಗ್ರಾಮದ ಮೆಟ್ರಿಕ್ ನಂತರದ ಮತ್ತು ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಹಾಸ್ಟೇಲ್ ನಾ ಎಲ್ಲಾ ಕೊಠಡಿಗಳಿಗೆ ಮತ್ತು ಶೌಚಾಲಯಕ್ಕೆ ತೆರಳಿ ಈ ಭಾಗದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಅಲ್ಲೇ ಇದ್ದ ಸಿಬ್ಬಂದಿಗಳಿಗೆ ಸೂಚಿಸಿದರು.
ದಾಸ್ತಾನು ಕೊಠಡಿ ಮತ್ತು ಅಡುಗೆ ಕೋಣೆ ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಹಾಸ್ಟೆಲ್ ನಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರದ ಜೊತೆಗೆ ಸುಚಿತ್ವ ಮತ್ತು ರುಚಿಕರವಾದ ಆಹಾರ ಮತ್ತು ಶುದ್ಧ ಕುಡಿಯುವ ನೀರನ್ನು ನೀಡಬೇಕೆಂದು ಸೂಚಿಸಿದರು.
ವಿದ್ಯಾರ್ಥಿಗಳೊಂದಿಗೆ ಊಟ ಸವಿದು, ಸಂವಾದ ನಡೆಸಿದರು. ಹಾಸ್ಟೆಲ್ ಒಳಗೂ ಹಾಗೂ ಹೊರಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.
ಇದನ್ನೂ ಓದಿ: ಬುರುಜನಹಟ್ಟಿ ಪರಶುರಾಮ್ ಇನ್ನಿಲ್ಲ
ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳೊಂದಿಗೆ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಿ ಮುಂದಿನ ಭವಿಷ್ಯದ ಕಡೆಗೆ ಒತ್ತು ಕೊಟ್ಟು ಓದುವಂತೆ ತಿಳಿಸಿದರು. ಮೊಬೈಲ್ ಬಳಕೆ ಸಂಪೂರ್ಣವಾಗಿ ನಿಲ್ಲಿಸಿ, ವಿದ್ಯಾಭ್ಯಾಸದ ಕಡೆ ಗಮನ ನೀಡಿ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.
ಹಾಸ್ಟೆಲ್ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ:
ಪರುಶುರಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹಾಜರಾತಿ, ದಾಖಲಾತಿಗಳನ್ನು ನೋಡಿದರು ಮತ್ತು ದಾಸ್ತಾನು ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು.
ವೈದ್ಯಾಧಿಕಾರಿಗಳು ಹಾಗೂ ನರ್ಸ್ ರವರೊಂದಿಗೆ ಆಸ್ಪತ್ರೆಯ ಬಗ್ಗೆ ಮಾಹಿತಿಯನ್ನು ಪಡೆದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಮೊದಲೇ ಆದ್ಯತೆ ನೀಡಿ. ಒಳ ಮತ್ತು ಹೊರ ರೋಗಿಗಳಿಗೆ ಉತ್ತಮವಾದ ಚಿಕಿತ್ಸೆಯನ್ನು ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಶಿವಮೂರ್ತಿ ಮುರುಘಾ ಶರಣರ ಪರ ಸಿ.ವಿ.ನಾಗೇಶ್ ವಾದ ಮಂಡನೆ
ನಂತರ ಅಲ್ಲೇ ಇದ್ದ ರೋಗಿಗಳ ಆರೋಗ್ಯ ವಿಚಾರಿಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ, ಆರೋಗ್ಯದಲ್ಲಿ ಏನಾದರೂ ಏರು ಪೇರಾದಲ್ಲಿ ಸುತ್ತ ಮುತ್ತಲಿನ ಗ್ರಾಮಸ್ತರು ಈ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
