
CHITRADURGA NEWS | 12 NOVEMBER 2025
ಚಿತ್ರದುರ್ಗ: ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಯಾದವ್ ಮಠದ ಶ್ರೀ ಕೃಷ್ಣಯಾದವನಂದ ಶ್ರೀಗಳು ಗೋ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಇದನ್ನೂ ಓದಿ: ವಲ್ಲಭಾಯಿ ಪಟೇಲ್ ಜನ್ಮ ದಿನಾಚರಣೆ | ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ
ನಂತರ ಮಾತನಾಡಿದ ಶ್ರೀ ಕೃಷ್ಣಯಾದವನಂದ ಶ್ರೀಗಳು, ನಮ್ಮಲ್ಲಿ ಗುಡಿ ಕೈಗಾರಿಕೆಗಳು ಹೆಚ್ಚಾಗಿ ಬೆಳಕಿಗೆ ಬರಬೇಕಿದೆ, ಇವುಗಳು ತಯಾರು ಮಾಡಿದ ಉತ್ಪನ್ನಗಳನ್ನು ನಮ್ಮ ಜನತೆ ಖರೀದಿ ಮಾಡಬೇಕು. ನಮ್ಮಲ್ಲಿ ಉತ್ಪಾದನೆಯಾಗುವ ವಸ್ತುಗಳಿಗೆ ಸರಿಯಾದ ಮಾರುಕಟ್ಟೆ ಸಿಗಬೇಕು. ಇದರ ಜೊತೆಗೆ ಬೆಲೆಯೂ ಸಹಾ ಸಿಕ್ಕಾಗ ಮಾತ್ರ ಉತ್ಪಾದಕ ಚನ್ನಾಗಿ ಇರಲು ಸಾಧ್ಯವಿದೆ.
ಜಾಗರಣ ಮಂಚ್ ಉತ್ತಮವಾದ ಕಾರ್ಯಕ್ರಮವನ್ನು ಮಾಡಿದೆ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆಗಳಿಗೆ ಸರಿಯಾದ ರೀತಿಯ ಮಾರುಕಟ್ಟೆ ಇರುವುದಿಲ್ಲ, ಇಂತಹ ಕಾರ್ಯಕ್ರಮಗಳಿಗೆ ಬರುವುದರ ಮೂಲಕ ಗ್ರಾಹಕರನ್ನು ಸೆಳೆಯುವ ಕಾರ್ಯವಾಗುತ್ತದೆ.
ಇಲ್ಲಿ ನಡೆಯುವ ಸ್ವದೇಶಿ ಮೇಳ ನಮ್ಮ ಜನರನ್ನು ಆಕರ್ಷಿಸುವ ಮೇಳವಾಗಿದೆ. ಇದರಲ್ಲಿ ಚಿತ್ರದುರ್ಗ ಜಿಲ್ಲೆಯ ಜನತೆ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಸ್ವದೇಶಿ ಮೇಳದ ಪ್ರಯೋಜನವನ್ನು ಪಡೆಯಬೇಕು.
ಮನೆಗಳಿಗೆ ಬೇಕಾದ ಅಗತ್ಯವಾದ ವಸ್ತುಗಳು ಉತ್ಪಾದಕರಿಂದ ನೇರವಾಗಿ ಗ್ರಾಹಕರನ್ನು ತಲುಪಲಿದೆ. ಇಲ್ಲಿ ಯಾವ ಮಧ್ಯವರ್ತಿಗಳಿಗೆ ಅವಕಾಶ ಇಲ್ಲ, ಸುಮಾರು 5 ದಿನಗಳ ಕಾಲ ನಡೆಯುವ ಈ ಮೇಳದ ಪ್ರಯೋಜನವನ್ನು ಪಡೆಯುವಂತೆ ಕರೆ ನೀಡಿದರು.
ಇದನ್ನೂ ಓದಿ: ಯುನಿಟ್ ಹೆಡ್‍ಕ್ವಾರ್ಟಸ್ ಕೋಟಾದಡಿ ಅಗ್ನಿವೀರ್ ನೇಮಕಾತಿ
ಸ್ವದೇಶಿ ಮೇಳದ ಸಂಯೋಜಕ ಕೆ.ಎಸ್.ನವೀನ್ ಮಾತನಾಡಿ, ದೇಸಿ ಸಂಸ್ಕೃತಿ, ದೇಸಿ ಆಟ, ಆಹಾರ, ಕ್ರೀಡೆ, ಸಾವಯವ ಕೃಷಿ, ಆಯುರ್ವೇದ ಚಿಕಿತ್ಸೆ, ದೇಸಿ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಗಳನ್ನೊಳಗೊಂಡ ಸ್ವಾವಲಂಬನೆಯ ಪರಿಕಲ್ಪನೆ ಸ್ವದೇಶಿ ಮೇಳವಾಗಿದೆ.
ಮೇಳದಲ್ಲಿ ದೇಶದ ವಿವಿಧೆಡೆಯಿಂದ ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಕರಕುಶಲಕರ್ಮಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ ಸ್ಥಳೀಯರಿಗೆ ತರಬೇತಿ, ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ.
ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ದೇಸಿ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಸ್ವದೇಶಿ ವಸ್ತುಗಳ ಉತ್ಪಾದನೆ, ಬಳಕೆ ಮಾಡುವುದರ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಮೇಳದ ಉದ್ದೇಶವಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 12 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಈ ಮೇಳ ಪೂರ್ಣ ಪ್ರಮಾಣದಲ್ಲಿ ಪರಿಸರ ಸ್ನೇಹಿಯಾಗಿದ್ದು, ಈ ಮೇಳದಲ್ಲಿ ಮಾರಾಟಗಾರರನ್ನು ಗ್ರಾಹಕರಿಗೆ ಪರಿಚಯಿಸುವ ಕಾರ್ಯವನ್ನು ಮಾಡಲಾಗುವುದು.
ಸಂಚಾಲಕರಾದ ಸೌಭಾಗ್ಯ ಬಸವರಾಜನ್ ಮಾತನಾಡಿ, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು, ರೈತರು, ಯುವ ಉದ್ಯಮಿಗಳಿಗೆ ವಿವಿಧ ರೀತಿಯ ಚಟುವಟಿಕೆ ಆಯೋಜಿಸಲಾಗಿದೆ.
ಪ್ರತಿದಿನ ಸಂಜೆ ರಾಷ್ಟ್ರ, ರಾಜ್ಯ ಮಟ್ಟದ ಹಾಗೂ ಸ್ಥಳೀಯ ಕಲಾವಿದರಿಂದ ಸಂಗೀತ, ನಾಟಕ, ಯಕ್ಷಗಾನ, ತೊಗಲು ಗೊಂಬೆಯಾಟ ನಡೆಯಲಿದೆ.
ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುವವರಿಗೆ ಆಯುರ್ವೇದ, ಪ್ರಕೃತಿ ಚಿಕಿತ್ಸೆಯ ಮಾಹಿತಿಯನ್ನೂ ನೀಡಲಾಗುತ್ತಿದೆ. ಸ್ವದೇಶಿ ಮೇಳದ ಮೂಲಕ ಐತಿಹಾಸಿಕ ಚಿತ್ರದುರ್ಗದ ಗತ ವೈಭವ ಹೆಚ್ಚಿಸಲಾಗುತ್ತಿದೆ.
ಸ್ವದೇಶಿ ವಸ್ತುಗಳ ಉತ್ಪಾದನೆ, ಬಳಕೆ ಮಾಡುವುದರ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಮೇಳದ ಉದ್ದೇಶವಾಗಿದೆ ಎಂದರು.
ಇದನ್ನೂ ಓದಿ: LIC ನಿವೃತ್ತ ಆಡಳಿತಾಧಿಕಾರಿ ಸಿದ್ಧಯ್ಯ ನಿಧನ
ಸ್ವದೇಶಿ ಮೇಳದ ಸಂಘಟಕರಾದ ಜಗದೀಶ್, ರವೀಂದ್ರ, ಸಹ ಸಂಚಾಲಕರಾದ ಸಂಪತ್ ಕುಮಾರ್, ಅನಿತ್ ಕುಮಾರ್, ವೆಂಕಟೇಶ್ ಯಾದವ್, ಯಶವಂತ, ನಾಗರಾಜ್ ಸಗಂ, ರಾಜೀವ ಲೋಚನಾ, ಸೂರ್ಯಪ್ರಕಾಶ್, ಎಸ್.ವಿರೇಶ್, ವಿಎಚ್‍ಪಿ ರುದ್ರೇಶ್, ರೀನಾ ವೀರಭದ್ರಪ್ಪ, ಬಸಮ್ಮ, ಗಾಯತ್ರಿ ಶಿವರಾಂ, ರವಿಶಂಕರ್, ಶಶಿಕಲಾ, ಇಂದಿರಾ ಶೈಲಜಾ ರೆಡ್ಡಿ ಸೇರಿದಂತೆ ಇತರರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

ಸಕಾಲದಲ್ಲಿ ಸಮೃದ್ಧ ಮಾಹಿತಿ ನೀಡುವ ನಿಮಗೆ ಧನ್ಯವಾದಗಳು 🙏