CHITRADURGA NEWS | 15 NOVEMBER 2025
ಚಿತ್ರದುರ್ಗ: ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಇದನ್ನೂ ಓದಿ: ದನಗಳಿಲ್ಲದ ಕೃಷಿಯಿಂದ ಆರೋಗ್ಯ ಉಳಿಯುವುದಿಲ್ಲ | ಪುಟ್ಟಸ್ವಾಮಿ
ಕುವೆಂಪು ವಿಶ್ವದ್ಯಾನಿಲಯ ಪ್ರಧ್ಯಾಪಕರಾದ ನೆಲ್ಲಿಕಟ್ಟೆ.ಎಸ್.ಸಿದ್ದೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರ್ನಾಟಕ ವಿಶೇಷತೆಯ ಬಗ್ಗೆ ಸವಿವರವಾಗಿ ವಿವರಿಸಿದರು. ಕನ್ನಡ ನಾಡು – ನುಡಿಯ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ಇವರು ಕರ್ನಾಟಕದ ವಚನಕಾರರು, ಕೀರ್ತನಕಾರರು, ಸಾಹಿತಿಗಳು ಹಾಗೂ ಕನ್ನಡ ಸಾಹಿತ್ಯ ಪಡೆದ ಪ್ರಶಸ್ತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಚಿತ್ರದುರ್ಗದ ಬಗ್ಗೆ ತಾವೇ ರಚಿಸಿದ ಪದ್ಯವಾದ “ನೋಡು ಬಾ ಚಿತ್ರದುರ್ಗವ” ಎಂಬ ಪದ್ಯವನ್ನು ಹೇಳಿದರು. ಜೀವನದಲ್ಲಿ ಒಮ್ಮೆಯಾದರೂ ನಮ್ಮ ಉಕ್ಕಿನ ಕೋಟೆಯಾದ ಚಿತ್ರದುರ್ಗವನ್ನು ನೋಡಬೇಕು ಎಂದು ತಿಳಿಸಿದರು. ಚಿತ್ರದುರ್ಗಕ್ಕೆ ಇದ್ದಂತಹ ಪುರಾತನ ಹೆಸರುಗಳಾದ ಚಿತ್ತಾರದುರ್ಗ, ಚಿತ್ರಕಲ್ಲುದುರ್ಗ, ಹಿಡಿಂಬ ನಗರ ಇವುಗಳ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯ ಪೋಷಕರು ಆಸೆ ಒಂದೇ ಆಗಿರುತ್ತದೆ. ಅದು ತಮ್ಮ ಮಕ್ಕಳು ಉತ್ತಮ ಪ್ರಜೆಗಳಾಗಬೇಕೆಂದು, ಅಷ್ಟೇ ಅಲ್ಲದೇ ತಮ್ಮ ಮಕ್ಕಳು ಇಂಜಿನಿಯರ್ ಅಥವಾ ವೈದ್ಯರೇ ಆಗಬೇಕು ಎಂದು ಕನಸು ಕಂಡರೆ ನಮ್ಮ ದೇಶದಲ್ಲಿ ಪ್ರಜೆಗಳೇ ಇರುವುದಿಲ್ಲ.
ಇದನ್ನೂ ಓದಿ: ಬಿರ್ಸಾ ಮುಂಡಾ ಆದಿವಾಸಿ ಬುಡಕಟ್ಟುಗಳ ಆತ್ಮಾಭಿಮಾನದ ಪ್ರತೀಕ | AC ಮೆಹಬೂಬ್ ಜಿಲಾನಿ ಖುರೇಷಿ
ಎಲ್ಲಾ ಪದವಿ ಪಡೆದಂತವರು ವಿದೇಶಕ್ಕೆ ಹೋಗಿ ನೆಲೆಸುತ್ತಾರೆ. ನಾವು ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ವಿದ್ಯೆ ಎಂಬುದು ತುಂಬಾ ಕಠಿಣವಾಗಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವು ಅತ್ಯಂತ ಮುಂದುವರೆದ ಕಾರಣ ತುಂಬ ಸುಲಭವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್‌ಗಳಿಗೆ ಹೆಚ್ಚು ದಾಸರಾಗುತ್ತಿದ್ದಾರೆ. ಅದರ ಬದಲಾಗಿ ಪ್ರತಿನಿತ್ಯ ದಿನಪತ್ರಿಕೆಯನ್ನು ಓದಿ ಇದರಿಂದ ವಿದ್ಯಾರ್ಥಿಗಳಲ್ಲಿ ಜ್ಞಾನದ ವಿಕಾಸವಾಗುತ್ತದೆ ಎಂದು ತಿಳಿಸಿದರು. ಸಾಹಿತ್ಯ, ಸಂಗೀತ, ನೃತ್ಯ, ಶಿಲ್ಪಕಲೆ ಎಲ್ಲಾ ಕ್ಷೇತ್ರಗಳಲ್ಲಿ ಚಿತ್ರದುರ್ಗ ಸಾಧನೆ ಮಾಡಿದೆ ಎಂದರು.
ಸಂಸ್ಥೆಯ ಐಸಿಎಸ್‌ಇ ಪ್ರಾಚಾರ್ಯರಾದ ಪಿ.ಬಸವರಾಜಯ್ಯ, ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಎಂ. ಪೃಥ್ವಿಶ್, ಮುಖ್ಯೋಪಾಧ್ಯಾಯರಾದ ಎನ್.ಜಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಬಿ.ವಿಜಯ ಕುಮಾರ್ ಮಾತನಾಡಿದರು.
2024-25ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ 125ಕ್ಕೆ 125 ಅಂಕಗಳಿಸಿದ 9 ವಿದ್ಯಾರ್ಥಿಗಳಿಗೆ ಕನ್ನಡ ಮಾಣಿಕ್ಯ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಸಸಿ ನೆಟ್ಟು ಶ್ರದ್ಧಾಂಜಲಿ ಸೂಚನೆ
ನೆಲ್ಲಿಕಟ್ಟೆ ಎಸ್ ಸಿದ್ದೇಶ್, ಚಿಕ್ಕಪ್ಪನಹಳ್ಳಿ ಷಣ್ಮುಖ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಕರಿಗೆ ಆಯೋಜಿಸಿದ್ದ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕ, ಶಿಕ್ಷಕಿಯರಿಗೆ ಬಹುಮಾನ ವಿತರಿಸಲಾಯಿತು,
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಪಿ.ಸಿ.ಸುನೀತಾ, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
