
CHITRADURGA NEWS | 11 NOVEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ವಿ.ವಿ.ಪುರ ಗ್ರಾಮ ಪಂಚಾಯಿತಿಯ ಝಾನ್ಸಿರಾಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯಿತಿ ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಶ್ರೀರಾಮ ಆತ್ಮ ಮಹಿಳಾ ಆಹಾರ ಭದ್ರತಾ ಗುಂಪಿಗೆ ಮಹಿಳಾ ಸಬಲೀಕರಣ ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿವೃದ್ಧಿಯಲ್ಲಿ ತೋರಿದ ಶ್ರೇಷ್ಠ ಕಾರ್ಯಕ್ಕಾಗಿ ರಾಜ್ಯ ಮಟ್ಟದ ಉತ್ತಮ ಸ್ವ ಸಹಾಯ ಗುಂಪಿನ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ: ಬಂಜಾರ ಸಮುದಾಯಕ್ಕೆ MLC, ಸಚಿವ ಸ್ಥಾನಕ್ಕೆ ಸೇವಾಲಾಲ್ ಸ್ವಾಮೀಜಿ ಒತ್ತಾಯ

ಕೌಶಲಾಭಿವೃದ್ಧಿ ಉದ್ಯಮಿಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಈಚೆಗೆ ಬೆಂಗಳೂರಿನ ಲಲಿತ ಅಶೋಕ್ ಹೋಟೆಲ್‍ನಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾದ ಬೆಂಗಳೂರು ಕೌಶಲ್ಯ ಶೃಂಗಸಭೆ-2025ರಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಇತರೆ ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.
ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM&NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ ಎಂಟು ಜಿಲ್ಲೆಗಳ ಸ್ವಸಹಾಯ ಗುಂಪುಗಳ ಸದಸ್ಯರನ್ನು ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ವಿವಿಧ ಅಂಗ ಸಂಸ್ಥೆಗಳ ಅತ್ಯುತ್ತಮ ಕಾರ್ಯಕ್ಕೆ ನೀಡಲಾಗುವ ಪ್ರಶಸ್ತಿಯಲ್ಲಿ ಸಂಘದ ಸದಸ್ಯರನ್ನು ಆಯ್ಕೆ ಮಾಡಿ, ಸಂಘಗಳು ಮಹಿಳಾ ಸಬಲೀಕರಣ ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿವೃದ್ಧಿಯಲ್ಲಿ ತೋರಿದ ಶ್ರೇಷ್ಠ ಕಾರ್ಯಕ್ಕಾಗಿ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಪ್ರಶಸ್ತಿ ಪಡೆದ ಸ್ವ ಸಹಾಯ ಗುಂಪಿನ ಸದಸ್ಯರಿಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಅಭಿನಂದಿಸಿ, ಇನ್ನೂ ಹೆಚ್ಚು ಸಾಧನೆ ಮಾಡುವಂತೆ ಶುಭ ಕೋರಿದರು.
ಇದನ್ನೂ ಓದಿ: ಮಕ್ಕಳ ಜೊತೆ ಹಾಸ್ಟೆಲ್ ಊಟ ಮಾಡಿದ ಜಿಪಂ ಸಿಇಒ ಡಾ.ಆಕಾಶ್
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಎನ್‍ಆರ್‍ಎಲ್‍ಎಂ ಜಿಲ್ಲಾ ಅಭಿಯಾನ ನಿರ್ವಾಹಣ ಘಟಕದ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಗುಂಪಿನ ಸದಸ್ಯರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
